Blog Archive

ದಕ್ಷಿಣ ಕನ್ನಡ ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ

Thursday, July 30th, 2020
Rajendrakv

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. 2013ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಇವರು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಯಾಗಿದ್ದು, ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ […]

ಕೊರೊನಾ ಸೋಂಕು ಜುಲೈ 25 : ದಕ್ಷಿಣ ಕನ್ನಡ ಜಿಲ್ಲೆ 218, ಉಡುಪಿ ಜಿಲ್ಲೆ182, ಕಾಸರಗೋಡು ಜಿಲ್ಲೆ 105

Saturday, July 25th, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 218 ಮಂದಿಯಲ್ಲಿ ಕೊರೊನಾ ಸೋಂಕು  ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆಯು 4612 ಕ್ಕೆ ಏರಿಕೆಯಾಗಿದೆ. 46 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ, 87 ಐಎಲ್‌ಐ ಪ್ರಕರಣ, 15 ಎಸ್‌ಎಆರ್‌ಐ ಪ್ರಕರಣ ಹಾಗೂ 70 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಕೊರೊನಾ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಶನಿವಾರ  140 ಸೋಂಕಿತರು ಗುಣುಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಜಿಲ್ಲೆಯಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2127 ಕ್ಕೆ ಏರಿಕೆಯಾಗಿದೆ. ಪ್ರಸ್ತುತ 2370 ಮಂದಿ […]

ಕೊರೋನ ಪ್ರಕರಣ ಜುಲೈ 22 : ದಕ್ಷಿಣ ಕನ್ನಡ ಜಿಲ್ಲೆ162, ಉಡುಪಿ ಜಿಲ್ಲೆ281, ಕಾಸರಗೋಡು ಜಿಲ್ಲೆ101

Wednesday, July 22nd, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 162 ಹೊಸ ಕೊರೋನ ಪ್ರಕರಣಗಳು ಪತ್ತೆಯಾಗಿದ್ದು ಜಿಲ್ಲೆಯ ಒಟ್ಟು ಕೊರೋನ ಸೋಂಕು ಪೀಡಿತರ ಸಂಖ್ಯೆ 3,996ಕ್ಕೆ ಏರಿದೆ. ಕೋವಿಡ್‌ಗೆ ಮತ್ತೆ ಐವರು ಬಲಿಯಾಗಿದ್ದು, ಸಾವಿನ ಸಂಖ್ಯೆ 92ಕ್ಕೆ ಏರಿದೆ. ಜಿಲ್ಲೆಯಲ್ಲಿ ಬುಧವಾರ  ಪತ್ತೆಯಾದ ಪ್ರಕರಣಗಳಲ್ಲಿ ಶೀತ ಲಕ್ಷಣ ಹೊಂದಿರುವವರ ಸಂಖ್ಯೆಯೇ ಅಧಿಕ ಮಟ್ಟದಲ್ಲಿದೆ. ಶೀತ-70, ಸೋಂಕಿನ ಮೂಲ ಪತ್ತೆಯಾಗದ 60, ತೀವ್ರ ಉಸಿರಾಟ-18, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 13, ವಿದೇಶದಿಂದ ಆಗಮಿಸಿದ್ದ ಓರ್ವನಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಎಲ್ಲರನ್ನೂ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ, ಚಿಕಿತ್ಸೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮತ್ತೊಂದು ವಾರ ವಿಸ್ತರಣೆ, ಇವತ್ತು ಸಂಜೆ ನಿರ್ಧಾರ

Wednesday, July 22nd, 2020
koto Srinivas

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ  ದಿನಂಪ್ರತಿ ನೂರರ ಗಡಿ ದಾಟುತ್ತಿರುವುದರಿಂದ ಒಂದು ವಾರಗಳ ಕಾಲ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಮತ್ತೊಂದು ವಾರಗಳ ಕಾಲ ವಿಸ್ತರಣೆ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳು ಒಲವು ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಮತ್ತೊಂದು ವಾರಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲು ಜನಪ್ರತಿನಿಧಿಗಳು, ಸಾರ್ವಜನಿಕರು ಒಲವು ತೋರಿಸುತ್ತಿದ್ದಾರೆ. ಜಿಲ್ಲಾಡಳಿತ ಈ ಬಗ್ಗೆ ಚಿಂತನೆ ನಡೆಸುತ್ತಿದೆ […]

ಕೊರೊನಾ ಸೋಂಕು ಜುಲೈ 21 : ದಕ್ಷಿಣ ಕನ್ನಡ ಜಿಲ್ಲೆ 149, ಉಡುಪಿ ಜಿಲ್ಲೆ 84

Wednesday, July 22nd, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಜುಲೈ 21ರಂದು 149 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆಯಾಗಿದೆ. ಮಂಗಳವಾರದಂದು 127 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯ 1675 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದಂತಾಗಿದೆ. ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಸೋಂಕಿಗೆ ಐವರು ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 87 ಕ್ಕೆ ಏರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 84 […]

ಜುಲೈ 23ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್ ತೆರವು

Tuesday, July 21st, 2020
srinivas-poojary

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ  16 ರಿಂದ ಒಂದು ವಾರ ವಿಧಿಸಲಾಗಿದ್ದ ಲಾಕ್‌ಡೌನ್‌ನ್ನುಜುಲೈ 23ಕ್ಕೆ ತೆರವುಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಸದ್ಯ ಜಾರಿಯಲ್ಲಿರುವ ಲಾಕ್‌ಡೌನ್‌ನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಜು.22ರಂದು ರಾತ್ರಿವರೆಗೆ ಇರಲಿದೆ. ಜು.23ರಂದು ಬೆಳಗ್ಗೆ 5ಗಂಟೆಯಿಂದ ಲಾಕ್‌ಡೌನ್ ತೆರವುಗೊಳ್ಳಲಿದ್ದು, ಅಂದು ಎಲ್ಲ ಅಂಗಡಿ-ಮುಂಗಟ್ಟುಗಳು ಸಂಪೂರ್ಣವಾಗಿ ತೆರೆಯಲಿವೆ. ವಾಣಿಜ್ಯ ವ್ಯಾಪಾರವು ಮುಕ್ತವಾಗಿರಲಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆ ಲಾಕ್‌ಡೌನ್‌ ಜು. 23ರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿದೆ

Thursday, July 16th, 2020
lockdown

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನ ಹಾವಳಿ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಜು. 15ರ ರಾತ್ರಿ 8 ಗಂಟೆಯಿಂದ ಲಾಕ್‌ಡೌನ್‌ ಆರಂಭವಾಗಿದೆ. ಜು. 23ರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರಲಿದೆ. ಅನಾವಶ್ಯಕ ತಿರುಗಾಡುತ್ತಿದ್ದವರನ್ನು ಪೊಲೀಸರು ತಡೆದು ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಬೆಳಗ್ಗೆ 8ರಿಂದ ಮಧ್ಯಾಹ್ನ 11ರ ವರೆಗೆ ಪಡಿತರ ಅಂಗಡಿಗಳು, ದಿನಸಿ ಅಂಗಡಿ ಸೇರಿದಂತೆ ಆಹಾರ, ದವಸ ಧಾನ್ಯಗಳು, ಹಣ್ಣು ತರಕಾರಿ ಇತ್ಯಾದಿ ಮಾರಾಟಕ್ಕೆ ಅನುಮತಿ ಇದೆ. ಆರೋಗ್ಯ, ವೈದ್ಯಕೀಯ, ಶಿಕ್ಷಣ, ಪೊಲೀಸ್‌, ಗೃಹ […]

ಕೊರೊನಾ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ 91, ಉಡುಪಿ ಜಿಲ್ಲೆ 72

Wednesday, July 15th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 91 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2452ಕ್ಕೆ ಏರಿಕೆಯಾಗಿದೆ. ಮಂಗಳವಾರ 47 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಆ ಮೂಲಕ 985 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 1414 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 22677 ಮಂದಿಯ ವರದಿ ನೆಗೆಟಿವ್ ಆಗಿದೆ. ಪ್ರಾಥಮಿಕ ಸಂಪರ್ಕದಿಂದ 20 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 29 ಮಂದಿಯಲ್ಲಿ ಐಎಲ್‌‌ಐ ಪ್ರಕರಣ ಪತ್ತೆಯಾಗಿದೆ. 5 ಮಂದಿಯಲ್ಲಿ ಸಾರಿ ಪ್ರಕರಣ ದಾಖಲಾಗಿದೆ. ಅಂತರಾಷ್ಟ್ರೀಯ ಪ್ರಯಾಣದಿಂದ […]

ಕೊರೊನಾ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ131, ಸಾವು 4, ಉಡುಪಿ ಜಿಲ್ಲೆಯಲ್ಲಿ 53 ಸೋಂಕು

Tuesday, July 14th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 131 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 62 ಮಂದಿ ಕೊರೊನಾ ಮುಕ್ತರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ, ಸೋಂಕಿತರ ಸಂಖ್ಯೆ 2361ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ  844 ಮಂದಿ ಸೋಂಕಿತರು ಗುಣಮುಖರಾದಂರಾಗಿ 1467 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇಲ್ಲಿಯ ತನಕ 22589 ಮಂದಿಯ ವರದಿ ನೆಗೆಟಿವ್ ಆಗಿದೆ. ಪ್ರಾಥಮಿಕ ಸಂಪರ್ಕದಿಂದ 16 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 63 ಮಂದಿಯಲ್ಲಿ ಐಎಲ್ ಐ ಪ್ರಕರಣ ಪತ್ತೆಯಾಗಿದೆ. 10 ಮಂದಿಯಲ್ಲಿ ಸಾರಿ ಪ್ರಕರಣ ದಾಖಲಾಗಿದೆ. ಅಂತರಾಷ್ಟ್ರೀಯ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 5 ಜನರನ್ನು ಬಲಿ ಪಡೆದ ಕೋವಿಡ್ ಮಹಾಮಾರಿ

Sunday, July 12th, 2020
corona virus

ಮಂಗಳೂರು : ಕೋವಿಡ್ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗಿದ್ದು ಭಾನುವಾರ ಒಂದೇ ದಿನ 5 ಜನರನ್ನು ಬಲಿ ಪಡೆದುಕೊಂಡಿರುವ ವರದಿ ಬಂದಿದೆ. ಮೃತರಲ್ಲಿ ಬೆಳ್ತಂಗಡಿಯ ಪಿಲಿಚಾಮುಂಡಿಕಲ್ಲು ನಿವಾಸಿ 60 ವರ್ಷದ ವೃದ್ಧ, ಪುತ್ತೂರಿನ‌ ಮೂಲಡ್ಕ ನಿವಾಸಿ 50 ವರ್ಷದ ವ್ಯಕ್ತಿ , ಮಂಗಳೂರಿನ ಉರ್ವಾಸ್ಟೋರ್ ನಿವಾಸಿ 72 ವರ್ಷದ ವೃದ್ಧ, ಮಂಗಳೂರಿನ ಬಳ್ಳಾಲ್ ಭಾಗ್ ನಿವಾಸಿ 60 ವರ್ಷದ ವೃದ್ಧೆ, ಹಾಗೂ ಮಂಗಳೂರಿನ‌ ಬಂದರು ನಿವಾಸಿ 68 ವರ್ಷದ ವೃದ್ಧೆ ಸೋಂಕಿಗೆ ಬಲಿಯಾಗಿದ್ದಾರೆ. ಇಂದು ಸಾವನ್ನಪ್ಪಿದ ಐದು ಮಂದಿಯಲ್ಲಿ […]