ಹೊಸ ವರ್ಷಾಚರಣೆ ಮತ್ತು ಪಾರ್ಟಿಗಳನ್ನು ನಿಷೇಧಿಸಲು ಮನವಿ

Thursday, December 23rd, 2021
HJS

ಮಂಗಳೂರು  : ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ 31 ರ ರಾತ್ರಿ ಹೊಸ ವರ್ಷಾಚರಣೆಯ ನೆಪದಲ್ಲಿ ಆಗುವ ಅಯೋಗ್ಯ ಆಚರಣೆ ಮತ್ತು ಸಮಾಜದ ಸ್ವಾಸ್ಥ್ಯ ಕಾಪಾಡಲು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಮತ್ತು ಪೊಲೀಸ್ ಕಮಿಶನರ್ ಇವರಿಗೆ ಮನವಿ. ಮಂಗಳೂರು : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ 31 ರ ರಾತ್ರಿ ನಡೆಯುವ ಹೊಸ ವರ್ಷಾಚರಣೆ ಮತ್ತು ಪಾರ್ಟಿಗಳನ್ನು ನಿಷೇಧಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಶ್ರೀ ರಾಜೇಂದ್ರ ಮತ್ತು […]

ಬಾಕಿ ಉಳಿದಿರುವವರಿಗೆ ಲಸಿಕೆ ಹಾಕಿಸುವುದು ಸವಾಲಿನ ಕೆಲಸ: ಡಿಸಿ

Friday, September 17th, 2021
Press Club Vaccination

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಇಂದಿನ ಲಸಿಕಾ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ಏರ್ಪಡಿಸಲಾದ ಕೋವಿಡ್ 19 ಲಸಿಕಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ವಾರ ಲಕ್ಷ ಮಂದಿಗೆ […]

ಆಯುಷ್ಮಾನ್ ಕಾರ್ಡ್ ಇದ್ದರೂ, ರೋಗಿಗಳಿಂದ ಹೆಚ್ಚು ಹಣ ವಸೂಲಿ ಮಾಡಿದ ಏಳು ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ

Saturday, August 7th, 2021
Ayushman

ಮಂಗಳೂರು : ಕೊರೋನಾ ಸೋಂಕು ಬಂದ ಮೇಲಂತೂ ಖಾಸಗಿ ಆಸ್ಪತ್ರೆಗಳ ಸುಲಿಗೆಗಳಿಂದ ಜನ ಮನೆ ಮಠ ಮಾರಿ ತಮ್ಮವರನ್ನೂ ಕಳಕೊಂಡಿದ್ದಾರೆ. ಅದರಲ್ಲೂ ಸರಕಾರದ ಅಯುಷ್ಮಾನ್ ಕಾರ್ಡ್ ಇದ್ದರೂ ಅದನ್ನು ತಿರಸ್ಕರಿಸಿದ ಆಸ್ಪತ್ರೆಗಳು ಹೆಚ್ಚು ಬಿಲ್ಲು ವಸೂಲಿ ಮಾಡುತ್ತಿದ್ದವು. ಅಂತಹ  ಮಂಗಳೂರಿನ ಏಳು ಖಾಸಗಿ ಆಸ್ಪತ್ರೆಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕುಂದು ಕೊರತೆ ಪರಿಹಾರ ಸಮಿತಿ ಸಭೆಯಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಸಂತ್ರಸ್ತರು ದಾಖಲಿಸಿದ್ದ […]

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್. ಪ್ರಕಾಶ್ ವರ್ಗಾವಣೆ ಸಾಧ್ಯತೆ

Wednesday, March 27th, 2013
N. Prakash

ಮಂಗಳೂರು : ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಆದೇಶದಂತೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಪ್ರಾರಂಭವಾಗಿದ್ದು, ರಾಜ್ಯಾದ್ಯಂತ 12 ಜಿಲ್ಲಾಧಿಕಾರಿಗಳು ಸೇರಿದಂತೆ 20 ಮಂದಿ ಐ ಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್. ಪ್ರಕಾಶ್ ಕೂಡ ಸೇರಿದ್ದಾರೆ. ಎನ್. ಪ್ರಕಾಶ್ ಜಾಗಕ್ಕೆ ನೂತನ ಜಿಲ್ಲಾಧಿಕಾರಿ ಹರ್ಷ ಗುಪ್ತ ನೇಮಕಗೊಳ್ಳುವ ಸಾಧ್ಯತೆ ಇದೆ. ಮೂಲತಃ  ದೆಹಲಿಯವರಾಗಿರುವ ಹರ್ಷ 1997ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಾರೆ. ದೆಹಲಿಯಲ್ಲಿ ಸೇವೆ ಸಲ್ಲಿಸಿದ್ದ ಇವರು […]