ದೇಶಸೇವೆಯನ್ನೇ ಉಸಿರಾಗಿಸಿಕೊಂಡಿರುವ ಸಂಘಟನೆ ಆರ್ ಎಸ್‍ಎಸ್ : ಕಂದಾಯ ಸಚಿವ ಆರ್ ಅಶೋಕ

Wednesday, October 6th, 2021
R Ashoka

ಬೆಂಗಳೂರು  : “ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಆರ್ ಎಸ್ ಎಸ್ ಅನ್ನು ಟೀಕಿಸುವುದು ತಪ್ಪು. ಎಲ್ಲವನ್ನು ತಿಳಿದುಕೊಂಡು ಮಾತನಾಡಬೇಕು”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಆರೆಸ್ಸೆಸ್ ಒಂದು ದೇಶಭಕ್ತ ಸಂಘಟನೆ. ಸೇವೆಯೆ ಅದರ ಮೂಲಮಂತ್ರ. ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಬಂಧಿತರಾದವರು ಶೇಕಡ 80 ರಷ್ಟು ಜನ ಆರ್‍ಎಸ್‍ಎಸ್ ಗೆ ಸೇರಿದವರು. ತುರ್ತುಪರಿಸ್ಥಿತಿಯ ವಿರುದ್ಧ ಹೋರಾಡುವಲ್ಲಿ ಮತ್ತು ಪ್ರಜಾಪ್ರಭುತ್ವವನ್ನು […]

ಗೊಂದಲ ಬೇಡ, ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ : ಆರ್ ಅಶೋಕ್

Wednesday, September 29th, 2021
R Ashoka

ಬೆಂಗಳೂರು  : ಯಾರಿಗೂ ಯಾವುದೇ ಗೊಂದಲ ಬೇಡ, ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ ರಾಜ್ಯ ಸರ್ಕಾರ ೧ ಲಕ್ಷ ರೂಪಾಯಿ ನೀಡುತ್ತದೆ ಎಂದು ಕಂದಾಯ ಸಚಿವ ಆರ್ ಅಶೋಕ್ ವಿಧಾನಸೌಧದಲ್ಲಿ ಹೇಳಿದರು. “ರಾಜ್ಯ ಸರ್ಕಾರ ಜನರ ಪರವಾಗಿ ಇದೆ. ನಮ್ಮದು ಜನಸ್ನೇಹಿ ಸರ್ಕಾರ. ಬಿಪಿಎಲ್ ಕುಟುಂಬದ ದುಡಿಯುವ ಸದಸ್ಯನನ್ನು ಕಳೆದುಕೊಂಡವರಿಗೆ 1 ಲಕ್ಷ ರೂ ವಿಪತ್ತು ಪರಿಹಾರ ನಿಧಿಯಿಂದ ನೀಡುತ್ತೇವೆ. ಕೇಂದ್ರ ಸರ್ಕಾರ ಕೋವಿಡ್ ನಿಂದ ಮೃತಪಟ್ಟ ಎಲ್ಲರಿಗೂ 50,000 ರೂ‌ ನೀಡುತ್ತದೆ. ಬಿಪಿಎಲ್ ಕಾರ್ಡ್ […]

ಬರುವ ದಿನಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಸೂಕ್ತ ತೀರ್ಮಾನ: ಸಚಿವ ಆರ್ ಅಶೋಕ

Thursday, September 16th, 2021
R Ashoka

ಬೆಂಗಳೂರು  : “ಸುಪ್ರೀಂ ಕೋರ್ಟ್‍ನ ತೀರ್ಪನ್ನು ಯಥಾವತ್ತಾಗಿ ಪಾಲನೆ ಮಾಡುವುದು ಕರ್ತವ್ಯ. ಆದರೆ ಆ ಧಾವಂತದಲ್ಲಿ ಅಧಿಕಾರಿಗಳು ಈ ರೀತಿಯ ಅವಸರದ ತೀರ್ಮಾನ ತೆಗೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಜಿಲ್ಲಾಡಳಿತದಿಂದ ಜನರ ಭಾವನೆಗಳಿಗೆ ಧಕ್ಕೆಯಾಗದಂತಹ ತೀರ್ಮಾನ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ನಂಜನಗೂಡು ಮತ್ತು ಮೈಸೂರಿನಲ್ಲಿನ ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವರು,”ಅಧಿಕಾರಿಗಳು ಹೀಗೆ ಏಕಾಏಕಿ ನಿರ್ಧಾರ ತೆಗೆದುಕೊಂಡಿದ್ದು ತಪ್ಪು. ಸುಪ್ರೀಂ ಕೋರ್ಟ್ ಕೂಡಾ ರಸ್ತೆ ಮಧ್ಯದಲ್ಲಿರುವ […]

ಕಲ್ಬುರ್ಗಿ ಹಾಗೂ ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮಾತುಕತೆ : ಸಚಿವ ಅಶೋಕ

Saturday, September 11th, 2021
R ashoka

ಬೆಂಗಳೂರು  : ಇತ್ತೀಚಿಗೆ ನಡೆದ ಪಾಲಿಕೆ ಚುನಾವಣೆಯಲ್ಲಿ ಆಡಳಿತ ಹಿಡಿಯುವುದಕ್ಕಾಗಿ ಮೂರು ಪಕ್ಷಗಳು ಮೈತ್ರಿ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಇಂದು ಕಂದಾಯ ಸಚಿವ ಆರ್ ಅಶೋಕ ಬಿಡದಿಯ ಫಾರ್ಮ್ ಹೌಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಜೆಡಿ ಎಸ್ ಮಾಜಿ ಸಚಿವ ಸಾ ರಾ ಮಹೇಶ್ ಅವರ ಆಹ್ವಾನದ ಮೇರೆಗೆ ಕುಮಾರಸ್ವಾಮಿಯವರನ್ನ ಭೇಟಿ ಮಾಡಿ ದೊಡ್ಡಬಳ್ಳಾಪುರ ಹಾಗೂ ಕಲ್ಬುರ್ಗಿ ಪಾಲಿಕೆಗಳಲ್ಲಿ ಮೈತ್ರಿ ಆಡಳಿತ ನಡೆಸುವ ಕುರಿತಂತೆ ಒಂದು […]

ಮಹಿಳಾ ಕಾರ್ಯಕರ್ತರಿಗೆ ಬಾಗಿನ ನೀಡಿ, ಪರಿಸರ ಸ್ನೇಹಿ ಗಣೇಶ ಮೂರ್ತಿ ವಿತರಿಸಿದ : ಕಂದಾಯ ಸಚಿವ ಆರ್ ಅಶೋಕ

Thursday, September 9th, 2021
R Ashoka Ganesha

ಬೆಂಗಳೂರು  : “ಜೀವ, ಜೀವನ ಬಹಳ ಮುಖ್ಯ. ನಾವು ಬದುಕಿದರೆ ಮಾತ್ರ ಮುಂದೆ ಏನಾದರು ಸಾಧನೆ ಮಾಡಬಹುದು” ಎಂದು ಆರ್ ಅಶೋಕ ಹೇಳಿದರು. ದೆಹಲಿಯಿಂದ ನಗರಕ್ಕೆ ಆಗಮಿಸಿದ ಸಚಿವರು ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ವಿತರಿಸಿದರು. ಪದ್ಮನಾಭನಗರ ಕ್ಷೇತ್ರದ ವಿವಿಧ ಸ್ಥಳಗಳಲ್ಲಿ ಗೌರಿ ಹಬ್ಬದ ಶುಭದಿನದಂದು ಮಹಿಳೆಯರಿಗೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ, “ನಾವು ಗಣೇಶ ಹಬ್ಬವನ್ನು ಆಯೋಜಿಸಲು ಅನುಮತಿ ನೀಡಿದ್ದೇವೆ. ಗೌರಿ ಮತ್ತು ಗಣೇಶ ಹಬ್ಬವು ಸಹೋದರತ್ವವನ್ನು ಸಂಕೇತಿಸುತ್ತದೆ. […]

ತುರ್ತು ಬೆಳೆ ಪರಿಹಾರಕ್ಕೆ 38.65 ಕೋಟಿ ರೂಗಳಿಗೆ ಅನುಮೋದನೆ: ಕಂದಾಯ ಸಚಿವ ಆರ್ ಅಶೋಕ

Sunday, September 5th, 2021
R Ashoka Agriculture

ಬೆಂಗಳೂರು  : ಕಂದಾಯ‌ ಸಚಿವ ಆರ್ ಅಶೋಕ್ ವಿಪತ್ತು ಪರಿಹಾರ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ನಂತರ ಮಾತನಾಡಿದ ಸಚಿವರು “ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಅದರಿಂದುಂಟಾದ ಪ್ರವಾಹದಿಂದ ರಾಜ್ಯದ 15 ಜಿಲ್ಲೆಗಳ 86 ತಾಲ್ಲುಕುಗಳನ್ನು ಪ್ರವಾಹ ಪೀಡಿತ ಎಂದು‌ ಘೋಷಿಸಲಾಗಿತ್ತು. ಹಲವಾರು ರೈತರ ಬೆಳೆಹಾನಿ, ಕೃಷಿ ಭೂಮಿ ಹಾನಿ, ಪ್ರಾಣಿಗಳ ಸಾವು, ಸಾರ್ವಜನಿಕ ರಸ್ತೆ, ಕಟ್ಟಡಗಳು, ನೀರಾವರಿ ವ್ಯವಸ್ಥೆ ಗಳಿಗೆ ಹಾನಿಯುಂಟಾಗಿತ್ತು. ಕಂದಾಯ ಇಲಾಖೆಯು ಒಟ್ಟು ಹಾನಿಯನ್ನು ಸುಮಾರು 5690 ಕೋಟಿ ರೂ […]

ವೃದ್ಧಾಪ್ಯ ಪಿಂಚಣಿ ಫಲಾನುಭವಿಗಳ ಮನೆ ಬಾಗಿಲಿಗೆ: ಕಂದಾಯ ಸಚಿವ ಅಶೋಕ

Thursday, September 2nd, 2021
R Ashok

ಹೊಸದುರ್ಗ  : ತಾಲ್ಲೂಕು ಕಚೇರಿಗೆ ವೃದ್ಧರು, ವಿಧವೆಯರು, ಬಡವರು ನಿತ್ಯ ಅಲೆಯುತ್ತಾರೆ. ಅವರ ಕೆಲಸಗಳೆಲ್ಲಾ ಸರಾಗವಾಗಿ ಆಗುವಂತೆ ಆಗಬೇಕು. ಅವರಿಗೆಲ್ಲಾ ಸೌಲಭ್ಯಗಳು ಸಿಗಬೇಕು. ಆ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇರಿಸುತ್ತಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು. “ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ರೂ.10ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಮಿನಿ ವಿಧಾನಸೌಧಕ್ಕೆ ಭೂಮಿಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು, ಜಿಲ್ಲಾಡಳಿತ ಹಳ್ಳಿಗೆ ಹೋಗುವಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ರೂಪಿಸಿದ್ದೇವೆ. ಆಧಾರ್ ಕಾರ್ಡ್ ನಲ್ಲಿ […]

ಕಂದಾಯ ಸಚಿವ ಆರ್ ಅಶೋಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ

Sunday, July 25th, 2021
Ashok-Flood-Area

ಬೆಂಗಳೂರು  : ಅತಿವೃಷ್ಠಿಯಿಂದ ಹಾನಿಗೊಳಗಾಗಿರುವ ಹಾಸನ ಜಿಲ್ಲೆಯ ದೊಣಿಗಲ್‍ಗೆ ಕಂದಾಯ ಸಚಿವ ಆರ್ ಅಶೋಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ, “ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದ್ದೇನೆ. ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡುವಂತೆ ಮತ್ತು ರಸ್ತೆ ದುರಸ್ತಿ ಕಾರ್ಯಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದೇನೆ. ಎನ್‍ಡಿಆರ್‍ಎಫ್ ನಿಧಿಯಡಿ ಪರಿಹಾರ ನೀಡುವಂತೆ ಡಿಸಿಗಳಿಗೆ ಆದೇಶಿಸಲಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಚಿವರು ಮತ್ತು ಅಧಿಕಾರಿಗಳೊಂದಿಗೆ ನಿರಂತರ […]

ಚುನಾವಣೆಗಳು ಯುವ ಮುಖಂಡರಿಗೆ ಪರೀಕ್ಷೆಗಳಿದ್ದಂತೆ: ಆರ್ ಅಶೋಕ್

Sunday, July 18th, 2021
R Ashoka

ಬೆಂಗಳೂರು :  ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಂದಾಯ ಸಚಿವ ಶ್ರೀ ಆರ್ ಅಶೋಕ, ಸಿಎಂ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಮೂರನೇ ಅಲೆಯನ್ನು ಎದುರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು. “ಆಮ್ಲಜನಕಯುಕ್ತ ಹಾಸಿಗೆಗಳನ್ನು ಹೆಚ್ಚಿಸುವುದು, ವೈದ್ಯರಿಗೆ ತರಬೇತಿ ನೀಡುವುದು ಮತ್ತು ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ವೈದ್ಯರನ್ನು ಗುರುತಿಸುವುದು ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮಳೆಗಾಲದಲ್ಲಿ ನೀರು ತುಂಬುವ ತಗ್ಗು ಪ್ರದೇಶಗಳನ್ನು ಗುರುತಿಸಿ ಅದಕ್ಕೆ ಕ್ರಿಯಾ ಯೋಜನೆ […]

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಸಚಿವ ಆರ್ ಅಶೋಕ್

Sunday, July 18th, 2021
R Ashoka

ಬೆಂಗಳೂರು  : ಕೋವಿಡ್-19 ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕಂದಾಯ ಸಚಿವ ಆರ್ ಅಶೋಕ್ ಧೈರ್ಯ ತುಂಬಿದರು. ಆ ವೇಳೆ ಮಾತನಾಡಿದ ಸಚಿವರು “ಯಾರನ್ನೂ ಫೇಲ್ ಮಾಡುವದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಆದ ಶ್ರೀ ಸುರೇಶ್ ಕುಮಾರ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮಾಸ್ಕ್ ಗಳನ್ನು ನಾವೇ ಕೊಡುತ್ತೇವೆ, ಪರೀಕ್ಷಾ ಮೇಲ್ವಿಚಾರಕರಿಗೆ ಲಸಿಕೆ ಹಾಕಲಾಗಿದೆ. ಪ್ರತಿ ಬೆಂಚ್‍ಗೆ ಒಬ್ಬ ವಿದ್ಯಾರ್ಥಿ ಮಾತ್ರ, ಸರ್ಕಾರ ಎಲ್ಲ ರೀತಿಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡಿದೆ. […]