ಕೊರೊನಾ ಭೀತಿ ಹಿನ್ನೆಲೆ : ದೆಹಲಿಯಲ್ಲಿ ಎಲ್ಲ ಐಪಿಎಲ್ ಪಂದ್ಯ ರದ್ದು

Friday, March 13th, 2020
IPL

ನವದೆಹಲಿ : ದೆಹಲಿಯಲ್ಲಿ ಆಯೋಜನೆಗೊಂಡಿದ್ದ ಎಲ್ಲ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ. ಕ್ರಿಕೆಟ್ ವೀಕ್ಷಿಸಲು ಸಾವಿರಾರು ಮಂದಿ ಕ್ರೀಡಾಂಗಣಕ್ಕೆ ಬರುತ್ತಾರೆ. ಯಾರು ಬರುತ್ತಾರೆ? ಅವರು ಎಲ್ಲಿಂದ ಬರುತ್ತಿದ್ದಾರೆ ಎನ್ನುವುದು ತಿಳಿಯುವುದು ಅಸಾಧ್ಯ. ಒಬ್ಬ ವ್ಯಕ್ತಿ ಬಂದರೂ ಹಲವು ಮಂದಿಗೆ ಕೊರೊನಾ ಹರಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಐಪಿಎಲ್ ಸೇರಿದಂತೆ ಎಲ್ಲ ಕ್ರೀಡಾ ಕಾರ್ಯಕ್ರಮವನ್ನು […]

ರಾಜ್ಯದಲ್ಲಿ ಕೊರೊನಾ ಭೀತಿ : ಆರೋಗ್ಯ ಇಲಾಖೆಯಿಂದ ಮಾಹಿತಿ ಪಡೆದ ಸಿಎಂ ಬಿಎಸ್‌ ಯಡಿಯೂರಪ್ಪ

Tuesday, March 10th, 2020
bsy

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದ್ದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮಾಹಿತಿ ಪಡೆದುಕೊಂಡಿದ್ದಾರೆ. ಕೊರೊನಾ ತಡೆಗಟ್ಟುವಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತಾಗಿ ಬಿಎಸ್‌ವೈ ಮಾಹಿತಿ ಸಂಗ್ರಹ ಮಾಡಿದರು. ಹಿರಿಯ ಅಧಿಕಾರಿಗಳ ಜೊತೆಗೆ ಫೋನ್‌ನಲ್ಲಿ ಮಾತುಕತೆ ನಡೆಸಿದ ಬಿಎಸ್‌ವೈ ಪ್ರತಿಯೊಂದ ವಿವರಗಳನ್ನು ಕಲೆಹಾಕಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಸಿಎಂ ಸರ್ಕಾರದ ಕಡೆಯಿಂದ ಎಲ್ಲಾ ರೀತಿಯ […]

ಕೊರೊನಾ ಭೀತಿ ತೀರಾ ಹೆಚ್ಚಾದರೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ : ಶಿಕ್ಷಣ ಸಚಿವ ಸುರೇಶ್ ಕುಮಾರ್

Saturday, March 7th, 2020
suresh-kumar

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚಾಗಿದೆ. ದೆಹಲಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಶಾಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಜ್ವರ ಕಾಣಿಸಿಕೊಂಡರೆ ರಜೆ ಕೊಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ನೀಡಿದೆ. ಇದರ ಬೆನ್ನಲ್ಲೆ ಕೊರೊನಾ ಭೀತಿ ತೀರಾ ಹೆಚ್ಚಾದರೆ ಶಾಲೆಯಲ್ಲಿ ಹೆಚ್ಚಿನ ಮಕ್ಕಳಿಗೆ ಜ್ವರದಂತಹ ಸಾಂಕ್ರಾಮಿಕ ರೋಗ ಕಾಣಿಸಿಕೊಂಡರೆ ಅಂತಹ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಮೊದಲು ಪಿಯುಸಿ ಪರೀಕ್ಷಾ ಕೊಠಡಿಯಲ್ಲಿ […]