ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಮತ್ತು ಪತ್ರಕರ್ತರ ಸಂಘದ ಕೊಡುಗೆ ಅನನ್ಯ : ವೇದವ್ಯಾಸ ಕಾಮತ್

Tuesday, December 28th, 2021
Journalist

ಮಂಗಳೂರು ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಪತ್ರಕರ್ತರ ಮತ್ತು ಪತ್ರಕರ್ತರ ಸಂಘದ ಪಾತ್ರ ಅನನ್ಯವಾದುದು ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಜಿಲ್ಲಾ ಪತ್ರಕರ್ತರ ಸಮ್ಮೇಳನ ‘ಸಾಧನೆ ಸಂಭ್ರಮ-2021’ನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಾದರಿಯಾಗಿ ಕೆಲಸ ಮಾಡುತಿದೆ. ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಲವು ಮಂದಿ ಜನ ಪ್ರತಿನಿಧಿಗಳಿಗೆ, ಸರಕಾರಕ್ಕೆ ಪ್ರೇರಣೆಯಾಗಿದೆ. […]

ಸ್ಮಾರ್ಟ್ ಸಿಟಿ ‘ಕ್ಲೀನ್ ಬೀಚ್’ ಜಾಗೃತಿಗಾಗಿ ಓಟ ಹಾಗು ಸ್ವಚ್ಛತಾ ಕಾರ್ಯಕ್ರಮ

Sunday, December 26th, 2021
Beach-Clean

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕ್ರೆಡೈ ಮಂಗಳೂರು ಮತ್ತು ಮಂಗಳೂರು ವಿವಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಸ್ಮಾರ್ಟ್ ಸಿಟಿ ‘ಕ್ಲೀನ್ ಬೀಚ್’ ಜಾಗೃತಿಗಾಗಿ ಓಟ ಹಾಗು ಸ್ವಚ್ಚತಾ ಕಾರ್ಯಕ್ರಮ ಡಿ.26 ರಂದು ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕರಾವಳಿ ಜಿಲ್ಲೆಯ ಸೌಂದರ್ಯ, ನಮ್ಮ […]

ಪತ್ರಕರ್ತನ ಮೇಲೆ ಹಲ್ಲೆ, ದ.ಕ. ಪತ್ರಕರ್ತರ ಸಂಘದಿಂದ ಪೊಲೀಸ್ ಆಯುಕ್ತರಿಗೆ ಮನವಿ

Tuesday, November 23rd, 2021
Journalist-Attack

ಮಂಗಳೂರು : ಖಾಸಗಿ ಟಿವಿ ವಾಹನಿಯೊಂದರ ಪತ್ರಕರ್ತರ ಮೇಲೆ ನಿನ್ನೆ ನಡೆದ  ಹಲ್ಲೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ  ಇಂದು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಈ ರೀತಿಯ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಪತ್ರವನ್ನು ಪತ್ರಕರ್ತರ ನಿಯೋಗವು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಸಲ್ಲಿಸಿತು. […]

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಆಯ್ಕೆ

Sunday, August 5th, 2018
srinivasa

ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಚುನಾವಣೆ ಭಾನುವಾರ ವಾರ್ತಾ ಇಲಾಖೆಯ ಕಚೇರಿಯಲ್ಲಿ ನಡೆಯಿತು. ಸಂಘದ 222 ಮಂದಿ ಮತದಾನ ಅರ್ಹತೆ ಇರುವ ಸದಸ್ಯರ ಪೈಕಿ 213 ಮಂದಿ ಮತ ಚಲಾಯಿಸಿ ಒಟ್ಟು ಶೇ. 95.94 ಮತ ಚಲಾವಣೆಯಾಯಿತು. 115 ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಆಯ್ಕೆಯಾಗಿದ್ದಾರೆ. ಅವರ ಪ್ರತಿಸ್ಪರ್ಧಿ ಗುರುವಪ್ಪ ಬಾಳೆಪುಣಿ 98 ಮತಗಳನ್ನು ಪಡೆದರು. ಉಪಾಧ್ಯಕ್ಷ ಸ್ಥಾನಕ್ಕೆ ನಾಲ್ಕು ಮಂದಿ ಸ್ಪರ್ಧಿಸಿದ್ದು, ಆ ಪೈಕಿ ಅನ್ಸಾರ್ ಇನೋಳಿ ಮತ್ತು ಶರತ್ ಶೆಟ್ಟಿ ಕಿನ್ನಿಗೋಳಿ […]