ಕೊರೋನಾ ಸೋಂಕು ಭಾನುವಾರ : ದ.ಕ. ಜಿಲ್ಲೆಯಲ್ಲಿ 183- ಸಾವು 1, ಉಡುಪಿ ಜಿಲ್ಲೆ – 130

Sunday, September 5th, 2021
corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.1.70ಕ್ಕೆ ಇಳಿಕೆಯಾಗಿದ್ದು, ಭಾನುವಾರ 183 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ,  ಓರ್ವ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 221 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ 1,11,058 ಸೋಂಕಿತರ ಪೈಕಿ 1,07,357 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್‌ಗೆ ಇಲ್ಲಿಯವರೆಗೆ 1,594 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 2107 ಸಕ್ರಿಯ ಪ್ರಕರಣಗಳಿವೆ. ಉಡುಪಿ ಜಿಲ್ಲೆಯಲ್ಲಿ ಭಾನುವಾರ 130 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 1432ಕ್ಕೇರಿದೆ. 70 ಮಂದಿ ಸೋಂಕಿನಿಂದ ಚೇತರಿಸಿಕೊಂಡರೆ, ಭಾನುವಾರ ಯಾರೂ ಸೋಂಕಿನಿಂದ […]

ಸೋಂಕಿತರ ಚಿಕಿತ್ಸಾ ಹಂತ ನಿರ್ಧರಿಸಲು ರಕ್ತ ಪರೀಕ್ಷೆ

Monday, May 24th, 2021
corona

ಬೆಂಗಳೂರು : ಹೆಚ್ಚುತ್ತಿರುವ ಕೋವಿಡ್ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿತ್ತಿದೆ. ಈಗಾಗಲೇ ಲಾಕ್ ಡೌನ್ ಮೂಲಕ ಒಂದು ಹಂತದಲ್ಲಿ ಚೈನ್ ಕತ್ತರಿಸುವ ಪ್ರಕ್ರಿಯೆ ಯಶಸ್ವಿಯಾಗಿದ್ದು, ಗ್ರಾಮೀಣ ಭಾಗದಲ್ಲಿಯೂ ಮೊಬೈಲ್ ಕ್ಲಿನಿಕ್, ಮನೆ, ಮನೆಯಲ್ಲಿಯೂ ಲಕ್ಷಣವುಳ್ಳವರ ಕೋವಿಡ್ ಪರೀಕ್ಷೆ ಸೇರಿದಂತೆ ಸೋಂಕಿತರನ್ನ ಗುರುತಿಸಿ ಚಿಕಿತ್ಸೆ ನೀಡುವಲ್ಲಿ ಪರಿಣಾಮಕಾರಿ ಮಾರ್ಗಗಳನ್ನ ಅನುಸರಿಸುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣ ಭಾಗದಲ್ಲಿ ಮತ್ತೊಂದು ವಿಶಿಷ್ಟ ಮಾರ್ಗ ಅನುಸರಿಸುತ್ತಿದ್ದು, ಆ ಮೂಲಕ ಸೋಂಕಿನ ಪ್ರಭಾವವನ್ನ ನಿರ್ದಿಷ್ಟವಾಗಿ ಗುರುತಿಸುವಲ್ಲಿ […]

ಮನೆಯಲ್ಲಿಯೇ ಕೋವಿಡ್ ಪರೀಕ್ಷೆ ಮಾಡಿಕೊಳ್ಳುವ ಕೋವಿಸೆಲ್ಫ್ ಕಿಟ್

Thursday, May 20th, 2021
coviself-kit

ನವದೆಹಲಿ : ಪುಣೆ ಮೂಲದ ಮೈಲಾಬ್ ಡಿಸ್ಕವರಿ ಸೊಲ್ಯೂಷನ್ಸ್ ಲಿಮಿಟೆಡ್ ಕೋವಿಡ್-19 ಪರೀಕ್ಷೆಯನ್ನು ಮನೆಯಲ್ಲಿಯೇ ನಡೆಸುವ ಕ್ಷಿಪ್ರ ಆಂಟಿಜೆನ್ ಪರೀಕ್ಷೆ (ಆರ್‌ಎಟಿ)  ಮಾಡುವ  ಕಿಟ್‌ ತಯಾರಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ಈ ಕಿಟ್ ಗೆ ಅನುಮೋದನೆ ನೀಡಿದೆ. ಕೋವಿಸೆಲ್ಫ್ ಟಿಎಂ (ಪ್ಯಾಥೊಕ್ಯಾಚ್) ಕೋವಿಡ್-19 ಒಟಿಸಿ ಆಂಟಿಜೆನ್ ಎಲ್ಎಫ್ ಸಾಧನ ಎಂದೂ ಕರೆಯಲ್ಪಡುವ ಸ್ವಯಂ-ಪರೀಕ್ಷೆಯ ಕೋವಿಸೆಲ್ಫ್ ಕಿಟ್ ಇದಾಗಿದೆ. ಆರ್‌ಎಟಿಗಳನ್ನು ಹೇಗೆ ಮತ್ತು ಯಾರು ಬಳಸಬಹುದು ಎಂಬುದರ ಕುರಿತು ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಿದ ಐಸಿಎಂಆರ್, ರೋಗಲಕ್ಷಣಗಳುಳ್ಳ ವ್ಯಕ್ತಿಗಳಲ್ಲಿ ಮತ್ತು ಪ್ರಯೋಗಾಲಯ-ದೃಢಪಡಿಸಿದ […]

ದ.ಕ. ಜಿಲ್ಲೆಯಲ್ಲಿ ಶುಕ್ರವಾರ ಕೊರೋನ ಸೋಂಕು : 1215 ಪ್ರಕರಣ, 3 ಮಂದಿ ಸಾವು, ಉಡುಪಿ 1220 ಪ್ರಕರಣ, 3 ಸಾವು

Saturday, May 15th, 2021
corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ  ಶುಕ್ರವಾರ ಜಿಲ್ಲೆಯಲ್ಲಿ 1215 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. 881ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಶುಕ್ರವಾರ ಮತ್ತೆ 3 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 805ಕ್ಕೇರಿದೆ. ಜಿಲ್ಲೆಯಲ್ಲಿ ಈವರಗೆ 7,98,490 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,36,924 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 61,570 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 47,865 ಮಂದಿ ಗುಣಮುಖರಾಗಿದ್ದಾರೆ. ಸದ್ಯ […]

ಅಕ್ಟೋಬರ್‌ 17ರಂದು ಬೆಳಗ್ಗೆ 7.03ಕ್ಕೆ ಕನ್ಯಾ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ, ಭಕ್ತಾದಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

Tuesday, October 13th, 2020
Kaveri Thirtha

ಮಡಿಕೇರಿ : ಅಕ್ಟೋಬರ್ 17ರಂದು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಜರುಗಲಿರುವ ಕಾವೇರಿ ಪವಿತ್ರ ತೀರ್ಥೋದ್ಭವ ವೀಕ್ಷಿಸಲು ಹೊರಜಿಲ್ಲೆ ಮತ್ತು ಹೊರರಾಜ್ಯದಿಂದ ಬರುವ ಭಕ್ತಾದಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದ್ದು, ನೆಗೆಟಿವ್ ವರದಿಯಿದ್ದರೆ ಮಾತ್ರ ಕ್ಷೇತ್ರದೊಳಕ್ಕೆ ಪ್ರವೇಶಕ್ಕೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ. ಅಕ್ಟೋಬರ್‌ 17ರಂದು ಬೆಳಗ್ಗೆ 7.03ಕ್ಕೆ ಕನ್ಯಾ ಲಗ್ನ ಮೂಹೂರ್ತದಲ್ಲಿ ಕಾವೇರಿ ತೀರ್ಥೋದ್ಭವ ಜರುಗಲಿದೆ. ತಲಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಮಾತ್ರವೇ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ಮಡಿಕೇರಿ ನಗರದ […]