ಬಾಕಿ ಉಳಿದಿರುವವರಿಗೆ ಲಸಿಕೆ ಹಾಕಿಸುವುದು ಸವಾಲಿನ ಕೆಲಸ: ಡಿಸಿ

Friday, September 17th, 2021
Press Club Vaccination

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಇಂದಿನ ಲಸಿಕಾ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ಏರ್ಪಡಿಸಲಾದ ಕೋವಿಡ್ 19 ಲಸಿಕಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ವಾರ ಲಕ್ಷ ಮಂದಿಗೆ […]

ಕೇರಳದ ತಿರುವನಂತಪುರದಲ್ಲಿ ಝಿಕಾ ಸೋಂಕು ಪ್ರಕರಣ ಹೆಚ್ಚಳ, ದ.ಕ. ಜಿಲ್ಲೆಯಲ್ಲಿ ಕಟ್ಟೆಚ್ಚರ

Wednesday, July 14th, 2021
Zhika

ಮಂಗಳೂರು :  ಕೇರಳದ ತಿರುವನಂತಪುರದಲ್ಲಿ ಝಿಕಾ ಸೋಂಕು ಪ್ರಕರಣಗಳು ಹೆಚ್ಚಿದ್ದು. ಕೇರಳದ ಗಡಿಭಾಗ ದ.ಕ. ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ನಿರ್ದೇಶನ ನೀದಿದ್ದಾರೆ. ಕೇರಳದಿಂದ ಸಾಕಷ್ಟು ಜನರು ಶಿಕ್ಷಣ ಹಾಗೂ ಆರೋಗ್ಯ, ಉದ್ಯೋಗ ಸಂಬಂಧಿತ ಕಾರ್ಯಗಳಿಗೆ ಬಂದು ಹೋಗುತ್ತಿರುವುದು ಸಾಮಾನ್ಯ. ಜಿಲ್ಲೆಯಲ್ಲಿ ಈ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ಝೀಕಾ ಸೋಂಕು ಹೊಂದಿರುವ ಈಡಿಸ್ ಸೊಳ್ಳೆ ಕಚ್ಚುವಿಕೆಯಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈಡಿಸ್ ಸೊಳ್ಳೆ ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತದೆ. ಈ […]

ಉತ್ತಮ ಪರಿಸರ ನಮ್ಮೆಲ್ಲರ ಹೊಣೆಃ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ

Saturday, June 5th, 2021
World Environmental day

ಮಂಗಳೂರು :  ದೈವದತ್ತವಾದ ಪರಿಸರವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಬಿಟ್ಟುಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು. ಅವರು ಮಂಗಳೂರಿನ ಕದ್ರಿ ಆಶ್ರಮ ಶಾಲೆಯ ಆವರಣದಲ್ಲಿ ಜಿಲ್ಲಾಡಳಿತ, ಮಂಗಳೂರು ಮಹಾನಗರಪಾಲಿಕೆ, ನೆಹರು ಯುವ ಕೇಂದ್ರ, ಮಂಗಳೂರು ಗ್ರೀನ್ ಬ್ರಿಗೇಡ್ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು. ಅರಣ್ಯ ಮತ್ತು ಪರಿಸರವನ್ನು ಉಳಿಸುವುದಲ್ಲದೆ ಅಭಿವೃದ್ಧಿಯ ಹೆಸರಲ್ಲಿ ನಾಶವಾಗುತ್ತಿರುವ ಅರಣ್ಯಕ್ಕೆ ಬದಲಿಯಾಗಿ ಅರಣ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಜನರಲ್ಲಿ […]

ವಸ್ತು ನಿಷ್ಠ, ಮೌಲ್ಯಯುತ ವರದಿಗೆ ಆದ್ಯತೆ ಅಗತ್ಯ: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ

Saturday, January 2nd, 2021
PaGo Award

ಮಂಗಳೂರು: ಕಟ್ ಆ್ಯಂಡ್ ಫೇಸ್ಟ್ ಸುದ್ದಿಯ ಬದಲು ವಸ್ತು ನಿಷ್ಠ ಮೌಲ್ಯಯುತ ಜತೆಗೆ ವಿಮರ್ಶೆಯಿಂದ ಕೂಡಿದ ಪತ್ರಿಕಾ ವರದಿಗಳು ಜನಪರ ಆಡಳಿತ ನಡೆಸಲು ಪೂರಕವಾಗುತ್ತವೆ ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದರು. ಗುರುವಾರ ನಗರದ ಪತ್ರಿಕಾಭವನದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜರುಗಿದ 2019ನೇ ಸಾಲಿನ ಪ.ಗೋ.(ಪದ್ಯಾಣ ಗೋಪಾಲಕೃಷ್ಣ) ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಇಲಾಖೆಯಲ್ಲಿ ವರ್ಷಕ್ಕೆ ಒಂದು ಬಾರಿ ಅಡಿಟ್ ನಡೆಯುವ ಮೂಲಕ ಪಾರದರ್ಶಕತೆಯನ್ನು ಹೆಚ್ಚು ಮಾಡುವಂತೆ […]

ದಕ್ಷಿಣ ಕನ್ನಡ ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ

Thursday, July 30th, 2020
Rajendrakv

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. 2013ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಇವರು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಯಾಗಿದ್ದು, ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ […]