ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಹಾರಿ ನಾಪತ್ತೆ ಯಾದ ಮಹಿಳೆ

Saturday, November 20th, 2021
Netravathi

ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಮಹಿಳೆಯೋರ್ವಳು ನದಿಗೆ ಹಾರಿ ನಾಪತ್ತೆ ಯಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆ ಗೆ ನೇತ್ರಾವತಿ ಸೇತುವೆಯಿಂದ ಮಹಿಳೆಯೊರ್ವಳು ಹಾರಿದ್ದನ್ನು ವಾಹನ ಸವಾರರು ನೋಡಿ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೂಡಲೇ ಸ್ಥಳೀಯ ಮುಳುಗುಗಾರರು ದೋಣಿಯ ಮೂಲಕ ನೇತ್ರಾವತಿ ಸೇತುವೆಯ ಬಳಿಗೆ ಬಂದರೂ ಅದಾಗಲೇ ಮಹಿಳೆ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ. ನದಿಗೆ ಹಾರಿದ ಮಹಿಳೆ ಯಾರು ಎಂಬ ಮಾಹಿತಿ […]

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಮಹಿಳೆಯ ಮೃತದೇಹ

Friday, August 7th, 2020
wonman-deadbody

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬಜತ್ತೂರು ಗ್ರಾಮದ ನೀರಕಟ್ಟೆ ಡ್ಯಾಮ್ ಬಳಿಯ ನೇತ್ರಾವತಿ ನದಿಯಲ್ಲಿ ಆ. 6ರಂದು ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ದೇಹವೂ ನದಿ ನೀರಿನಲ್ಲಿ ತೇಲಿಕೊಂಡು ಬಂದು ನೀರಕಟ್ಟೆ ವಿದ್ಯುತ್ ಸ್ಥಾವರದ ಆಣೆಕಟ್ಟಿನ ಕಸದ ರಾಶಿ ಜೊತೆ ಸೇರಿತ್ತು.ಈ ಬಗ್ಗೆ ವಿದ್ಯುತ್ ಸ್ಥಾವರದ ಕೆಲಸಗಾರರು ಪೊಲೀಸರಿಗೆ ಮಾಹಿತಿ ನೀಡಿದ್ದು, ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದು ತನಿಖೆ ಮುಂದುವರೆಸಿದ್ದಾರೆ. ಸುಮಾರು 40 ರಿಂದ 50 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಇದಾಗಿದ್ದು, ಮೃತ […]

ಕರಾವಳಿಯಲ್ಲಿ ಮತ್ತೆ ಮುಂದುವರಿದ ಮಳೆ

Wednesday, September 4th, 2019
ಕರಾವಳಿಯಲ್ಲಿ ಮತ್ತೆ ಮುಂದುವರಿದ ಮಳೆ

ಮಂಗಳೂರು : ಕರಾವಳಿ, ಮಲೆನಾಡಿ ನಾದ್ಯಂತ ಮಂಗಳವಾರ ಉತ್ತಮ ಮಳೆ ಸುರಿದಿದ್ದು, ಕೆಲವೆಡೆಗಳಲ್ಲಿ ಹಾನಿಯನ್ನೂ ಉಂಟು ಮಾಡಿದೆ. ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಿಂದ ಚಾರ್ಮಾಡಿ ಭಾಗದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಕಡಲಬ್ಬರ ಕೂಡ ಅಧಿಕವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗಿ ನಿಂದಲೇ ದಿನವಿಡೀ ಆಗಾಗ ಮಳೆ ಸುರಿದಿದೆ. ಕರಾವಳಿಯಲ್ಲಿ ಸೋಮವಾರದಿಂದ ನಾಲ್ಕು ದಿನಗಳ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸ ಲಾಗಿತ್ತು. ಅಲರ್ಟ್‌ ಗುರುವಾರದ ತನಕ ಇರಲಿದ್ದು, ಕರಾವಳಿ ಪ್ರದೇಶದಲ್ಲಿ ಉತ್ತಮ ಮಳೆಯಾಗುವ ಸಂಭವವಿದೆ ಎಂಬುದಾಗಿ ಹವಾಮಾನ […]

ನೇತ್ರಾವತಿ ಸೇತುವೆಯಲ್ಲಿ ಬುಲೆಟ್ ಬೈಕ್ ಡಿಕ್ಕಿ, ಓರ್ವ ಸಾವು

Tuesday, August 27th, 2019
ullal

ಉಳ್ಳಾಲ: ಮಂಗಳೂರು ಉಳ್ಳಾಲ ನಡುವಿನ ನೇತ್ರಾವತಿ ಸೇತುವೆಯಲ್ಲಿ ಬುಲೆಟ್ ಬೈಕೊಂದು ಟೋಯಿಂಗ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ಗಂಭೀರ ಗಾಯಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ತೊಕ್ಕೊಟ್ಟು ನಿವಾಸಿ ಅಭೀಷ್ ನಾಯರ್ ಎಂದು ಗುರುತಿಸಲಾಗಿದೆ.    

ನೇತ್ರಾವತಿ ಸೇತುವೆಯಿಂದ ಹಾರಿ ಯುವಕನೋರ್ವ ಆತ್ಮಹತ್ಯೆ

Saturday, August 17th, 2019
sadaashiva

ಮಂಗಳೂರು : ನೇತ್ರಾವತಿ ಸೇತುವೆಯಿಂದ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿರುವ ಘಟನೆ ಆ.16 ರ ಶುಕ್ರವಾರ ತಡರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿರುವ ಯುವಕ ಕಡಬದ ನಿವಾಸಿ 29 ವರ್ಷದ ಸದಾಶಿವ ಎಂದು ತಿಳಿದುಬಂದಿದೆ. ಈತ ನಿನ್ನೆ ರಾತ್ರಿ 9.30 ರ ಸುಮಾರಿಗೆ ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಅಕ್ರಮ ಮರಳುಗಾರಿಕೆ: 25 ಲೋಡು ಮರಳು, 17 ದೋಣಿ ವಶಕ್ಕೆ

Saturday, December 1st, 2018
manglore

ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಪ್ರದೇಶದ ಮೇಲೆ ಶುಕ್ರವಾರ ಪೊಲೀಸರು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸುಮಾರು 25 ಲೋಡು ಮರಳು ಮತ್ತು ಮರಳುಗಾರಿಕೆಗೆ ಬಳಸಿದ 17 ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಅಡ್ಯಾರ್ ಗ್ರಾಮದ ಸಹ್ಯಾದ್ರಿ ಕಾಲೇಜಿನ ಹಿಂದುಗಡೆ ನೇತ್ರಾವತಿ ನದಿ ತೀರದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲಾಗುತ್ತಿತ್ತು. ಮರಳುಗಾರಿಕೆ ನಡೆಸುತ್ತಿದ್ದವರು ಅಲ್ಲಿಂದ ಪರಾರಿಯಾಗಿದ್ದು, ಸರಿಸುಮಾರು 18 ಲಕ್ಷ ರೂ. ಮೌಲ್ಯದ ಸೊತ್ತನ್ನು ಪೊಲೀಸರು ಶಪಡಿಸಿಕೊಂಡಿದ್ದಾರೆ. ದಾಸ್ತಾನು ಮಾಡಿದ […]

ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ಮಳೆ..ಕೆಲವು ಶಾಲೆಗಳಿಗೆ ರಜೆ ಘೋಷಣೆ!

Thursday, August 16th, 2018
heavy-rain

ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಕೊಂಚ ಕಡಿಮೆಯಾಗಿದ್ದರೂ ನೆರೆ ಹಾವಳಿ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಜಿಲ್ಲೆಯ ಕೆಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಹಾಗೂ ಸುಳ್ಯ ತಾಲೂಕಿನ ಎಲ್ಲಾ ಶಾಲೆಗಳಿಗೆ ಹಾಗೂ ಪುತ್ತೂರು, ಬೆಳ್ತಂಗಡಿ ಮತ್ತು ಮಂಗಳೂರು ತಾಲೂಕಿನ ಕೆಲವು ಶಾಲೆಗಳಿಗೆ ರಜೆ ಘೋಷಿಸಿಲಾಗಿದೆ. ಸುಬ್ರಹ್ಮಣ್ಯ ಕುಲ್ಕುಂದ ಕುದುರೆಮಜಲು ಎಂಬಲ್ಲಿ ಸುಮಾರು 15 ಕುಟುಂಬಗಳ ಮನೆ ಮುಳುಗಡೆಯಾಗಿದ್ದು, ಮಧ್ಯರಾತ್ರಿ ಅಧಿಕಾರಿಗಳು ಧಾವಿಸಿ ಅವರನ್ನು ಸಮೀಪದ ಶಾಲೆಗೆ ಸ್ಥಳಾಂತರಿಸಿದ್ದಾರೆ. ನೇತ್ರಾವತಿ […]

ಸಹಸ್ರಲಿಂಗೇಶ್ವರದಲ್ಲಿ ನೇತ್ರಾವತಿ ಹಾಗು ಕುಮಾರಧಾರ ಸಂಗಮ..ಸಾವಿರಾರು ಭಕ್ತರು ಭಾಗಿ!

Wednesday, August 15th, 2018
sahasra-lingeshwara

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಒಂದೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇನ್ನೊಂದೆಡೆ ಕೆಲ ಅಪರೂಪದ ವಿದ್ಯಮಾನಗಳಿಗೂ ಸಾಕ್ಷಿಯಾಗುತ್ತಿದೆ. ಸರಿಸುಮಾರು 5 ವರ್ಷಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಮುಂದೆ ಸಂಗಮಗೊಂಡಿದೆ. ಸತತವಾಗಿ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗಿದ್ದರೂ, ಕುಮಾರಧಾರ ಮತ್ತು ನೇತ್ರಾವತಿ ನದಿಗಳು ಸಂಗಮ ಆಗಿರಲಿಲ್ಲ. ಆದರೆ ರಾತ್ರಿ ನೀರಿನ ಒಳಹರಿವು ಹೆಚ್ಚಾಗುತ್ತಿದ್ದಂತೆ ನಿನ್ನೆ ರಾತ್ರಿ ನದಿಗಳ ಸಂಗಮವಾಗಿದ್ದು, ಎರಡೂ ನದಿಗಳ ನೀರು […]

ನೇತ್ರಾವತಿ ತೀರದಲ್ಲಿ ಕಣ್ಣೂರುವರೆಗೆ ಪರ್ಯಾಯ ರಸ್ತೆ

Wednesday, December 13th, 2017
nethravathi

ಮಂಗಳೂರು: ನೇತ್ರಾವತಿ ಸೇತುವೆ ನದಿ ತೀರದಿಂದ ಕಣ್ಣೂರು ಮಸೀದಿಯವರೆಗೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ಹೆದ್ದಾರಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಜೆ. ಆರ್‌. ಲೋಬೋ ಹೇಳಿದರು. ಇಲ್ಲಿ 50 ಮೀ. ಅಗಲದ ಚತುಷ್ಪಥ ಅಗತ್ಯವಿದೆ. ಇದರಿಂದ ಪ್ರವಾಸೋದ್ಯ ಮಕ್ಕೂ ಒತ್ತು ಸಿಗಲಿದ್ದು, ಮಂಗಳೂರಿನ ಬೆಳವಣಿಗೆಗೂ ಪೂರಕ ಎಂದರು. ಯಾವುದೇ ಮನೆ ತೆರವು ಮಾಡದೆ ಯಾವ ರೀತಿಯಲ್ಲಿ ರಸ್ತೆ ನಿರ್ಮಿಸಲು ಸಾಧ್ಯ ಎಂಬ ಬಗ್ಗೆ ಸರ್ವೆ ಮಾಡಬೇಕು. ಸಾಧ್ಯವಿದ್ದಷ್ಟು ನದಿಗೆ ಸೇರಿಕೊಂಡಿರುವ ಭೂಮಿಯನ್ನೇ ಬಳಸಿ ರಸ್ತೆ […]

ನೇತ್ರಾವತಿಯನ್ನು ಉಳಿಸಲು ಸರ್ವ ಪ್ರಯತ್ನದ ಅಂಗವಾಗಿ ಡಿ. 10ರಿಂದ 12ರವರೆಗೆ ಪಂಚತೀರ್ಥ ಸಪ್ತ ಕ್ಷೇತ್ರ ರಥಯಾತ್ರೆ :ವಿಜಯಕುಮಾರ್ ಶೆಟ್ಟಿ

Tuesday, December 6th, 2016
NRSS

ಮಂಗಳೂರು: ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟ ಮತ್ತೆ ಕಾವೇರಿದೆ. ಎಷ್ಟೇ ಮೊರೆ ಹೋದರೂ ಸರ್ಕಾರದ ಮನ ಕರಗುತ್ತಿಲ್ಲ. ಜಿಲ್ಲೆಯ ಜೀವನದಿ ನೇತ್ರಾವತಿಯನ್ನು ಉಳಿಸಲು ಮಾಡುತ್ತಿರುವ ಸರ್ವ ಪ್ರಯತ್ನದ ಅಂಗವಾಗಿ ಡಿ. 10ರಿಂದ 12ರವರೆಗೆ ಪಂಚತೀರ್ಥ ಸಪ್ತ ಕ್ಷೇತ್ರ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಎತ್ತಿನಹೊಳೆ ಸಂಯುಕ್ತ ಹೋರಾಟ ಸಮಿತಿ ಗೌರವಾಧ್ಯಕ್ಷ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ವಿಜಯಕುಮಾರ್ ಶೆಟ್ಟಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಈ ರಥಯಾತ್ರೆ ನಡೆಯಲಿದೆ. ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರೆ […]