ಬಜರಂಗದಳ ಕಾರ್ಯಕರ್ತರ ಗಡಿಪಾರು, ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ

Monday, November 20th, 2023
puttur-protest

ಪುತ್ತೂರು : ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟೀಸ್ ಜಾರಿ ಮಾಡಿರುವುದನ್ನುವಿರೋಧಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಬಿಜೆಪಿ ಹಾಗೂ ಪರಿವಾರ ಸಂಘಟನೆಗಳ ಸಹಕಾರದೊಂದಿಗೆ ಬೃಹತ್ ಪ್ರತಿಭಟನೆಯನ್ನು ಸೋಮವಾರ ಮಿನಿ ವಿಧಾನಸೌಧದ ಎದುರಿನ ಜೈ ಜವಾನ್ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್. ಮಾತನಾಡಿ, ಬಹುಸಂಖ್ಯಾತ ಹಿಂದೂಗಳು ಇರುವ ಭಾರತದಲ್ಲಿ ಸ್ವಾಭಿಮಾನದ ಬದುಕಿಗಾಗಿ ನಿರಂತರ ಜಾಗೃತಿ, ಸಂಘಟಿತ ಕೆಲಸಗಳನ್ನು ಮಾಡುತ್ತಿರುವುದು ನಮ್ಮ ಸಂಘಟನೆ. ದೇಶದ ಪರವಾಗಿ ಕೆಲಸ […]

ಹಿಜಾಬ್ ಹಾಕಲೇಬೇಕೆಂದು ಮುಸ್ಲಿಮರಿಗೆ ಇದ್ದರೆ, ಮುಸ್ಲಿಂ ರಾಷ್ಟ್ರಗಳಿಗೆ ಹೋಗಲಿ : ಕಲ್ಲಡ್ಕ ಪ್ರಭಾಕರ್ ಭಟ್

Sunday, March 20th, 2022
Prabhakara Bhat

ಮಂಗಳೂರು : ಹಿಜಾಬ್ ಬೇಕು ಎನ್ನುವ ಎಸ್‍ಡಿಪಿಐಗೆ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾಗೆ ಹಿಜಾಬ್ ಹಾಕಿಸುವ ತಾಕತ್ತು ಇದೆಯೇ? ಹಿಜಾಬ್ ಹಾಕಲೇಬೇಕೆಂದು ಮುಸ್ಲಿಮರಿಗೆ ಇದ್ದರೆ ಅವರು ಮುಸ್ಲಿಂ ರಾಷ್ಟ್ರಗಳಿಗೆ ಹೋಗಲಿ. ಹೈಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳದ ಬ್ಯಾರಿಗಳೊಂದಿಗೆ ಸ್ನೇಹ ಬೆಳೆಸುವ ಮೊದಲು ಆಲೋಚನೆ ಮಾಡಬೇಕಾಗಿದೆ. ಹಿಜಾಬ್ ವಿಚಾರದಲ್ಲಿ ಮುಸಲ್ಮಾನರು ನ್ಯಾಯಾಲಯ, ಸಂವಿಧಾನ ಕಡೆಗಣಿಸಿ ಅಗತ್ಯ ಸೇವೆಯನ್ನು ಬಂದ್ ಮಾಡಿದರು. ಇವರು ಹಿಂದೂಗಳ ಜತೆ ಮಾಡುವುದು ಡೋಂಗಿ ದೋಸ್ತಿ ಎಂದು ಆರೆಸೆಸ್ಸ್ ಮುಖಂಡ‌ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು. ವಿಶ್ವ ಹಿಂದೂ […]

ಸ್ವಾಮಿ ಕೊರಗಜ್ಜನ ನಿಂದನೆ, ಅಪಹಾಸ್ಯ -ಮಂಗಳವಾರ ಸಾಮೂಹಿಕ ಪ್ರಾರ್ಥನೆಗೆ ಕರೆ -ವಿಶ್ವ ಹಿಂದೂ ಪರಿಷತ್

Saturday, January 8th, 2022
VHP

ಮಂಗಳೂರು  : ವಿಟ್ಲದಲ್ಲಿ ಕೊರಗಜ್ಜನನ್ನು ಅವಮಾನಿಸಿದ ಘಟನೆಯನ್ನು ವಿರೋಧಿಸಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ಎಲ್ಲಾ ದೈವಸ್ಥಾನ, ದೇವಸ್ಥಾನ, ಭಜನಾ ಮಂದಿರಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಂಗಳವಾರ 11 ಜನವರಿ 2022 ರಂದು ನಡೆಸಲು ಸಮಸ್ತ ಹಿಂದೂ ಬಂಧುಗಳಲ್ಲಿ ವಿಶ್ವ ಹಿಂದೂ ಪರಿಷತ್ ವಿನಂತಿಸಿದೆ. ದೈವಸ್ಥಾನ, ದೇವಸ್ಥಾನದ ಆಡಳಿತ ಮಂಡಳಿ, ಧಾರ್ಮಿಕ ಮುಖಂಡರು, ಸಂಘಟನೆಗಳು, ಸಂಘ ಸಂಸ್ಥೆಗಳು, ಭಕ್ತರು, ಸಮಸ್ತ ಹಿಂದೂಗಳು ಒಟ್ಟು ಸೇರಿ ನಮ್ಮ ನಮ್ಮ ಊರುಗಳ ದೈವಸ್ಥಾನ ದೇವಸ್ಥಾನ, ಭಜನಾ ಮಂದಿರಗಳಲ್ಲಿ ಸಾಮೂಹಿಕ ಪ್ರಾರ್ಥನೆ […]

ಡ್ರಗ್ ದಂಧೆಯಿಂದ ಮಗಳನ್ನು ರಕ್ಷಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್‌ ಗೆ ಮೊರೆ

Monday, December 27th, 2021
gracy-pinto

ಮಂಗಳೂರು : ಡ್ರಗ್ ದಂಧೆಯಿಂದ ಮಗಳನ್ನು ರಕ್ಷಿಸುವಂತೆ ಕೋರಿ ಮಂಗಳೂರಿನ ಕ್ರೈಸ್ತ ಮಹಿಳೆಯೊಬ್ಬರು ವಿಶ್ವ ಹಿಂದೂ ಪರಿಷತ್‌ ಮೊರೆ ಹೋಗಿದ್ದಾರೆ. ಮಂಗಳೂರಿನ ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬ ಮಹಿಳೆ ಸುರತ್ಕಲ್ ನಿವಾಸಿ ಶರೀಫ್ ಸಿದ್ದಿಕಿ ಎಂಬಾತನ ಡ್ರಗ್ಸ್‌ ದಂಧೆಗೆ ಮಗಳು ಬಿದ್ದಿದ್ದು ಇದೀಗ ಹೊರಕ್ಕೆ ಬರಲಾಗದೇ ಒದ್ದಾಡುತ್ತಿರುವುದಾಗಿ ದೂರು ನೀಡಿದ್ದಾರೆ. ಕಳೆದ ಮೂರು ವರ್ಷಗಳಿಂದ  ಆಕೆಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಲಾಗುತ್ತಿದೆ. ಡ್ರಗ್ಸ್‌ ಕೊಟ್ಟು ಆಕೆಯನ್ನು ಬಳಸಿಕೊಳ್ಳಲಾಗುತ್ತಿದೆ. ಮಗಳು ಇದರಿಂದ ಹೊರಕ್ಕೆ ಬರಲು ಆಗುತ್ತಿಲ್ಲ. ಮಾನಸಿಕವಾಗಿ […]

ದೇವಸ್ಥಾನದಿಂದ ಕಾಣಿಕೆ ಡಬ್ಬಿ ಕಳವು ವಿಶ್ವ ಹಿಂದೂ ಪರಿಷತ್​ನ ಪ್ರಖಂಡ ಸಂಚಾಲಕ ಬಂಧನ

Monday, March 8th, 2021
Mohan

ಮಂಗಳೂರು : ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ನ ಉಳ್ಳಾಲ ಗ್ರಾಮಾಂತರ ಪ್ರಖಂಡದ ಸಂಚಾಲಕ ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಮಂಜನಾಡಿ ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕಳವು ಮಾಡಿದ್ದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು. ಈ ಹಿನ್ನೆಲೆ ಸಾರ್ವಜನಿಕರು ಆತನನ್ನು ಹಿಡಿದು ಹತ್ತಿರದ ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಒಂದೇ ತಿಂಗಳಲ್ಲಿ ಮೂರು ಹಿಂದೂ ಯುವಕರ ಕೊಲೆ ನಡೆದಿದೆ, ಪೊಲೀಸರು ಎಚ್ಚೆತ್ತು ಕೊಳ್ಳಬೇಕು

Wednesday, October 28th, 2020
vhp

ಮಂಗಳೂರು: ಕರಾವಳಿಯಲ್ಲಿ ಒಂದೇ ತಿಂಗಳಲ್ಲಿ ಮೂರು ಹಿಂದೂ ಯುವಕರ ಕೊಲೆ ನಡೆದಿದೆ. ಕಿಶನ್ ಹೆಗ್ಡೆ, ಸಂಪತ್ ಕುಮಾರ್, ಹಾಗೂ ಸುರೇಂದ್ರ ಬಂಟ್ವಾಳ್ ಎಂಬ ಯುವಕ ರು ಪರಸ್ಪರ ವೈಯಕ್ತಿಕ ದ್ವೇಷ ಗಂಗ್ವಾರ್ ಗಳಿಗೆ ಬಲಿಯಾಗಿದ್ದರೆ, ಇಂತಹ ಕೃತ್ಯಗಳು ಮುಂದೆ ನಡೆಯಬಾರದು ಎಂದು ಪೊಲೀಸರಿಗೆ ಮನವಿ ಸಲ್ಲಿಸಿರುವುದಾಗಿ ವಿಶ್ವ ಹಿಂದೂ ಪರಿಷತ್ತಿನ ಶರಣ್ ಪಂಪ್ ವೆಲ್ ಹೇಳಿದ್ದಾರೆ. ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಇಂತಹ ಕೃತ್ಯಗಳು ನಡೆದ ಕೂಡಲೇ ಆ ಪ್ರದೇಶದ ಯುವಕರನ್ನು ಕರೆಸಿ […]

ವಿಶ್ವ ಹಿಂದೂ ಪರಿಷತ್ ಕಾಸರಗೋಡು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅಂಗಾರ ಶ್ರೀಪಾದ ನಿಧನ

Monday, September 28th, 2020
Angara Sripada

ಕಾಸರಗೋಡು : ಉಪ್ಪಳ ಬಾಯಾರಿನ ಪೆರ್ವೋಡಿ ನಿವಾಸಿ ಅಂಗಾರ ಶ್ರೀಪಾದ (69) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಗ್ಗೆ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬಾಯಾರು ಸಹಕಾರಿ ಬ್ಯಾಂಕ್ ನ ನಿರ್ದೇಶಕರೂ ಆಗಿದ್ದ ಇವರು ಈ ಹಿಂದೆ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ ಹತ್ತು ವರ್ಷಗಳಿಂದ ವಿಶ್ವ ಹಿಂದೂ ಪರಿಷತ್ ನ ಕಾಸರಗೋಡು ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ವಿಶ್ವ ಹಿಂದೂ ಪರಿಷತ್ ಮಂಗಳೂರು ಜಿಲ್ಲಾ ವತಿಯಿಂದ ಅಭಿನಂದನಾ ಕಾರ್ಯಕ್ರಮ

Thursday, March 5th, 2020
abhinandane

ಮಂಗಳೂರು : ವಿಶ್ವ ಹಿಂದೂ ಪರಿಷತ್ ಮಂಗಳೂರು ಜಿಲ್ಲಾ ವತಿಯಿಂದ ಅಭಿನಂದನಾ ಕಾರ್ಯಕ್ರಮವು 03 ಮಾರ್ಚ್ ಮಂಗಳವಾರ, ವಿಶ್ವಹಿಂದೂ ಪರಿಷದ್ ಕಾರ್ಯಾಲಯ “ವಿಶ್ವಶ್ರೀಯಲ್ಲಿ” ನಡೆಯಿತು. ವಿಶ್ವಹಿಂದೂ ಪರಿಷತ್ತಿನ ವಿವಿಧ ಜವಾಬ್ದಾರಿ ನಿರ್ವಹಿಸಿ ಪ್ರಸ್ತುತ ರಾಜಕೀಯ ಮತ್ತು ಧಾರ್ಮಿಕ ಪರಿಷತ್ತಿನ ಜವಾಬ್ದಾರಿವಹಿಸಿಕೊಂಡ ಶ್ರೀ ದಿವಾಕರ್ ಪಾಂಡೇಶ್ವರ್ ( ಮಹಾ ಪೌರರು- ಮಂಗಳೂರು ಮಹಾನಗರ) ಶ್ರೀ ಸುಧರ್ಶನ್ ಮೂಡಬಿದ್ರೆ ( ಜಿಲ್ಲಾಧ್ಯಕ್ಷರು- ಬಿ.ಜೆ.ಪಿ ) ಶ್ರೀ ಜಗದೀಶ್ ಶೇಣವ ( ಜಿಲ್ಲಾ ವಕ್ತಾರರು- ಬಿ.ಜೆ.ಪಿ ) ಶ್ರೀ ವಿನಯ್ ಎಲ್ […]

ಮಂಗಳೂರು : ವಿಶ್ವ ಹಿಂದೂ ಪರಿಷತ್ತಿನ ಅಂತರಾಷ್ಟ್ರೀಯ ಸಭೆ ನಡೆಯಲಿದೆ; ಎಂ.ಬಿ.ಪುರಾಣಿಕ್

Tuesday, December 24th, 2019
vishwa-parishath

ಮಂಗಳೂರು : ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸಂಘ ನಿಕೇತನದಲ್ಲಿ ಡಿ. 25ರಿಂದ 27ರವರೆಗೆ ವಿಶ್ವ ಹಿಂದೂ ಪರಿಷತ್ತಿನ ಅಂತರಾಷ್ಟ್ರೀಯ ಸಭೆ ನಡೆಯಲಿದೆ ಎಂದು ರಾಜ್ಯದ ವಿಎಚ್ ಪಿ ಕಾರ್ಯಾಧ್ಯಕ್ಷ ಎಂ.ಬಿ.ಪುರಾಣಿಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಸಮಾವೇಶದಲ್ಲಿ 27 ರಾಷ್ಟ್ರಗಳ 350 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ.ವೀರೇಂದ್ರ ಹೆಗ್ಗಡೆ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಸಂಘ ನಿಕೇತನದಲ್ಲಿ ನಡೆಯಲಿರುವ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ನಿಟ್ಟೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ಭಾಗವಹಿಸಲಿದ್ದಾರೆ ಎಂದು ಬಿ.ಪುರಾಣಿಕ್ […]

ಪುತ್ತೂರು : ವಿಶ್ವ ಹಿಂದೂ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಡೀಕಯ್ಯ ಪೆರ್ವೋಡಿ ನಿಧನ

Saturday, September 28th, 2019
dikayya

ಪುತ್ತೂರು : ವಿಶ್ವ ಹಿಂದೂ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಡೀಕಯ್ಯ ಪೆರ್ವೋಡಿ(60) ಇಂದು ಬೆಳಗ್ಗೆ ನಿಧನರಾದರು. ಅವರು ಪತ್ನಿ ಆಶಾ ಹಾಗೂ ಪುತ್ರ ಶಿಶಿರ್ ಪೆರ್ವೋಡಿಯವರನ್ನು ಅಗಲಿದ್ದಾರೆ. ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳ ಜವಾಬ್ದಾರಿಯಿಂದ ವಿಮುಖರಾಗಿದ್ದರು. ಪ್ರಗತಿಪರ ಕೃಷಿಕರೂ ಆಗಿದ್ದ ಡೀಕಯ್ಯ ಪೆರ್ವೋಡಿ ಪಡ್ನೂರು ಗ್ರಾಮದ ಪೆರ್ವೊಡಿಯ ನಿವಾಸಿ. ಎಳವೆಯಲ್ಲಿ ಆರ್ಎಸ್ಎಸ್ ಪ್ರಭಾವಕ್ಕೆ ಒಳಗಾದ ಅವರು ತಮ್ಮ ಸಮಾಜಮುಖಿ ಚಿಂತನೆಗಳಿಗೆ ಅದರ ಮೂಲಕವೇ ಮೂರ್ತ ರೂಪ ನೀಡಿದವರು. ದಶಕಗಳ […]