Blog Archive

ಋಣಮುಕ್ತ ಹೋರಾಟ ಸಮಿತಿಯಿಂದ ಸಂಸದರ ಭೇಟಿ

Monday, December 16th, 2019
nalin

ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಋಣಮುಕ್ತ ಹೋರಾಟ ಸಮಿತಿಯ ವತಿಯಿಂದ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರೂ, ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಶ್ರೀ ನಳಿನ್ ಕುಮಾರ್ ಕಟೀಲುರವರಿಗೆ ಮೈಕ್ರೋಫೈನಾನ್ಸ್ ಸಾಲಮನ್ನಾ ಹಾಗೂ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಮನವಿ ನೀಡಲಾಯಿತು. ಮನವಿ ಸ್ವೀಕರಿಸಿದ ಸಂಸದರು ಈ ಬಗ್ಗೆ ಸರಕಾರದ ಗಮನಸೆಳೆಯುವುದಾಗಿ ಭರವಸೆ ನೀಡಿದರು ಮತ್ತು ಮೈಕ್ರೋ ಫೈನಾನ್ಸ್ ಗಳ ದಬ್ಬಾಳಿಕೆಗಳ ವಿರುದ್ಧ ನಾನೂ ಧ್ವನಿ ಎತ್ತಲಿದ್ದೇನೆ ಮತ್ತು ಉಡುಪಿಯಲ್ಲಿ ನಡೆಯುವ ಬ್ರಹತ್ ಪ್ರತಿಭಟನೆಯಲ್ಲಿ ನಾನೂ ಭಾಗವಹಿಸಲಿದ್ದೇನೆ […]

ಬಿಜೆಪಿ ಮೇಲೆ ವಿಶ್ವಾಸವಿಟ್ಟು ಮತದಾರರು ಅಭೂತಪೂರ್ವ ಜಯ ನೀಡಿದ್ದಾರೆ : ನಳಿನ್ ಕುಮಾರ್

Friday, November 15th, 2019
nalin-kumar

ಮಂಗಳೂರು : ಬಿಜೆಪಿಯ ಮೇಲೆ ವಿಶ್ವಾಸವಿಟ್ಟು ಮಂಗಳೂರಿನ ಜನತೆ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ ನೀಡಿದ್ದಾರೆ. ಜನತೆಯ ಆಶಯಕ್ಕೆ ತಕ್ಕಂತೆ ಮುಂದಿನ ದಿನಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಜವಾಬ್ದಾರಿಯುತ ಆಡಳಿತ ನೀಡಲಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವಾಗ ಮಂಗಳೂರು ಮಹಾನಗರ ಪಾಲಿಕೆಯಲ್ಲೂ ಬಿಜೆಪಿ ಆಡಳಿತ ಬರಬೇಕು ಎಂಬ ನೆಲೆಯಲ್ಲಿ ಮತದಾರರು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ಮಂಗಳೂರು ಮಹಾನಗರ ಅಭಿವೃದ್ಧಿಗೆ ಈಗ […]

ಮಂಗಳೂರು : ರಾಜ್ಯದ ಬಿಜೆಪಿ ಸರಕಾರದ ‘ನೂರು ದಿನ ನೂರು ಸಾಧನೆ’ ಎಂಬ ಪುಸ್ತಕ ಬಿಡುಗಡೆ

Friday, November 8th, 2019
100-dina-pustaka

ಮಂಗಳೂರು : ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ಯಡಿಯೂರಪ್ಪ ನೇತೃತ್ವದ ರಾಜ್ಯದ ಬಿಜೆಪಿ ಸರಕಾರ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ‘ನೂರು ದಿನ ನೂರು ಸಾಧನೆ’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿದರು. ಕಳೆದ ಒಂದೂವರೆ ವರ್ಷಗಳಲ್ಲಿ ಅಭಿವೃದ್ಧಿಯಲ್ಲಿ ಕುಂಟುತ್ತಾ ಮಲಗಿದ್ದ ರಾಜ್ಯ ಸರಕಾರ ಇದೀಗ ಓಡಲು ಆರಂಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ರಾಜ್ಯದಲ್ಲಿ ಹಲವು ಸವಾಲುಗಳ ಮಧ್ಯೆಯೇ […]

ಮಂಗಳೂರು : ಹೆದ್ದಾರಿ ದುರಸ್ತಿ ಬಗ್ಗೆ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲು ನಳಿನ್‌ ಕುಮಾರ್‌ ಕಟೀಲು ಸೂಚನೆ

Wednesday, October 16th, 2019
nalin-kumar

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮತ್ತು ಇತರ ಕಾರಣಗಳಿಗೆ ಗುಂಡಿ ಬಿದ್ದಿರುವ ಹೆದ್ದಾರಿಯನ್ನು ತತ್‌ಕ್ಷಣವೇ ದುರಸ್ತಿ ಗೊಳಿಸುವ ಜತೆಗೆ ಈ ಕುರಿತ ಪ್ರಗತಿ ಪರಿಶೀಲನ ವರದಿಯನ್ನು ಜಿಲ್ಲಾಧಿಕಾರಿಗೆ ನೀಡುವಂತೆ ಸಂಸದ ನಳಿನ್‌ ಕುಮಾರ್‌ ಕಟೀಲು ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಂಗಳವಾರ ನಡೆದ ರಾಷ್ಟ್ರೀಯ ಹೆದ್ದಾರಿ ಮತ್ತು ಇತರ ರಸ್ತೆಗಳ ದುರಸ್ತಿ ಬಗ್ಗೆ ಇಲಾಖಾಧಿಕಾರಿಗಳ ಸಭೆಯಲ್ಲಿ ಸಂಸದರು ಈ ಸೂಚನೆ ನೀಡಿದ್ದಾರೆ. ಬಿ.ಸಿ. ರೋಡ್‌ನಿಂದ ಸುರತ್ಕಲ್‌ವರೆಗಿನ ಹೆದ್ದಾರಿ ಹದಗೆಟ್ಟಿದ್ದು, ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಳೆ ಕಡಿಮೆಯಾದರೂ […]

ಮಂಗಳೂರು : ಸ್ಮಾರ್ಟ್‌ ಸಿಟಿ ಯೋಜನೆಯಡಿಯಲ್ಲಿ ಒಂದು ಬಸ್‌ ನಿಲ್ದಾಣ ನಿರ್ಮಾಣಕ್ಕೆ 12 ಲ.ರೂ.

Tuesday, September 17th, 2019
Kadri-bus-stand

ಮಂಗಳೂರು : ಸ್ಮಾರ್ಟ್‌ ಸಿಟಿ ಯೋಜನೆಯಡಿಯಲ್ಲಿ ನಗರದಲ್ಲಿ ನಿರ್ಮಿಸಲಾಗಿರುವ ಬಸ್‌ ನಿಲ್ದಾಣಗಳು ಅವೈಜ್ಞಾನಿಕವಾಗಿದೆ ಎಂದು ಸಾರ್ವ ಜನಿಕರು ಆರೋಪಿಸಿರುವ ಬೆನ್ನಲ್ಲೇ ಇದೀಗ ಈ ಅವೈಜ್ಞಾನಿಕ ಬಸ್‌ ನಿಲ್ದಾಣಕ್ಕೆ ಬರೋಬರಿ 12 ಲಕ್ಷ ರೂ. ಖುರ್ಚು ಮಾಡಲಾಗಿದೆ ಎನ್ನುವ ಅಚ್ಚರಿ ಹಾಗೂ ಆಘಾತಕಾರಿ ಅಂಶವೊಂದು ಬೆಳಕಿಗೆ ಬಂದಿದೆ. ಕಳೆದ ವಾರ ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಅಧ್ಯಕ್ಷತೆಯಲ್ಲಿ ಜಿ.ಪಂ. ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಯಡಿಯಲ್ಲಿ ನಿರ್ಮಾಣವಾದ […]

ಹೆದ್ದಾರಿ ರಸ್ತೆಗಳ ದುರಸ್ತಿ : ಅಕ್ಟೋಬರ್‌ ಅಂತ್ಯದೊಳಗೆ ಪೂರ್ಣ

Friday, September 13th, 2019
Nalin-kumar

ಮಂಗಳೂರು : ಹದಗೆಟ್ಟಿರುವ ರಾಷ್ಟ್ರೀಯ/ರಾಜ್ಯ ಹೆದ್ದಾರಿಗಳು, ಘಾಟಿ ರಸ್ತೆಗಳು, ಲೋಕೋಪಯೋಗಿ ರಸ್ತೆಗಳು, ಜಿಲ್ಲಾ ಮುಖ್ಯ ರಸ್ತೆಗಳ ದುರಸ್ತಿಯನ್ನು ಅಕ್ಟೋಬರ್‌ ಅಂತ್ಯದೊಳಗೆ ಪೂರ್ಣಗೊಳಿ ಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸಂಸದ ನಳಿನ್‌ ಕುಮಾರ್‌ ಕಟೀಲು ಸೂಚಿಸಿದ್ದಾರೆ. ಅವರು ದ.ಕ. ಜಿ.ಪಂ. ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಂತ್ರಿಕ ಅಥವಾ ಆರ್ಥಿಕ ನೆಪ ಹೇಳಿ ಕಾಮಗಾರಿ ವಿಳಂಬವಾಗಬಾರದು. ಕೇಂದ್ರ ಮಾತ್ರವಲ್ಲ ರಾಜ್ಯ ಸರಕಾರದಿಂದ ಹಣಕಾಸಿನ ನೆರವು ಅವಶ್ಯವಿದ್ದರೆ […]

ನಳಿನ್ ಕುಮಾರ್ ಕಟೀಲು ವಿರುದ್ಧ ಹೋರಾಟ ನಡೆಸಲು ಐವನ್ ಡಿಸೋಜ ತಯಾರಿ

Tuesday, September 10th, 2019
ivan d souza

ಮಂಗಳೂರು : ಸಿದ್ದರಾಮಯ್ಯ ಬಗ್ಗೆ ತಪ್ಪು ಭಾವನೆ ಬರುವಂತೆ ಹೇಳಿಕೆ ನೀಡುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನಿಲ್ಲಿಸಲಿ. ಇದು ಅವರ ಕನಿಷ್ಠ ಜ್ಞಾನವನ್ನು ತೋರಿಸಿಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಕಟೀಲ್ ವಿರುದ್ಧ ಹರಿಹಾಯ್ದರು. ನಗರದ ಲಾಲ್ ಬಾಗ್ನ ಮನಪಾದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರೇ ಡಿ.ಕೆ.ಶಿವಕುಮಾರ್ ಮೇಲೆ ಕೇಸು ದಾಖಲಿಸಲು ಪ್ರಮುಖ ಕಾರಣ ಎಂದು ಸಂಸದ ನಳಿನ್ ಕುಮಾರ್ ಆರೋಪಿಸಿದ್ದಾರೆ. ನಳಿನ್ ಕುಮಾರ್ ಯಾವ ರೀತಿ ಮಾತನಾಡುತ್ತಾರೆ, […]

ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸಂಸದ ನಳಿನ್‌ ಕುಮಾರ್‌ ಕಟೀಲು : ರಾಜ್ಯಾಧ್ಯಕ್ಷ ಸ್ಥಾನ ಹುದ್ದೆಯಾಗಿ ಅಲ್ಲ, ಜವಾಬ್ದಾರಿಯಾಗಿ ಸ್ವೀಕರಿಸುತ್ತೇನೆ

Thursday, August 22nd, 2019
Nalin-kumar

ಮಂಗಳೂರು : ಯಾವುದೇ ಪದವಿ ನಿರೀಕ್ಷಿಸದೆ ಪಕ್ಷಕ್ಕಾಗಿ ದುಡಿದಿದ್ದೇನೆ. ಪಕ್ಷದ ನಾಯಕರು ಮತ್ತು ಹಿರಿಯರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದು, ಅದನ್ನು ಹುದ್ದೆಯಾಗಿ ಅಲ್ಲ, ಜವಾಬ್ದಾರಿಯಾಗಿ ಸ್ವೀಕರಿಸುತ್ತೇನೆ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು. ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಬುಧವಾರ ಬಿಜೆಪಿ ಕಚೇರಿಗೆ ಆಗಮಿಸಿ, ನಾಯಕರು, ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಚಿಕ್ಕಂದಿನಲ್ಲೇ ಸಂಘ ಪರಿವಾರದ ಕಾರ್ಯಕರ್ತನಾಗಿ ಹಲವು ಸವಾಲುಗಳ ಮಧ್ಯೆ ಈಜುತ್ತಲೇ ಇಲ್ಲಿವರೆಗೆ ಬಂದಿದ್ದೇನೆ. ಭಾರತ ಮಾತೆಯ ಗೌರವವನ್ನು […]

ರಾಜ್ಯ ಬಿಜೆಪಿಗೆ ನಳಿನ್ ಕುಮಾರ್ ಕಟೀಲು ಅಧ್ಯಕ್ಷ

Tuesday, August 20th, 2019
nalin kumar kateel

ಮಂಗಳೂರು : ರಾಜ್ಯ ಬಿಜೆಪಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ , ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಇಂದು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಶಾಕ್ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ […]

ನಳಿನ್ 2 ಲಕ್ಷ ಅಂತರದಲ್ಲಿ ಗೆಲುವು: ರಾಜೇಶ್ ನಾಯ್ಕ್

Tuesday, April 16th, 2019
Rajesh Naik

ಬಂಟ್ವಾಳ: ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರ ಈ ಬಾರಿ 2 ಲಕ್ಷ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಬಿಸಿರೋಡಿನ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 16 ಸಾವಿರ ಅಂತರದಲ್ಲಿ ಗೆಲುವು ಸಾಧಿಸಿದ್ದು , ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ 20ಸಾವಿರ ಅಂತರ ನೀಡುವ ವಿಶ್ವಾಸ ವಿದೆ […]