Blog Archive

ರಾಜ್ಯ ಬಜೆಟ್ ನಲ್ಲಿ ಕಾಫಿ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸುವುದಾಗಿ ಮುಖ್ಯಮಂತ್ರಿ ಭರವಸೆ

Friday, February 14th, 2020
CM

ಮಡಿಕೇರಿ : ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿತ 2020-21ನೇ ಸಾಲಿನ ಆಯ-ವ್ಯಯ ಮೇಲಿನ ಪೂರ್ವಭಾವಿ ಚಚೆ೯ಯಲ್ಲಿ ಕನಾ೯ಟಕ ಬೆಳೆಗಾರರ ಒಕ್ಕೂಟದ ಪ್ರಮುಖರು ಪಾಲ್ಗೊಂಡು ಕಾಫಿ ಬೆಳೆಗಾರರ ಸಮಸ್ಯೆಗೆ ಬಜೆಟ್ ನಲ್ಲಿ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದರು. ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳಿಗೆ ಕೂಲಂಕುಶವಾಗಿ ಮನವರಿಕೆ ಮಾಡಿಕೊಡಲಾಯಿತು. ಕನಾ೯ಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ.ತೀರ್ಥ ಮಲ್ಲೇಶ್ ಕಾಫಿ ಬೆಳೆಗಾರರ ಹಲವಾರು ಬೇಡಿಕೆಗಳನ್ನು ಮುಖ್ಯಮಂತ್ರಿಗಳ […]

ಮಡಿಕೇರಿ ರಕ್ಷಣಾ ವೇದಿಕೆಯಿಂದ ಮುಖ್ಯಮಂತ್ರಿಗಳಿಗೆ ಮನವಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

Tuesday, January 28th, 2020
rakshana-vedike

ಮಡಿಕೇರಿ : ಮಡಿಕೇರಿ ನಗರದ ಸ್ಟೋನ್‌ಹಿಲ್ ಮೇಲಿರುವ ತ್ಯಾಜ್ಯ ವಿಲೇವಾರಿ ಕೇಂದ್ರವನ್ನು ಸುರಕ್ಷಿತ ಮತ್ತು ಜನವಸತಿಯಿಂದ ದೂರವಿರುವ ಪ್ರದೇಶಕ್ಕೆ ಸ್ಥಳಾಂತರಿಸಿ ವೈಜ್ಞಾನಿಕ ರೂಪದಲ್ಲಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಡಿಕೇರಿ ರಕ್ಷಣಾ ವೇದಿಕೆಯ ಪ್ರಮುಖರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಕೊಡಗು ಜಿಲ್ಲೆಯನ್ನು ಮಡಿಕೇರಿ ಜಿಲ್ಲೆಯೆಂದು ಕೆಲವು ಅಧಿಕಾರಿಗಳು ಉಲ್ಲೇಖಿಸುತ್ತಿದ್ದು, ಎಲ್ಲಾ ದಾಖಲೆ ಮತ್ತು ಸುತ್ತೋಲೆಗಳಲ್ಲಿ ಕೊಡಗು ಜಿಲ್ಲೆ ಎಂದೇ ಸ್ಪಷ್ಟವಾಗಿ ನಮೂದಿಸಲು ಸೂಚನೆ ನೀಡಬೇಕು. ನಗರದ ತ್ಯಾಜ್ಯ […]

ಮಂಗಳೂರು ಹಿಂಸಾತ್ಮಕ ಘಟನೆಯ ಮಾಹಿತಿ ಪಡೆಯಲು ಬಂದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

Saturday, December 21st, 2019
Yediyurappa Mangaluru

ಮಂಗಳೂರು : ಗುರುವಾರ ನಡೆದ  ಹಿಂಸಾತ್ಮಕ ಘಟನೆ ಮಾಡಲು ಕಾರಣವಾದವರ ಬಗ್ಗೆ ಮತ್ತು ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿರುವ ಘಟನೆ ಸಂಬಂಧ ಸಮಗ್ರವಾದ ವರದಿ ನೀಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶನಿವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ನಗರ ಪೊಲೀಸ್ ಆಯುಕ್ತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವಿವರ ಕೇಳಿದ್ದೇನೆ. ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಕ್ರಮ ವಹಿಸಲು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಶಾಸಕರಿಗೆ ನಿರ್ದೇಶನ ನೀಡಿದ್ದೇನೆ […]

ಮಂಗಳೂರು : ಸರೆಂಡರ್ ಪಾಲಿಟಿಕ್ಸ್ ಮಾಡಬಾರದು; ಯು.ಟಿ. ಖಾದರ್

Thursday, December 5th, 2019
UT-Khader

ಮಂಗಳೂರು : ಮೇರೆಮಜಲು ಗ್ರಾ.ಪಂನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಯೋಗೀಶ್ ಪ್ರಭು ಹಾಗೂ ಅವರ ಪತ್ನಿ ಹಾಗೂ ಇರಾ ಗ್ರಾ.ಪಂ. ಅಧ್ಯಕ್ಷ ರಝಾಕ್ ಕುಕ್ಕಾಜೆ ಮೇಲಿನ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಶಾಸಕ ಪೊಲೀಸರು ಇಂತಹ ಪ್ರಕರಣಗಳಲ್ಲಿ ಸರೆಂಡರ್ ಪಾಲಿಟಿಕ್ಸ್ ಮಾಡಬಾರದು ಎಂದು ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ. ಸರ್ಕ್ಯೂಟ್‌ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಹಲ್ಲೆ ಮಾಡಿದವರು ಹಾಗೂ ಅದರ ಹಿಂದಿರುವವರ ಬಗ್ಗೆ ಕೂಲಂಕುಷ ತನಿಖೆ ಮಾಡಿ ಇಂತಹ ಪ್ರಕರಣ ಮರುಕಳಿಸದಂತೆ ನಿಗಾ ವಹಿಸುವ […]

ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗುವ ಹುಚ್ಚು ಹಿಡಿದಿದೆ : ಸಚಿವ ಕೆ.ಎಸ್. ಈಶ್ವರಪ್ಪ

Saturday, November 30th, 2019
Eshwarappa

ಬೆಂಗಳೂರು : ಸಿದ್ದರಾಮಯ್ಯ ಅವರಿಗೆ ಮುಪ್ಪು ಬಂದಿದೆ, ದೇಶ, ಸಮಾಜ, ಅಭಿವೃದ್ಧಿಗಾಗಿ ಧ್ಯಾನ ಮಾಡಲಿ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗುವ ಹುಚ್ಚು ಹಿಡಿದಿದೆ. ಇನ್ನಾದರೂ ದೇಶ, ಧರ್ಮ, ಹಿಂದುಳಿದವರು, ದಲಿತರ ಉದ್ದಾರಕ್ಕೆ ಪ್ರಯತ್ನಿಸಲಿ, ಧ್ಯಾನ‌ ಮಾಡಲಿ ಎಂದು ಹೇಳಿದರು. ಸಿದ್ದರಾಮಯ್ಯ ಅವರು ತಾವು ಹೋದ ಪಕ್ಷವನ್ನು ಛಿದ್ತ ಛಿದ್ರ ಮಾಡುತ್ತಿದ್ದಾರೆ. ಜಾತಿ, ಜಾತಿಗಳ ನಡುವೆ ಬೆಂಕಿ ಹಚ್ಚುತ್ತಿದ್ದಾರೆ. ಅವರು ಖಂಡಿತ ಮುಂದೆ […]

ಮುಖ್ಯಮಂತ್ರಿಯ ಪ್ರವಾಹ ಪರಿಹಾರ ನಿಧಿಗೆ ಕ್ರೆಡೈ ಬೆಂಗಳೂರು 3 ಕೋಟಿ ರೂ.

Friday, September 13th, 2019
parihaara-nidhi

ಬೆಂಗಳೂರು : ಕರ್ನಾಟಕದಾದ್ಯಂತ ವಿವಿಧ ಪ್ರದೇಶಗಳಲ್ಲಿನ ಪ್ರವಾಹದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯ ಪ್ರವಾಹ ಪರಿಹಾರ ನಿಧಿಗೆ ಕಾನ್ಫೆಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (ಕ್ರೆಡೈ) ಬೆಂಗಳೂರು 3 ಕೋಟಿ ರೂ. ಕ್ರೆಡೈ ಬೆಂಗಳೂರು ಪದಾಧಿಕಾರಿಗಳು ಕೃಷ್ಣ ಅತಿಥಿ ಗೃಹದಲ್ಲಿ ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಚೆಕ್ ಹಸ್ತಾಂತರಿಸಿದರು. ಕ್ರೆಡೈ ರಾಷ್ಟ್ರೀಯ ಉಪಾಧ್ಯಕ್ಷರಾದ ನಾಗರಾಜ್ ಆರ್, ಕ್ರೆಡೈ ಬೆಂಗಳೂರಿನ ಅಧ್ಯಕ್ಷರಾದ ಕಿಶೋರ್ ಜೈನ್, ಕ್ರೆಡೈ ಕರ್ನಾಟಕದ ಅಧ್ಯಕ್ಷ ಆಸ್ಟಿನ್ ರೋಚ್, ಕ್ರೆಡೈ […]

ಸಂತ್ರಸ್ತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕಾನೂನಿಗೆ ಅಡ್ಡಿ ಮಾಡಬೇಡಿ ಅಧಿಕಾರಿಗಳಿಗೆ ಮುಖ್ಯಮಂತ್ರಿಸೂಚನೆ

Monday, August 12th, 2019
Yedyurappa Dharmasthala

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರೆ ಹಾನಿ ವೀಕ್ಷಣೆ ಮಾಡಿದ ಬಳಿಕ ಧರ್ಮಸ್ಥಳದಲ್ಲಿ ಅಧಿಕಾರಿಗಳು, ಶಾಸಕರು ಮತ್ತು ಸಂಸದರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈಗಾಗಲೇ ಮನೆ ಕಳೆದುಕೊಂಡವರಿಗೆ 5 ಲಕ್ಷ, ಭಾಗಶಃ ಮನೆ ಕಳೆದುಕೊಂಡವರಿಗೆ‌ 1 ಲಕ್ಷ, ಮತ್ತು ಮನೆ ಕಟ್ಟುವ ಇನ್ನೂ ಏಳೆಂಟು ತಿಂಗಳ ತನಕ ಪ್ರತಿ ತಿಂಗಳಿಗೆ 5 ಸಾವಿರ ಬಾಡಿಗೆ ಮತ್ತು ತಕ್ಷಣದ ಪರಿಹಾರ 10 ಸಾವಿರ ಇವತ್ತೆ ನೀಡುವಂತೆ ಘೋಷಿಸಿದ್ದೇನೆ. ಇದನ್ನು ಸಂತ್ರಸ್ತರಿಗೆ ನೀಡುವಲ್ಲಿ […]

ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಅಭಿಮಾನಿಗಳಿಂದ ಗೋಗಲ್ಲಮ್ಮನಿಗೆ ವಿಶೇಷ ಪೂಜೆ

Tuesday, July 16th, 2019
gogalamma

ಮಂಡ್ಯ :  ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದು ಪ್ರಾರ್ಥಿಸಿ ಅವರ ಹುಟ್ಟೂರು ಬೂಕನಕೆರೆ ಗ್ರಾಮದಲ್ಲಿ ಮಂಗಳವಾರ ಅಭಿಮಾನಿಗಳು, ಬಿಜೆಪಿ ಮುಖಂಡರು ಗ್ರಾಮದೇವತೆ ಗೋಗಲ್ಲಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು. ಸೋಮವಾರ ರಾತ್ರಿಯಿಂದಲೇ ಗ್ರಾಮದ ಹಲವು ದೇವಾಲಯಗಳನ್ನು ಸ್ವಚ್ಛಗೊಳಿಸಿ ತಳಿರು, ತೋರಣಗಳಿಂದ ಅಲಂಕಾರ ಮಾಡಲಾಗಿತ್ತು. ಮಂಗಳವಾರ ನಸುಕಿನಿಂದಲೇ ಗಣಹೋಮ, ಅಭಿಷೇಕ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಯಡಿಯೂರಪ್ಪ ಅವರ ಮನೆ ದೇವರಾದ ಕಾಪನಹಳ್ಳಿ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ಸನ್ನಧಿಯಲ್ಲಿಯೂ ವಿಶೇಷ ಪೂಜೆ […]

ಚಂದ್ರಗ್ರಹಣದಿಂದ ಮೈತ್ರಿ ಸರ್ಕಾರ ಕ್ಕೆ ಗಂಡಾಂತರ ; ಮುಖ್ಯಮಂತ್ರಿ ಆಪ್ತ ಜ್ಯೋತಿಷಿ ಭವಿಷ್ಯ

Monday, July 15th, 2019
Kumaraswamy

ಬೆಂಗಳೂರು:  ಜುಲೈ 17ರ ಚಂದ್ರಗ್ರಹಣ  ಮೈತ್ರಿ ಸರ್ಕಾರ ಕ್ಕೆ ಗಂಡಾಂತರ ತರಬಹುದು ಎಂದು ಮುಖ್ಯಮಂತ್ರಿ ಅವರ ಆಪ್ತ ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ. ಜುಲೈ 2ರಂದು ಸೂರ್ಯಗ್ರಹಣ ಸಂಭವಿಸಿದ್ದು, ಜು. 17ರಂದು ಚಂದ್ರಗ್ರಹಣವಾಗಲಿದೆ. ಅದೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೇಳಿ ಮೇಷರಾಶಿಯವರು. ಈ ರಾಶಿಯವರಿಗೆ ಗಂಡಾಂತರವಿದೆ ಎಂಬುದು ದೇವೇಗೌಡರ ಕುಟುಂಬಕ್ಕೆ ಆತಂಕ ತಂದಿದೆ. ಈ ನಡುವೆ ಜುಲೈ ತಿಂಗಳಲ್ಲಿಯೇ ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದು ಶಾಸಕರು ರಾಜೀನಾಮೆ ನೀಡುವ ಮೂಲಕ ಸರ್ಕಾರದ ಪತನಕ್ಕೆ ಮುಹೂರ್ತ ನಿಗದಿ ಮಾಡಿರುವುದು […]

ಮುಖ್ಯಮಂತ್ರಿಯವರು ಗ್ರಾಮ ವಾಸ್ತವ್ಯದ ಹೆಸರಲ್ಲಿ 1.20 ಕೋಟಿ ರೂ. ಖರ್ಚು ಮಾಡಿದ್ದಾರೆ : ಶ್ರೀನಿವಾಸ ಪೂಜಾರಿ

Tuesday, June 25th, 2019
srinivas-poojary

ಮಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಗ್ರಾಮ ವಾಸ್ತವ್ಯದ  ಹೆಸರಲ್ಲಿ 1.20 ಕೋಟಿ ರೂ. ಖರ್ಚು ಮಾಡಿ ಸಾಧನೆ ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಲೇವಡಿ ಮಾಡಿದ್ದಾರೆ. ಮಂಗಳೂರಲ್ಲಿ ಮಂಗಳವಾರ  ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು,  2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಗ್ರಾಮ ವಾಸ್ತವ್ಯ ಮಾಡಿರುವ 43 ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಆಗಿದೆಯೇ, ಎಷ್ಟು ಶಾಲೆಗಳ ಅಭಿವೃದ್ಧಿ ಆಗಿದೆ, ಎಷ್ಟು ಬಡವರ ಕಲ್ಯಾಣ ಯೋಜನೆಯ ಅನುಷ್ಠಾನ ಆಗಿದೆ ಎಂಬುವುದನ್ನು ಗಮನದಲ್ಲಿಟ್ಟುಕೊಂಡು ಮತ್ತೊಮ್ಮೆ ಗ್ರಾಮವಾಸ್ತವ್ಯ ಮಾಡಿ […]