Blog Archive

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Friday, February 21st, 2020
dharmastala

ಉಜಿರೆ : ಭಕ್ತರ ದೋಷಗಳನ್ನು ಗ್ರಹಣ ಮಾಡಿ, ಸಂಕಷ್ಟಗಳನ್ನು ಪರಿಹರಿಸುವ ಶಕ್ತಿ ಹೊಂದಿರುವ ಸಾನ್ನಿಧ್ಯಗಳು ತೀರ್ಥಕ್ಷೇತ್ರಗಳಾಗಿ ಬೆಳಗುತ್ತವೆ, ಬೆಳೆಯುತ್ತವೆ. ಸಾರ್ಥಕ ಬದುಕಿಗೆದಾರಿದೀಪವಾಗುತ್ತವೆ. ತಮ್ಮಲ್ಲಿರುವ ಕೋಪ, ದ್ವೇಷ, ಅಸೂಯೆ ಮೊದಲಾದ ಅರಿಷಡ್ವರ್ಗಗಳನ್ನು ಕಳಚಿ, ದುಃಖ, ದುಮ್ಮಾನಗಳನ್ನು ಮರೆಯಲು ಧರ್ಮಸ್ಥಳ ಕ್ಷೇತ್ರಕ್ಕೆ ಭಕ್ತರು ಬರುತ್ತಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಗುರುವಾರ ರಾತ್ರಿ ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆಗೆ ಬಂದ ಪಾದಯಾತ್ರಿಗಳಿಗೆ ಶುಭ ಹಾರೈಸಿ ಮಾತನಾಡಿದರು. ಶಿವ ಭಕ್ತರ ಸರ್ವ ದೋಷಗಳನ್ನು ಸ್ವೀಕರಿಸಿ ವಿಷಕಂಠನಾಗಿ ಭಕ್ತರ […]

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ ! ಪಾದಯಾತ್ರಿಗಳ ಗಡಣ

Thursday, February 20th, 2020
ujire

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಇದೇ 21 ರಂದು ಶುಕ್ರವಾರ ಇಡೀ ರಾತ್ರಿ ಶಿವನಾಮ ಪಂಚಾಕ್ಷರಿ ಪಠಣ, ಭಜನೆ, ಪ್ರಾರ್ಥನೆ, ಜಪ,ತಪ, ಧ್ಯಾನದೊಂದಿಗೆ ಜಾಗರಣೆ ನಡೆಯಲಿದೆ. ಶುಕ್ರವಾರ ಸಂಜೆಗಂಟೆ 5.30 ರಿಂದಇಡೀರಾತ್ರಿ ನಾಲ್ಕು ಜಾವಗಳಲ್ಲಿ ಭಕ್ತರುದೇವರದರ್ಶನ ಮಾಡಿ ಶತರುದ್ರಾಭಿಷೇಕ ಸೇವೆ ಸಲ್ಲಿಸುವರು. ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮೊದಲಾದ ಕಡೆಗಳಿಂದ ಇಪ್ಪತ್ತೈದು ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಶುಕ್ರವಾರ ಬೆಳಿಗ್ಯೆ ಧರ್ಮಸ್ಥಳ ತಲುಪುವರು. ಹತ್ತು ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಈಗಾಗಲೆ ಮುಂಡಾಜೆ, ಚಾರ್ಮಾಡಿ, ಪ್ರದೇಶದಲ್ಲಿ ಬೀಡು ಬಿಟ್ಟಿದ್ದಾರೆ. […]

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ : ಧರ್ಮಸ್ಥಳದಲ್ಲಿ ವ್ಯಸನಮುಕ್ತ ಸಾಧಕರ ಸಮಾವೇಶ

Thursday, February 13th, 2020
ujire

ಉಜಿರೆ : ಭಾರತದ ಆದ್ಯಾತ್ಮಿಕತೆ, ಸಂಸ್ಕೃತಿ-ಸಂಸ್ಕಾರ ಹಾಗೂ ಕುಟುಂಬ ಜೀವನ ಪದ್ಧತಿ ವಿಶ್ವಕ್ಕೆ ಮಾದರಿಯಾಗಿದೆ. ಮನೆಯಲ್ಲಿ ಸ್ವರ್ಗ-ನರಕಎರಡೂಇದೆ. ಗಂಡ-ಹೆಂಡತಿ ಹಾಗೂ ಕುಟುಂಬದ ಸದಸ್ಯರೆಲ್ಲರೂ ಪರಸ್ಪರ ಪ್ರೀತಿ-ವಿಶ್ವಾಸದಿಂದ ಅನ್ಯೋನ್ಯತೆಯಿಂದ ಸೌಹಾರ್ದಯುತ ಜೀವನ ನಡೆಸಿದರೆ ಮನೆಯಲ್ಲೆ ಸ್ವರ್ಗ ಸುಖ ಅನುಭವಿಸಬಹುದು.ಆಗ ಮನೆಯೇ ಮಂತ್ರಾಲಯವಾಗುತ್ತದೆ. ಮನಸೇ ದೇವಾಲಯವಾಗುತ್ತದೆ.ಪರಸ್ಪರ ಅನ್ಯೋನ್ಯತೆ, ಹೊದಾಣಿಕೆ ಹಾಗೂ ಪ್ರೀತಿ-ವಿಶ್ವಾಸಇಲ್ಲವಾದಲ್ಲಿ ಮನೆಯೇ ನರಕ ಸದೃಶವಾಗುತ್ತದೆಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಅನ್ನಾಸಾಹೇಬ್ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿಸಭಾಭವನದಲ್ಲಿ ಅಖಿಲ ಕರ್ನಾಟಕಜನಜಾಗೃತಿ ವೇದಿಕೆ ಆಶ್ರಯದಲ್ಲಿ […]

ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿಕೊಟ್ಟ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ

Wednesday, February 12th, 2020
Jolle

ಬೆಳ್ತಂಗಡಿ  : ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಮಂಗಳವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀಮತಿ ಶಶಿಕಲ ಅಣ್ಣಾಸಾಹೇಬ್‌ಜೊಲ್ಲೆಯವರು ಆಗಮಿಸಿ ಸಿರಿ ಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಇವರು ಸಿರಿ ಸಂಸ್ಥೆಯು ಒಂದು ಕುಟುಂಬವಿದ್ದಂತೆ, ಪೂಜ್ಯರ ಹಾಗೂ ಮಾತೃಶ್ರೀ ಅಮ್ಮನವರ ಮಾರ್ಗದರ್ಶನದ ಈ ಸಂಸ್ಥೆ ಮಹಿಳಾ ಸಬಲೀಕರಣದದೃಢ ಹೆಜ್ಜೆಯ ಸಂಕಲ್ಪದೊಂದಿಗೆಗ್ರಾಮೀಣ ಮಟ್ಟದಲ್ಲಿಗ್ರಾಮೀಣಜನರಿಗೆಉದ್ಯೋಗವನ್ನು ನೀಡಿ ಸ್ಸ-ಸಹಾಯ ಸಂಘದ ಸದಸ್ಯರು ಘಟಕಗಳಲ್ಲಿ ತಯಾರಿಸಿದ ಉತ್ತಮಗುಣಮಟ್ಟದ ಉತ್ಪನ್ನಗಳನ್ನು ಸಿರಿ ಬ್ರಾಂಡಿನ ಮೂಲಕ ಮಾರುಕಟ್ಟೆ ಮಾಡುತ್ತಿದ್ದು ಈ ಸಂಸ್ಥೆ ಉದ್ಯೋಗವನ್ನು […]

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಪ್ರಾರಂಭ

Wednesday, February 5th, 2020
ujire

ಉಜಿರೆ : ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಏಪ್ರಿಲ್ 29, ಬುಧವಾರದಂದು ಸಂಜೆ 6.40ಕ್ಕೆ ಗೋಧೋಳಿ ಲಗ್ನ ಸುಮುಹೂರ್ತದಲ್ಲಿ ನಡೆಯಲಿದ್ದು ಮಂಗಳವಾರ ವಿವಾಹ ನೋಂಧಣಿ ಕಾರ್ಯ ಶುಭಾರಂಭಗೊಂಡಿದೆ. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಪೂಜ್ಯರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ವಿವಾಹ ನೋಂದಣಿ ಕಾರ್ಯಾಲಯವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀನಿವಾಸ ರಾವ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಧರ್ಣಪ್ಪ ಉಪಸ್ಥಿತರಿದ್ದರು.  

ಧರ್ಮಸ್ಥಳ : ಭಗವಾನ್ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಪಾದಾಭಿಷೇಕ

Wednesday, February 5th, 2020
ujire

ಉಜಿರೆ : ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಸ್ವಾಮಿಗೆ ಮಂಗಳವಾರ ಬೆಳಿಗ್ಯೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಿತು. ಮಂಗಲ ಪ್ರವಚನ ನೀಡಿದ ಕಾರ್ಕಳದ ಲಲಿತಕೀರ್ತಿ ಭಟ್ಟಾರಕ ಸಾಮೀಜಿ ಮಾತನಾಡಿ, ಎಲ್ಲೆಲ್ಲೂಅನ್ಯಾಯ, ಕ್ರೋಧ, ದ್ವೇಷ, ವಂಚನೆ ತಾಂಡವವಾಡುತ್ತಿರುವ ಇಂದು ಬಾಹುಬಲಿಯ ತ್ಯಾಗ ಸಂದೇಶ ವಿಶ್ವಮಾನ್ಯವಾಗಿದೆಎಂದು ಹೇಳಿದರು. ಭಾರತ ದೇಶವು ಧರ್ಮ, ಸಂಸ್ಕೃತಿಯ ನೆಲೆವೀಡಾಗಿದ್ದು ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪನೆಗೊಂಡ ಭಗವಾನ್ ಬಾಹುಬಲಿ ಮೂರ್ತಿಯ ಆರಾಧನೆಯಿಂದ ತ್ಯಾಗ, ಅಹಿಂಸೆ, ಸಂಯಮ, ಇಂದ್ರಿಯ ನಿಗ್ರಹ ಮೊದಲಾದ ಮಾನವೀಯ […]

ಧರ್ಮಸ್ಥಳ : ಇಂದು ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Monday, February 3rd, 2020
ratna-giri

ಉಜಿರೆ : ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ (ಬಾಹುಬಲಿ ಬೆಟ್ಟ) ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಸ್ವಾಮಿಗೆ ಮಂಗಳವಾರ ಭವ್ಯಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯುತ್ತದೆ. ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು. ಇದಕ್ಕೆ ಪೂರ್ವಭಾವಿಯಾಗಿ ಸೋಮವಾರ ರತ್ನಗಿರಿಯಲ್ಲಿ ತೋರಣ ಮುಹೂರ್ತ, ವಿಮಾನಶುದ್ಧಿ, ನಾಂದಿ ಮಂಗಲ ಮೊದಲಾದಧಾರ್ಮಿಕ ವಿಧಿ-ವಿಧಾನಗಳು ನಡೆದವು.    

ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯಲ್ಲಿ ಸ್ವಚ್ಛತಾ ಕಾರ್ಯ

Monday, February 3rd, 2020
dharmastala

ಉಜಿರೆ : ಆರುನೂರು ಮಂದಿ ಸಕ್ರಿಯ ಸ್ವಯಂ ಸೇವಕರತಂಡ ಶ್ರೀ ಜನಾರ್ದನ ಸ್ವಾಮಿ ಸೇವಾ ಸಮಿತಿ ಉಜಿರೆಯಲ್ಲಿ ಕಳೆದ ಜನವರಿ 21ರಂದುಉಜಿರೆಜಾತ್ರೆ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆಗೊಂಡಿತ್ತು. ಕಳೆದ ಜೂನ್ ತಿಂಗಳಿನಲ್ಲಿ ಮುಂಡಾಜೆ, ಚಾರ್ಮಾಡಿ ಪರಿಸರದಲ್ಲಿ ನೆರೆ ಪೀಡಿತರಿಗೆ ಸಂಕಷ್ಟದ ಸಂದರ್ಭಅಭಯಹಸ್ತ ನೀಡಿ ಸಹಕರಿಸಿದ ತಂಡ ಪ್ರಾಕೃತಿಕ ವಿಕೋಪಗಳು ಮುಂದೆ ಸಂಭವಿಸಿದಾಗ ನೆರವು ನೀಡಲು ಹಾಗೂ ಸೇವೆ ನೀಡಲು 600 ಜನರ ವ್ಯವಸ್ಥಿತ ಸ್ವಯಂ ಸೇವಕರತಂಡವನ್ನು ರಚಿಸಿದೆ. ಸೇವಾ ಸಮಿತಿಯ ಪ್ರಥಮ ಸೇವೆಯಾಗಿ ಭಾನುವಾರ ಧರ್ಮಸ್ಥಳದಲ್ಲಿ […]

ಧರ್ಮಸ್ಥಳದ ವಿಂಟೇಜ್‌ಕಾರ್ ಮ್ಯೂಸಿಯಂಗೆ ಮರ್ಸಿಡಿಸ್ ಬೆನ್ಜ್‌ ಕಾರು ಕೊಡುಗೆ

Monday, February 3rd, 2020
ujire

ಉಜಿರೆ : ರಾಜಸ್ತಾನದ ವಿಶ್ವಗುರು ಮಹಾಮಂಡಲೇಶ್ವರ ಪರಮಹಂಸ ಸ್ವಾಮಿ ಮಹೇಶ್ವರಾನಂದಜಿ ಭಾನುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ 1972ರ ಮೋಡೆಲ್ ಮರ್ಸಿಡಿಸ್ ಬೆನ್ಜ್‌ಕಾರನ್ನುಕೊಡುಗೆಯಾಗಿ ನೀಡಿದರು. ೨೮೦ ಎಸ್. ಮಾದರಿಯ ಈ ಕಾರುಅತ್ಯುತ್ತಮಕಾರುಎಂದು ತಿಳಿದು ಬಂದಿದೆ. ಸ್ವಾಮೀಜಿಯವರು ಭಾನುವಾರ ಬೆಳಿಗ್ಯೆ ಬೀಡಿನಎದುರು (ಹೆಗ್ಗಡೆಯವರ ನಿವಾಸ) ಕಾರಿನ ಕೀ ಹಸ್ತಾಂತರಿಸುವ ಮೂಲಕ ಕಾರನ್ನುಕೊಡುಗೆಯಾಗಿ ನೀಡಿದರು. ಕೆಲವು ವರ್ಷಗಳ ಹಿಂದೆಜಾಗತಿಕಯೋಗ ಸಮ್ಮೇಳನ ಉದ್ಘಾಟಿಸಲು ಸ್ವಾಮೀಜಿ ಧರ್ಮಸ್ಥಳಕ್ಕೆ ಬಂದಾಗಇಲ್ಲಿನಕಾರ್ ಮ್ಯೂಸಿಯಂ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೆಗ್ಗಡೆಯವರು ಸ್ವಾಮೀಜಿಯವರನ್ನು ಗೌರವಿಸಿದರು. ಸ್ವಾಮೀಜಿಯುರೋಪ್‌ಖಂಡದ ಆಸ್ಟ್ರೀಯಾ […]

ಇಂಗ್ಲೇಂಡ್‌ನ ಮಹಿಳಾ ಉದ್ಯಮಿಗಳ ತಂಡ ಧರ್ಮಸ್ಥಳಕ್ಕೆ ಭೇಟಿ

Tuesday, January 28th, 2020
england

ಉಜಿರೆ : ಇಂಗ್ಲೇಡ್‌ನ ಮಹಿಳಾ ಉದ್ಯಮಿಗಳ ತಂಡ ರೂಪಾ ಗಿರಾರ್ಡ್ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಭಾನುವಾರ ಭೇಟಿಯಾಗಿ ಮಾಹಿತಿ, ಮಾರ್ಗದರ್ಶನ ಪಡೆದರು. ದೇವಸ್ಥಾನ, ಅನ್ನಪೂರ್ಣ ಭೋಜನಾಲಯ, ವಸ್ತು ಸಂಗ್ರಹಾಲಯ ಹಾಗೂ ವಿವಿಧ ವಿಭಾಗಗಳಿಗೆ ಭೇಟಿ ಮಾಡಿ ಮಾಹಿತಿ ಕಲೆ ಹಾಕಿದರು.