ಕಟೀಲು ಮೇಳಕ್ಕೆ ಬೆಳಗ್ಗಿನವರೆಗೆ ನಡೆಸಲು ಹೈಕೋರ್ಟ್‌ ಅನುಮತಿ

Tuesday, December 12th, 2023
kateelu Mela

ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಿಂದ ನಡೆಸಲ್ಪಡುವ ಯಕ್ಷಗಾನವನ್ನು ಮೊದಲಿಂದಂತೆ ಬೆಳಗ್ಗಿನವರೆಗೆ ನಡೆಸಲು ಹೈಕೋರ್ಟು ಅನುಮತಿ ನೀಡಿದೆ. ಕಟೀಲು ಮೇಳ ವಿಶೇಷ ಪ್ರಕರಣವೆಂದು ಭಾವಿಸಿ ರಾತ್ರಿ 12.30ರವರೆಗೆ ಮಾತ್ರ ನಡೆಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ 2022ರ ನವೆಂಬರ್ 15ರಂದು ಎಂದು ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ದೇಗುಲದ ಭಕ್ತ ಕೃಷ್ಣಕುಮಾರ್‌ ಹೈಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದು ಕೋವಿಡ್‌ ಪೂರ್ವದಲ್ಲಿ ಚಾಲ್ತಿಯಲ್ಲಿ ಇದ್ದಂತೆ ಯಕ್ಷಗಾನ ಪ್ರದರ್ಶನ ನೀಡಲು ಜಿಲ್ಲಾಧಿಕಾರಿ ಅಥವಾ ಸಮಕ್ಷ […]

ಪುರುಷೋತ್ತಮನ ಪ್ರಸಂಗ ಸಿನಿಮಾಕ್ಕೆ ಕಟೀಲ್‌ನಲ್ಲಿ ಚಾಲನೆ

Sunday, November 28th, 2021
purushotamana Prasanga

ಮಂಗಳೂರು :  ರಾಷ್ಟ್ರಕೂಟ ಪಿಚರ್ಸ್ ಲಾಂಛನ ದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪುರು ಷೋತ್ತಮನ ಪ್ರಸಂಗ ಸಿನಿಮಾದ ಮುಹೂರ್ತ ಸಮಾರಂಭ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿತು. ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಲಕ್ಷ್ಮೀ ನಾರಾಯಣ ಅಸ್ರಣ್ಣ ಸಿನಿಮಾಕ್ಕೆ ಮುಹೂರ್ತ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಬಿ.ಆರ್. ಶೆಟ್ಟಿ, ನಿರ್ಮಾ ಪಕರಾದ ವಿ. ರವಿ ಕುಮಾರ್, […]

ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರವರೆಗೆ ದರ್ಶನಕ್ಕೆ ಅವಕಾಶ, ವಾರಾಂತ್ಯ ಭಕ್ತಾಧಿಗಳಿಗೆ ನಿರ್ಬಂಧ

Tuesday, September 7th, 2021
Kateel Kukke Dharmasthala

ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರದೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ, ಕೋವಿಡ್ ಪಾಸಿಟಿವಿಟಿ ದರದಲ್ಲಿ ಇಳಿಕೆಯಾಗಿದ್ದರೂ, ಸಂಭಾವ್ಯ 3ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾ ದಂಡಾಧಿಕಾರಿಗಳೂ, ಜಿಲ್ಲಾ […]

ರಾತ್ರಿ ಕರ್ಫ್ಯೂ : ಕಟೀಲು ಯಕ್ಷಗಾನ ಮೇಳಗಳ ಪ್ರದರ್ಶನ ಸಮಯ ಬದಲಾವಣೆ

Thursday, December 24th, 2020
Kateelu Mela

ಮಂಗಳೂರು : ಕಟೀಲು‌ ದೇವಸ್ಥಾನದ ಎಲ್ಲಾ ಆರು ಯಕ್ಷಗಾನ ಮೇಳಗಳು ಡಿ.24 ರಿಂದ ರಾತ್ರಿ ಕರ್ಫ್ಯೂ ಜಾರಿಯಲ್ಲಿರುವುದರಿಂದ ಕಟೀಲು ಯಕ್ಷಗಾನ ಮೇಳ ಕಾಲಮಿತಿ ಯಕ್ಷಗಾನವನ್ನು ಪ್ರದರ್ಶಿಸಲಿದೆ ಎಂದು ಮೇಳದ ವ್ಯವಸ್ಥಾಪಕರು ತಿಳಿಸಿದ್ದಾರೆ. ಕಟೀಲು‌ ದೇವಸ್ಥಾನದ ಆರು ಯಕ್ಷಗಾನ ಮೇಳಗಳು ಡಿಸೆಂಬರ್ ‌24ರ ಗುರುವಾರದಿಂದ ಸಂಜೆ 4 ಗಂಟೆಗೆ ಚೌಕಿ ಪೂಜೆ ನಡೆದು ಬಳಿಕ ಯಕ್ಷಗಾನ ಪ್ರಸಂಗ ಆರಂಭಿಸಲಿದೆ. ರಾತ್ರಿ 9:45 ಕ್ಕೆ ಮಂಗಳ ಹಾಡುವುದರ ಮೂಲಕ ಯಕ್ಷಗಾನ‌ ಕೊನೆಗೊಳ್ಳಲಿದೆ. ಎಲ್ಲ ಕಲಾವಿದರು ಮಧ್ಯಾಹ್ನ 2:30ಕ್ಕೆ ಚೌಕಿಯಲ್ಲಿ ಹಾಜರಿರಲು […]

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವ ನೇರಪ್ರಸಾರ

Thursday, January 30th, 2020
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವ ನೇರಪ್ರಸಾರ

ಕಟೀಲು : ಜನವರಿ 30 ರಂದು ಬೆಳಿಗ್ಗೆ 9.37 ಕ್ಕೆ ಅಷ್ಟಬಂಧ ಬ್ರಹ್ಮಕಲಶೋತ್ಸವ

Friday, January 24th, 2020
Kateelu

ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ ಗಳು ಆರಂಭಗೊಂಡಿದ್ದು, ಜನವರಿ 30 ರಂದು ಬೆಳಿಗ್ಗೆ 9.37 ಕ್ಕೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ.  ಫೆ. 3ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಸುಮಾರು 25 ಲಕ್ಷಕ್ಕೂ ಅಧಿಕ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಸಂಸದ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದರು. ಸದ್ಯ ಸುತ್ತು ಪೌಳಿಯ ಸುಂದರೀಕರಣ ನಡೆಯುತ್ತಿದೆ. ದೇವಸ್ಥಾನದ ಸುತ್ತ ವಿಸ್ತರಣೆ ಮಾಡಲಾಗಿದೆ ಎಂದರು. ದೇವಸ್ಥಾನದ ಎದುರಿನ ರಸ್ತೆಯ ಅಗಲೀಕರಣಕ್ಕೆ […]

ಕಟೀಲು : ಲಲಿತಾ ಪಂಚಮಿ ಪ್ರಯುಕ್ತ 18 ಸಾವಿರ ಶೇಷವಸ್ತ್ರ ವಿತರಣೆ

Friday, October 4th, 2019
kateel

ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಲಲಿತಾ ಪಂಚಮಿ ಪ್ರಯುಕ್ತ ಗುರುವಾರ ರಾತ್ರಿ ಅನ್ನಪ್ರಸಾದ ಸ್ವೀಕರಿಸಿದ ಮಹಿಳಾ ಭಕ್ತರಿಗೆ ದೇವರ ಶೇಷ ವಸ್ತ್ರ ನೀಡಲಾಯಿತು. ಸಂಜೆ 6.30ಕ್ಕೆ ಅನ್ನಪ್ರಸಾದ ವಿತರಣೆ ಪ್ರಾರಂಭವಾಗಿದ್ದು, ಭಕ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುಮಾರು 18 ಸಾವಿರ ಶೇಷವಸ್ತ್ರ ಸಿದ್ಧಪಡಿಸಲಾಗಿದ್ದು, ತಡರಾತ್ರಿಯವರೆಗೂ ವಿತರಣೆ ಕಾರ್ಯ ನಡೆಯಿತು. ಮಧ್ಯಾಹ್ನ ಮತ್ತು ರಾತ್ರಿ ಸುಮಾರು 30 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ […]

ಮಂಗಳೂರು : ಶ್ರೀ ಕಟೀಲು ದೇವಾಲಯಕ್ಕೆ ಭೇಟಿ ನೀಡಿದ ನಟಿ ಶಿಲ್ಪಾ ಶೆಟ್ಟಿ

Friday, September 27th, 2019
kateel

ಮಂಗಳೂರು : ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಬಾಲಿವುಡ್ ಕ್ವೀನ್ ಚಲನಚಿತ್ರ ನಟಿ ಶಿಲ್ಪಾಶೆಟ್ಟಿ ಭೇಟಿ ನೀಡಿದ್ದಾರೆ. ಕ್ಷೇತ್ರದಲ್ಲಿ ಶ್ರೀ ದುರ್ಗಾಪರಮೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಕಟೀಲು ದೇವಳದ ವತಿಯಿಂದ ಅರ್ಚಕ‌ ಅನಂತ ಪದ್ಮನಾಭ ಅಸ್ರಣ್ಣ ಶೇಷವಸ್ತ್ರ ನೀಡಿ ಗೌರವಿಸಿದರು. ಅರ್ಚಕ ಹರಿನಾರಾಯಣ ದಾಸ ಅಸ್ರಣ್ಣ ಶಿಲ್ಪ ಶೆಟ್ತಿಯವರನ್ನು ಸ್ವಾಗತಿಸಿದರು. ಇನ್ನು ಇದಕ್ಕೂ ಮುನ್ನ ನಗರದ ಟಿಎಂಎ ಪೈ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಎಂಸಿ ಆಸ್ಪತ್ರೆಯ ಮಾತೃತ್ವ […]

ರಾತ್ರಿ ಹೊತ್ತು ನಿಲ್ಲಿಸಿದ್ದ ಬಸ್ಸಿಗೆ ಕಲ್ಲು : ಮೂವರ ಬಂಧನ

Wednesday, September 18th, 2019
Mulky

ಮಂಗಳೂರು : ನಗರದ ಹೊರವಲಯದ ಕಿನ್ನಿಗೋಳಿ ಹಾಗೂ ಕಟೀಲು ಪರಿಸರದಲ್ಲಿ ರಾತ್ರಿ ಹೊತ್ತು ನಿಲ್ಲಿಸಿದ್ದ ಒಟ್ಟು 5 ಬಸ್ಸುಗಳಿಗೆ ಕಳೆದ ಸೆ.4ರ ಮುಂಜಾನೆ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಮುಲ್ಕಿ ಹಾಗೂ ಬಜ್ಪೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಟ್ವಾಳ ತಾಲ್ಲೂಕಿನ ಬುಡೋಳಿ ಪೆರಾಜೆ ನಿವಾಸಿಗಳಾದ ಶಂಶೀರ್(27), ಅಬ್ದುಲ್ ಸತ್ತಾರ್(21) ನರಿಕೊಂಬು ನೆಹ್ರೂ ನಗರ ನಿವಾಸಿ ಮಹಮ್ಮದ್ ರಿಯಾಝ್(28) ಬಂಧಿತ ಆರೋಪಿಗಳು. ಬಂಧಿತರಿಂದ ಕಲ್ಲು ತೂರಾಟಕ್ಕೆ ಬಳಸಿದ್ದರೆನ್ನಲಾದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸೆ.4ರಂದು […]

ಕಚಡಾ ನನ್ ಮಕ್ಳು..” ಎಂದು ಪತ್ರಕರ್ತರನ್ನು ನಿಂದಿಸಿದ ಎಚ್.ಡಿ.ರೇವಣ್ಣ

Monday, July 15th, 2019
HD-Revanna

ಮಂಗಳೂರು  : ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ದೋಸ್ತಿ ಸರಕಾರ ಉಳಿಸಿಕೊಳ್ಳಲು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು  ದೇವಸ್ಥಾನ ಸುತ್ತುವುದನ್ನು ಕವರೇಜ್ ಮಾಡಲು ಹೋದ  ಪತ್ರಕರ್ತರನ್ನು ಮತ್ತು ಛಾಯಾಗ್ರಾಹಕರನ್ನು ಕಚಡಾ ನನ್ ಮಕ್ಳು..”  ಎಂದು ನಿಂದಿಸಿ ಪತ್ರಕರ್ತರಲ್ಲಿದ್ದ ಆ ಫೋಟೋ ಹಾಗೂ ವಿಡಿಯೋಗಳನ್ನು ತಮ್ಮ ಭದ್ರತಾ ಸಿಬ್ಬಂದಿಗಳ ಮೂಲಕ ಡಿಲೀಟ್ ಮಾಡಿಸಿದ  ಘಟನೆ  ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಭಾನುವಾರ ನಡೆದಿದೆ ಭಾನುವಾರ ಕೊಲ್ಲೂರು, ಆನೆಗುಡ್ಡೆ, ಹಟ್ಟಿಯಂಗಡಿ ಸೇರಿದಂತೆ ಕಟೀಲು ದೇವಳಗಳಿಗೆ ಭೇಟಿ ನೀಡಿದ್ದಾರೆ.  ಸಂಜೆ 03.20 ಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ […]