ದಕ್ಷಿಣಕನ್ನಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬದಲಾವಣೆಯ ಮಾತು

Tuesday, March 12th, 2024
Nalin-Kateel

ಮಂಗಳೂರು : ದಕ್ಷಿಣಕನ್ನಡ ಲೋಕಸಭಾ ಚುನಾವಣಾ ಅಭ್ಯರ್ಥಿ ಆಯ್ಕೆಯಲ್ಲಿ ಬದಲಾವಣೆಯ ಮಾತು ಕೇಳಿ ಬಂದಿದೆ. ಬಿಜೆಪಿಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲು ಸತತ ಮೂರು ಬಾರಿ ಸ್ಪರ್ಧಿಸಿರುವುದರಿಂದ ಈ ಬಾರಿ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿಯ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ. ಇಆ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಬೇಕು ಎನ್ನುವುದು ನಮ್ಮ ಪಾರ್ಟಿಯ ವಿಶೇಷತೆ. ಪಾರ್ಟಿಯ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಇದನ್ನು ನಾನು […]

ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನದೊಂದಿಗೆ ಮತ್ತೆ ಅಧಿಕ್ಕಾರಕ್ಕೆ ಬರುತ್ತದೆ : ನಳಿನ್ ಕುಮಾರ್ ಕಟೀಲು

Wednesday, September 8th, 2021
nalin kumar

ಬಂಟ್ವಾಳ  : ಮುಂದಿನ ಚುನಾವಣೆಯಲ್ಲಿ 150 ಸ್ಥಾನವನ್ನು ಬಿಜೆಪಿ ಪಡೆಯುವ ಮೂಲಕ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಅನಂತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ 3 ಬೂತ್ ಹಾಗೂ ನೆಟ್ಲಮುಡ್ನೂರು ಗ್ರಾ.ಪಂ.ವ್ಯಾಪ್ತಿಯ 2 ಬೂತ್ ಹಾಗೂ ವೀರಕಂಭ 4 ಬೂತ್ ಗಳ ಅಧ್ಯಕ್ಷ ರುಗಳ ಮನೆಗೆ ಶಾಸಕ ರಾಜೇಶ್ ನಾಯ್ಕ್ ಹಾಗೂ ಬಂಟ್ವಾಳ ಬಿಜೆಪಿ ಮಂಡಲ ಬೇಟಿ ನೀಡಿ ನಾಮಫಲಕ ಅನಾವರಣ 6 ನೇ ದಿನದ […]

ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ 1.40 ಕೋ.ರೂ.ವೆಚ್ಚದಲ್ಲಿ ಅನುಷ್ಠಾನಗೊಂಡ ಆಕ್ಸಿಜನ್ ಘಟಕ ಲೋಕಾರ್ಪಣೆ

Tuesday, July 13th, 2021
Bantwal-Oxygen-plant

ಬಂಟ್ವಾಳ: ಸುಮಾರು 1.40 ಕೋ.ರೂ.ವೆಚ್ಚದಲ್ಲಿ ಅನುಷ್ಠಾನಗೊಂಡ ಆಕ್ಸಿಜನ್ ಘಟಕದಿಂದ ಬಂಟ್ವಾಳದ ಆಕ್ಸಿಜನ್ ಬೇಡಿಕೆಗಳ ಪೂರೈಕೆಯ ಜತೆಗೆ ಇತರ ಭಾಗಗಳಿಗೂ ಆಕ್ಸಿಜನ್ ಪೂರೈಕೆಗೆ ನೆರವಾಗಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸ್ವಾಮ್ಯದ ಕಂಪೆನಿಗಳ ಸಾರ್ವಜನಿಕ ಹೊಣೆಗಾರಿಕಾ ನಿಧಿಯಿಂದ 1.40  ಕೋ.ರೂ.ವೆಚ್ಚದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತೃತ್ವದಲ್ಲಿ ಅನುಷ್ಠಾನಗೊಳಿಸಿದ ನಿಮಿಷಕ್ಕೆ 500 ಲೀ. ಉತ್ಪಾದನಾ ಸಾಮರ್ಥ್ಯದ ನೂತನ ಆಕ್ಸಿಜನ್ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. […]

ದೇಶದ 9 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ಸುಮಾರು 18,000 ಕೋಟಿ ರೂ.ಗಳು ವರ್ಗಾವಣೆ

Friday, December 25th, 2020
Vajapayee Birthday

ಮಂಗಳೂರು :  ರಾಜಕೀಯವನ್ನು ಪ್ರಾಮಾಣಿಕತೆ, ಶ್ರದ್ಧೆ ಹಾಗೂ ರಾಷ್ಟ್ರಭಕ್ತಿಯ ಚೌಕಟ್ಟಿನಲ್ಲಿ ನಿಲ್ಲಿಸಿದವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ. ಇದೀಗ ಅವರ ಚಿಂತನಾ ಹಾದಿಯಲ್ಲಿ ಪ್ರಧಾನಿ ಮೋದಿಯವರು ಕಿಸಾನ್ ಸಮ್ಮಾನ್‌ನಂತಹ ಹಲವಾರು ಯೋಜನೆ, ಕಾಯ್ದೆಗಳ ಮೂಲಕ ರೈತರಿಗೂ ಸ್ವಾಭಿಮಾನದ ಬದುಕನ್ನು ಕಲ್ಪಿಸುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ನಗದರ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ದ.ಕ. ಜಿಲ್ಲಾ ಬಿಜೆಪಿ ಘಟಕ ಹಾಗೂ ರೈತ ಮೋರ್ಛಾದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್ […]

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಧಿಕಾರ ಪಡೆಯುವುದು ಪಕ್ಷದ ಗುರಿ : ಅಶ್ವತ್ಥ್ ನಾರಾಯಣ

Saturday, November 28th, 2020
Ashwath Narayana

ಮಂಗಳೂರು : ವಿವಿಧ ಜ್ಞಾನ ಕ್ಷೇತ್ರ ಗಳ ನಡುವೆ ಪರಸ್ಪರ ಸಮನ್ವಯ ಮೂಡಿಸುವ ನಿಟ್ಟಿನಲ್ಲಿ ನೂತನ ಶಿಕ್ಷಣ ನೀತಿ ರೂಪಿಸಲಾಗಿದೆ. ವಿಜ್ಞಾನ ತಂತ್ರಜ್ಞಾನ ಸೇರಿದಂತೆ ವಿವಿಧ ಶೈಕ್ಷಣಿಕ ಕ್ಷೇತ್ರಗಳ ನಡುವೆ ಪರಸ್ಪರ ಸಮನ್ವಯ ಸಾಧಿಸಲು ಸಮಗ್ರ ವ್ಯವಸ್ಥೆಯಲ್ಲಿ ಸುಧಾರಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ಅವರು ನಗರದ ಬಿಜೆಪಿ ಕಚೇರಿಯಲ್ಲಿಂದು ಸುದ್ದಿ ಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿ ಮುಂದಿನ ಹಂತದಲ್ಲಿ ಮಗುವಿಗೆ ಮೂರು ವರ್ಷ ತುಂಬುವ ಹಂತದಿಂದಲೇ ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಡಾ.ಅಶ್ವತ್ಥ್ […]

ಮಂಗಳೂರು ಬಿಜೆಪಿ ಕಚೇರಿಯಲ್ಲಿ ಗೋಪೂಜೆ

Monday, November 16th, 2020
BJP Gopooja

ಮಂಗಳೂರು : ಗೋವನ್ನು ವಿಶ್ವದ ತಾಯಿ ಎಂದು ಬಣ್ಣಿಸಲಾಗಿದೆ. ಮನುಷ್ಯನ ಹುಟ್ಟಿನಿಂದ ಸಾವಿನವರೆಗೆ ಗೋವು ಅವಿಭಾಜ್ಯ ಅಂಗವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಗೋಪೂಜೆ ನೆರವೇರಿಸಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಬಿಜೆಪಿ ಕಚೇರಿ ಮುಂಭಾಗ ಗೋಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು. ಗೋವಿನ ಸಂರಕ್ಷಣೆ ಎಂದರೆ ರಾಷ್ಟ್ರದ, ಕೃಷಿ ಹಾಗೂ ಕುಟುಂಬದ ಸಂರಕ್ಷಣೆ ಮಾಡಿದಂತೆ . ಹಾಗಾಗಿ ತನ್ನದೆಲ್ಲವನ್ನೂ ತ್ಯಾಗ ಮಾಡುವ ಗೋವಿನ ಪೂಜೆ ಮಾಡುವುದು ಭಾರತೀಯ […]

ಯುನಿಟ್ ಗೆ 2 ಸಾವಿರ ರೂ.ನಂತೆ ಎಲ್ಲರಿಗೂ ಮರಳು ದೊರಕಲಿದೆ : ರಾಧಾಕೃಷ್ಣ

Monday, September 21st, 2020
Radhakrishana

ಮಂಗಳೂರು: ಮಾಜಿ ಸಚಿವ ರಮಾನಾಥ ರೈಯವರು ಎರಡು ಸಾವಿರಕ್ಕೆ ಮರಳು ಎಂದು ನಳಿನ್ ಕುಮಾರ್ ಕಟೀಲು ಹೇಳಿದ್ದನ್ನು ಟೀಕಿಸಿದ್ದರು ಆದರೆ ಯುನಿಟ್ ಗೆ 2 ಸಾವಿರ ರೂ.ನಂತೆ ಎಲ್ಲರಿಗೂ ಮರಳು ದೊರಕಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ರಾಧಾಕೃಷ್ಣ ಹೇಳಿದ್ದಾರೆ. ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರ ಇರುವಾಗ ಮರಳು ಮಾಫಿಯಾ ನಡೆಯುತ್ತಿತ್ತು ನಾವು 2 ಸಾವಿರ ರೂ.ಗೆ ಎಲ್ಲರಿಗೂ ಮರಳು ವಿತರಣೆ ಮಾಡುತ್ತೇವೆ ಎಂದು ನಳಿನ್ ಕುಮಾರ್ ಕಟೀಲು  ಹೇಳಿದ್ದರು. ಇದಕ್ಕೆ ಪರವಾಗಿ ನಗರದ ಬಿಜೆಪಿ ಕಚೇರಿಯಲ್ಲಿ ಸ್ಪಷ್ಟನೆ ನೀಡಿದ ಅವರು, ಜಿಲ್ಲೆಯಲ್ಲಿ ಮರಳು ಮಾಫಿಯಾ […]

ಜನಧನ ಖಾತೆಗಳಿಗೆ 10 ಸಾವಿರ ರೂ. ಮುಂಗಡ ಪಡೆಯುವ ಸೌಲಭ್ಯ ಇದೆ : ನಳಿನ್‌ ಕುಮಾರ್‌ ಕಟೀಲು

Tuesday, May 19th, 2020
nalin Kateel

ಮಂಗಳೂರು: ದಕ್ಷಿಣ ಕನ್ನಡದಲ್ಲಿರುವ ಕೆಲವು ಕೇರಳದ ಚಿನ್ನ ಅಡವು  ಇಟ್ಟು ಸಾಲ ನೀಡುವ ಫೈನಾನ್ಸ್ ಗಳು, ಬ್ಯಾಂಕುಗಳು ವಿಪರೀತ ಬಡ್ಡಿ ವಸೂಲಿ ಮಾಡುತ್ತಿದ್ದು ಲಾಕ್ ಡೌನ್ ಅವಧಿ ಮರ್ಚ್ ನಿಂದ ಮೇ ವರೆಗೂ ಯಾವುದೇ ಮುಲಾಜು ಇಲ್ಲದೆ ಬಡ್ಡಿ ಹಾಕಿ ನೋಟೀಸು ಜಾರಿ ಮಾಡಿದ ದೂರುಗಳು ಬಂದಿವೆ. ಲಾಕ್‌ಡೌನ್‌ನಿಂದ ಜನತೆ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಬ್ಯಾಂಕ್‌ ಅಧಿಕಾರಿಗಳು ಯಾವುದೇ ಕಾರಣಕ್ಕೂ ಬಲವಂತದಿಂದ ಯಾರಿಂದಲೂ ಸಾಲ,  ಬಡ್ಡಿ ವಸೂಲಿ ಮಾಡಬಾರದು ಹಾಗೂ ಕೇಂದ್ರ ಸರಕಾರ ಜಾರಿಗೊಳಿಸಿರುವ ಮಹತ್ವದ ಆರ್ಥಿಕ ಯೋಜನೆಗಳನ್ನು ಎಲ್ಲರಿಗೂ […]

ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Tuesday, February 25th, 2020
BJP

ಮಂಗಳೂರು : ನೂತನ ಜಿಲ್ಲಾಧ್ಯಕ್ಷರ ಪದಗ್ರಹಣವೆಂದರೆ ಅಧಿಕಾರ ಸ್ವೀಕಾರ ಮಾತ್ರವಲ್ಲ; ಮುಂದಿನ ಗ್ರಾ. ಪಂ. ಚುನಾವಣೆಯಲ್ಲಿ ಪಕ್ಷ ಅಭೂತಪೂರ್ವ ಜಯ ದಾಖ ಲಿಸುವುದಲ್ಲದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ 8 ಶಾಸಕ ಸ್ಥಾನಗಳನ್ನು ಗೆಲ್ಲುವ ಪ್ರತಿಜ್ಞೆಯನ್ನು ಸ್ವೀಕರಿಸುವ ಕಾರ್ಯಕ್ರಮವೂ ಹೌದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದರು. ಕುದ್ಮುಲ್ ರಂಗರಾವ್‌ ಪುರಭವನದಲ್ಲಿ ಸೋಮವಾರ ಜರಗಿದ ಬಿಜೆಪಿ ದಕ್ಷಿಣ ಕನ್ನಡ ನೂತನ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ ಅವರ ಪದಗ್ರಹಣದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

ಋಣಮುಕ್ತ ಹೋರಾಟ ಸಮಿತಿಯಿಂದ ಸಂಸದರ ಭೇಟಿ

Monday, December 16th, 2019
nalin

ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಋಣಮುಕ್ತ ಹೋರಾಟ ಸಮಿತಿಯ ವತಿಯಿಂದ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರೂ, ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಶ್ರೀ ನಳಿನ್ ಕುಮಾರ್ ಕಟೀಲುರವರಿಗೆ ಮೈಕ್ರೋಫೈನಾನ್ಸ್ ಸಾಲಮನ್ನಾ ಹಾಗೂ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಮನವಿ ನೀಡಲಾಯಿತು. ಮನವಿ ಸ್ವೀಕರಿಸಿದ ಸಂಸದರು ಈ ಬಗ್ಗೆ ಸರಕಾರದ ಗಮನಸೆಳೆಯುವುದಾಗಿ ಭರವಸೆ ನೀಡಿದರು ಮತ್ತು ಮೈಕ್ರೋ ಫೈನಾನ್ಸ್ ಗಳ ದಬ್ಬಾಳಿಕೆಗಳ ವಿರುದ್ಧ ನಾನೂ ಧ್ವನಿ ಎತ್ತಲಿದ್ದೇನೆ ಮತ್ತು ಉಡುಪಿಯಲ್ಲಿ ನಡೆಯುವ ಬ್ರಹತ್ ಪ್ರತಿಭಟನೆಯಲ್ಲಿ ನಾನೂ ಭಾಗವಹಿಸಲಿದ್ದೇನೆ […]