ನರೇಂದ್ರ ಮೋದಿ ಜನ್ಮದಿನದಂದು ದೇಶಾದ್ಯಂತ ಎರಡು ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ವಿತರಣೆ

Friday, September 17th, 2021
Narendra Modi

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಶುಕ್ರವಾರ ದೇಶಾದ್ಯಂತ ದಾಖಲೆಯ ಎರಡು ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.  ಇದು ದೇಶದ  ಕೋವಿಡ್ ಲಸಿಕೆ ಅಭಿಯಾನದಲ್ಲಿ  ಹೊಸ ಮೈಲುಗಲ್ಲು  ಎನ್ನಲಾಗಿದೆ. “ಪ್ರಧಾನಿ ಮೋದಿಯವರ ಜನ್ಮದಿನದಂದು ದೇಶಾದ್ಯಂತ ಎರಡು ಕೋಟಿ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಈ ಮುಂಚೆ ತಿಳಿಸಿದ್ದವು. ಆರೋಗ್ಯ ಕಾರ್ಯಕರ್ತರು ಮತ್ತು ದೇಶದ ಜನರ ಪರವಾಗಿ ಪ್ರಧಾನಿಗೆ ಇದು ಉಡುಗೊರೆ. ಇಂದು ಪ್ರಧಾನಿ ನರೇಂದ್ರ […]

ಪ್ರಧಾನಿ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Friday, July 16th, 2021
CM Delhi

ನವ ದೆಹಲಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲ ಯೋಜನೆಗಳ ವಿಷಯದಲ್ಲಿ ಕೇಂದ್ರ ಸರ್ಕಾರದ ನೆರವು ಒದಗಿಸುವಂತೆ ಮನವಿ ಮಾಡಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕು, ಬೆಂಗಳೂರುಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ 6 ಸಾವಿರ ಕೋಟಿ ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮೇಕೆದಾಟು ಯೋಜನೆ, ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಸ್ಥಾಪನೆ ಸೇರಿದಂತೆ ವಿವಿಧ […]

ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ತಿಂಗಳೊಳಗಾಗಿ ಪೂರ್ಣಗೊಳಿಸಿ: ಸಚಿವ ಕೆ.ಎಸ್.ಈಶ್ವರಪ್ಪ

Friday, July 9th, 2021
eswarappa

ಮೈಸೂರು :- ಕೇಂದ್ರ ಸರ್ಕಾರವು ವಿಶೇಷವಾಗಿ ಆಸಕ್ತಿವಹಿಸಿರುವ ಕುಡಿಯುವ ನೀರಿನ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯಡಿ ವಿಳಂಬವಾಗಿರುವ ಕಾಮಗಾರಿಗಳನ್ನು ಜುಲೈ ತಿಂಗಳೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಶುಕ್ರವಾರ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ, ಜಲಜೀವನ್ ಮಿಷನ್ ಸೇರಿದಂತೆ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಹಾಗೂ ಕೋವಿಡ್-19 ಸೋಂಕು ಗ್ರಾಮೀಣ ಪ್ರದೇಶದಲ್ಲಿ ಹರಡುವುದುನ್ನು […]

ಸಿಬಿಎಸ್ಇ (CBSC)12ನೇ ಪರೀಕ್ಷೆಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ

Tuesday, June 1st, 2021
cbsc

ನವದೆಹಲಿ : ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಸಿಬಿಎಸ್ಇ 12ನೇ ಪರೀಕ್ಷೆಯನ್ನುರದ್ದುಗೊಳಿಸಿದೆ.  ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಕೋವಿಡ್ ಪರಿಸ್ಥಿತಿ ಹಿನ್ನಲೆ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ ಅತ್ಯಂತ ಮಹತ್ವದ್ದಾಗಿದೆ ಮತ್ತು ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಪ್ರಧಾನಿ ಹೇಳಿದ್ದಾರೆ. ಸಿಬಿಎಸ್‌ಇ ಫಲಿತಾಂಶಗಳನ್ನು ಘೋಷಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಭೆಯ […]

ಕೇಂದ್ರ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ವೈದ್ಯರ ಪ್ರತಿಭಟನೆ

Saturday, December 12th, 2020
IMA

ಮಂಗಳೂರು: ಶಸ್ತ್ರಚಿಕಿತ್ಸೆಗಳನ್ನು ಆಯುರ್ವೇದಿಕ್ ವೈದ್ಯರೂ ಮಾಡಬಹುದು ಎಂದು ಕೇಂದ್ರ ಸರ್ಕಾರ ಆದೇಶಿಸಿರುವುದನ್ನು ಖಂಡಿಸಿ ನಗರದ ಐಎಂಎ ಕಚೇರಿ ಮುಂಭಾಗ ವೈದ್ಯರು ಪ್ರತಿಭಟನೆ ನಡೆಸಿದರು. ಅಲೋಪತಿ ವೈದ್ಯರು ಮಾಡುವ ಅನೇಕ ಶಸ್ತ್ರಚಿಕಿತ್ಸೆಗಳನ್ನು ಆಯುರ್ವೇದಿಕ್ ವೈದ್ಯರೂ ಮಾಡಬಹುದು ಎಂದು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದೆ. ಇದನ್ನು ಖಂಡಿಸಿ ದೇಶಾದ್ಯಂತ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಮುಷ್ಕರ ನಡೆಯುತ್ತಿದ್ದು, ಇದಕ್ಕೆ ಬೆಂಬಲ ಸೂಚಿಸಿದ ದ.ಕ ಜಿಲ್ಲೆಯ ವೈದ್ಯರು ಒಪಿಡಿ ಸೇವೆ ಸ್ಥಗಿತಗೊಳಿಸಿ ಮುಷ್ಕರದಲ್ಲಿ ಭಾಗವಹಿಸಿದ್ದಾರೆ‌. ವೈದ್ಯರು ಕಪ್ಪು ಪಟ್ಟಿ […]

ಕೊರೊನಾ ಸಮರಕ್ಕೆ ಕೇಂದ್ರ ಸರ್ಕಾರದಿಂದ1.70 ಲಕ್ಷ ಕೋಟಿ ರೂ.ಪ್ಯಾಕೇಜ್  : ನಳಿನ್‌ಕುಮಾರ್ ಶ್ಲಾಘನೆ

Thursday, March 26th, 2020
Nalin Kumar K

ಮಂಗಳೂರು : ಕೊರೊನಾ ಸೋಂಕು ಹರಡದಂತೆ ತಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ಇದೀಗ 1.70 ಲಕ್ಷ ಕೋಟಿ ರೂ.ಪ್ಯಾಕೇಜ್ ಘೋಷಿಸುವ ಮೂಲಕ ಕೇಂದ್ರ ಸರ್ಕಾರ ಮಹತ್ವದ ಸ್ಪಂದನೆ ನೀಡಿದೆ. ಸೋಂಕು ನಿವಾರಣೆ ಹೋರಾಟದ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುವವರಿಗೆ ತಲಾ ೫೦ ಲಕ್ಷ ರೂ. ಮೌಲ್ಯದ ಮೆಡಿಕಲ್ ಇನ್ಸೂರೆನ್ಸ್ ಒದಗಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯದ ಜನತೆಯ ಪರವಾಗಿ ಅಭಿನಂದಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ […]

ಮೀಸಲಾತಿ ಗೊಂದಲ : ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Monday, February 17th, 2020
cog.pratibhatane

ಮಡಿಕೇರಿ : ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಇದ್ದ ಮೀಸಲಾತಿಯ ಹಕ್ಕನ್ನು ದುರ್ಬಲಗೊಳಿಸಲು ಹೊರಟಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೀಸಲಾತಿ ಪ್ರತಿಪಾದನೆ ಕುರಿತು ಸರ್ಕಾರ ಮತ್ತೆ ಸುಪ್ರೀಂಕೋರ್ಟ್‌ನಲ್ಲಿ ಮರು ಪರಿಶೀಲನಾ ಅರ್ಜಿ […]

ಕೇಂದ್ರ ಸರ್ಕಾರದ ವಿರುದ್ಧ ಕೊಡಗು ಕಾಂಗ್ರೆಸ್ ಪ್ರತಿಭಟನೆ : ಆರ್ಥಿಕ ನೀತಿಗೆ ಖಂಡನೆ

Wednesday, November 13th, 2019
Kodagu

ಮಡಿಕೇರಿ : ಕೇಂದ್ರ ಸರ್ಕಾರ ಜನ ವಿರೋಧಿ ಆರ್ಥಿಕ ನೀತಿ ಅನುಸರಿಸುತ್ತಿದೆ ಮತ್ತು ದೇಶವನ್ನು ನಿರುದ್ಯೋಗ ಸಮಸ್ಯೆ ಕಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಡಳಿತದ ಭವನದ ಎದುರು ಪ್ರತಿಭಟನೆ ನಡೆಸಿತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮುಂಜುನಾಥ್ ಕುಮಾರ್ ಲೋಕಸಭಾ ಚುನಾವಣೆಯ […]

ಕಾಂಗ್ರೆಸ್​ನಲ್ಲಿ ಗುಂಪುಗಾರಿಕೆ ಇಲ್ಲ : ಮಲ್ಲಿಕಾರ್ಜುನ ಖರ್ಗೆ

Wednesday, October 9th, 2019
kharge

ಕಲಬುರಗಿ : ಕಾಂಗ್ರೆಸ್ ಸೇರಿದ ಮೇಲೆ ಎಲ್ಲರೂ ಕಾಂಗ್ರೆಸ್ಸಿಗರೆ ಹೊರತಾಗಿ ಮೂಲ, ವಲಸೆ ಕಾಂಗ್ರೆಸ್ಸಿಗರು ಅನ್ನೋ ಪ್ರಶ್ನೆಯೇ ಇಲ್ಲ. ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಇರಬಹುದು. ಆದರೆ, ಕಾಂಗ್ರೆಸ್ನಲ್ಲಿ ಗುಂಪುಗಾರಿಕೆ ಇಲ್ಲ ಎಂದು ಎಐಸಿಸಿ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ದೊಡ್ಡ ಸಮುದ್ರ, ಇಲ್ಲಿ ಎಲ್ಲಾ ನದಿಗಳು ಬಂದು ಸೇರುತ್ತವೆ. ಹಾಗೆ ಪಕ್ಷಕ್ಕೆ ಬರುವವರು ಒಟ್ಟಾಗಿ ಇರ್ತಾರೆ. ಇಲ್ಲಿ ಗುಂಪುಗಾರಿಕೆಗೆ ಅವಕಾಶವಿಲ್ಲ. ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಇರುವುದು ಸಹಜ. ಇದನ್ನೇ ಮಾಧ್ಯಮದವರು ಮಸಾಲೆ ಹಚ್ಚಿ ವೈಭವೀಕರಿಸಿ […]

ಎರಡು ಆದೇಶಗಳಲ್ಲಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದೆ : ಆರ್.ಅಶೋಕ್

Saturday, October 5th, 2019
R-Ashok

ಬೆಂಗಳೂರು : ರಾಜ್ಯದಲ್ಲಿ ನೆರೆಯಿಂದ ಆಗಿರುವ ಒಟ್ಟು ಅಂದಾಜು ಹಾನಿ 38,000 ಕೋಟಿ ರೂ. ಆದರೆ ಎನ್‍ಡಿಆರ್‍ಎಫ್ ನಿಯಮಾವಳಿ ಪ್ರಕಾರ ರಾಜ್ಯಕ್ಕೆ 3,810.80 ಕೋಟಿ ರೂ. ಬರಬೇಕು. ಅದರಲ್ಲಿ ಮೊದಲ ಕಂತು 1,200 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಎರಡು ಪ್ರತ್ಯೇಕ ಆದೇಶಗಳಲ್ಲಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಳುಹಿಸಿದ ಅಂದಾಜು ನಷ್ಟದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ, […]