ಇಂಡಸ್ಟ್ರಿಯಲ್ ಸೈಟ್‌‌ನಲ್ಲಿ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತ್ಯು

Sunday, June 6th, 2021
Harish-Kumar

ಉಡುಪಿ :  ಟಿಪ್ಪರ್‌ನಿಂದ ಮಣ್ಣು ಅನ್‌‌ಲೋಡ್ ಮಾಡುವ ವೇಳೆ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತಪಟ್ಟ ಘಟನೆ ಉಡುಪಿಯ ನಂದಿಕೂರಿನಲ್ಲಿ ನಡೆದಿದೆ. ಮೃತ ಟಿಪ್ಪರ್ ಚಾಲಕನನ್ನು ಹರೀಶ್ ಕುಮಾರ್ ಎಂದು ಗುರುತಿಸಲಗಿದೆ. ಟಿಪ್ಪರ್‌‌ನಿಂದ ಮಣ್ಣು ಅನ್‌‌ಲೋಡ್ ಆಗದೇ ಇರುವುದನ್ನು ಗಮನಿಸಿ ಪರೀಕ್ಷಿಸಿಲು ಡ್ರೈವರ್ ಸೀಟ್ ನಿಂದ ಕೆಳಗಿಳಿದ ವೇಳೆ ನಿಯಂತ್ರಣ ತಪ್ಪಿದ ಟಿಪ್ಪರ್ ಚಾಲಕನ ಮೇಲೆ ಬಿದ್ದಿದೆ. ಮಂಗಳೂರು ಉದ್ಯಮಿಗೆ ಸೇರಿದ್ದ ಇಂಡಸ್ಟ್ರಿಯಲ್ ಸೈಟ್‌‌ನಲ್ಲಿ ನಡೆಯುತಿದ್ದ ಕೆಲಸದ ವೇಳೆ ಈ ದುರ್ಘಟನೆ ನಡೆದಿದ. ಮೃತ‌‌‌ ಹರೀಶ್ ಕುಮಾರ್ ಈ […]

ಬಿಜೆಪಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ -ವಸಂತ ಬಂಗೇರ ಆರೋಪ

Saturday, December 7th, 2019
vasanth-bangera

ಬೆಳ್ತಂಗಡಿ :  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದ್ದ ಕಾಮಗಾರಿಯನ್ನು ಮತ್ತೆ ಉದ್ಘಾಟಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದು, ಕಾಮಗಾರಿಯ ಲಾಭಪಡೆಯಲು ಮುಂದಾಗಿದ್ದಾರೆ . ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಭಾಗವಹಿಸುತ್ತಿರುವುದು ವಿಷಾದನೀಯ  ಎಂದು ಮಾಜಿ ಶಾಸಕ ವಸಂತ ಬಂಗೇರ ಆರೋಪಿಸಿದ್ದಾರೆ. ಪಟ್ಟಣ ಪಂಚಾಯತಿಗೆ ಬಂದಿರುವ ಹತ್ತು ಕೋಟಿ ಅನುದಾನದ ಕಾಮಗಾರಿಗಳಲ್ಲಿ ಕೆಲ ಕಾಮಗಾರಿಗಳ ಶಿಲಾನ್ಯಾಸವನ್ನು ಈ ಹಿಂದೆ ಯೇ ನಡೆದಿತ್ತು ಎಂದು ಅವರು ಹೇಳಿದ್ದಾರೆ. ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಈ ಹಿಂದೆ ಕಾಂಗ್ರೆಸ್ ಸರಕಾರದ […]

ಮಮಪಾ ಚುನಾವಣೆ : ಟಿಕೆಟ್ ಆಕಾಂಕ್ಷಿಗಳ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗುವವರ ವಿರುದ್ಧ ಶಿಸ್ತು ಕ್ರಮ; ಹರೀಶ್ ಕುಮಾರ್

Monday, November 4th, 2019
Harish-Kumar

ಮಂಗಳೂರು : ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ನ.12ರಂದು ನಡೆಯಲಿರುವ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ನಾಮ ಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಪಾಲಿಕೆಯ ಎಲ್ಲಾ 60 ವಾರ್ಡ್ ಗಳಿಗೂ ಪಕ್ಷದ ಅಧಿಕೃತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದಲ್ಲಿ ಬಹುತೇಕ ಕಡೆ ಒಮ್ಮತದ ಅಭ್ಯರ್ಥಿ ಗಳನ್ನು ಆಯಾ ವಾರ್ಡ್ ಗಳ ಪ್ರಾದೇಶಿಕ ಅಂಶಗಳನ್ನು […]

ಮಂಗಳೂರು : ಆಗಸ್ಟ್ 31ರಂದು ನೆರೆಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ

Monday, August 26th, 2019
siddaramayya

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಆಗಸ್ಟ್ 31ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ನೆರೆ ಹಾವಳಿಗೆ ತತ್ತರಿಸಿರುವ ಜನರಿಗೆ ಸಾಂತ್ವನ ಹೇಳಲು ಮತ್ತು ವಸ್ತುಸ್ಥಿತಿ ಪರಿಶೀಲನೆ ನಡೆಸಲು ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 31ರಂದು ಸಿದ್ದರಾಮಯ್ಯ ಅವರು ಮಂಗಳೂರಿಗೆ ಆಗಮಿಸಿ, ಮಂಗಳೂರು ಹೊರವಲಯದಲ್ಲಿ ತ್ಯಾಜ್ಯ ಕುಸಿತದಿಂದ […]

ಟಿಪ್ಪು ಜಯಂತಿಯನ್ನು‌ ಕದ್ದು ಮುಚ್ಚಿ ಆಚರಿಸುವ ಪರಿಸ್ಥಿತಿಯಲ್ಲಿ ನಾವಿದ್ದೇವೆ: ಹರೀಶ್ ಕುಮಾರ್

Saturday, November 10th, 2018
harish-kumar-2

ಮಂಗಳೂರು: ಟಿಪ್ಪು ಜಯಂತಿಯನ್ನು‌ ಕದ್ದು ಮುಚ್ಚಿ ಆಚರಿಸುವ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಇದು ಆಗಬಾರದು ಎಂದು ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಹೇಳಿದ್ದಾರೆ. ದ.ಕ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ದಕ ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ಇಂದು ಬೆಳಗ್ಗೆ ನಡೆದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವಜನಿಕ ಜಯಂತಿ ಆಗಬೇಕಾದರೆ ಮುಂದಿನ ದಿನಗಳಲ್ಲಾದರೂ ಇದು ಪುರಭವನದಲ್ಲಿ ಆಚರಿಸುವಂತಾಗಬೇಕು. ಆಗ ಅರ್ಥಪೂರ್ಣ ಆಚರಣೆ ಆಗುತ್ತದೆ ಎಂದರು. ಈ ಸಂದರ್ಭ […]

ಮೈಸೂರಿನಲ್ಲಿ ಪೊಲೀಸ್ ಜೀಪ್​ ಪಲ್ಟಿ… ಮೂವರಿಗೆ ಗಾಯ!

Saturday, July 28th, 2018
police-jeep

ಮೈಸೂರು: ಚಲಿಸುತ್ತಿದ್ದ ಪೊಲೀಸ್ ಜೀಪ್ನ ಆ್ಯಕ್ಸಲ್ ಬ್ಲೇಡ್ ಕಟ್ ಆಗಿ ಪೊಲೀಸ್ ಜೀಪ್ ಪಲ್ಟಿಯಾಗಿರುವ ಘಟನೆ ಹೆಚ್.ಡಿ ಕೋಟೆಯ ಮಾದಾಪುರ ಗ್ರಾಮದಲ್ಲಿ ನಡೆದಿದ್ದು ಜೀಪ್ನಲ್ಲಿದ್ದ ಸಿಪಿಐ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಹೆಚ್.ಡಿ. ಕೋಟೆ ಪೊಲೀಸ್ ಠಾಣೆಗೆ ಸೇರಿದ ಪೊಲೀಸ್ ಜೀಪೊಂದು ಮೈಸೂರಿನಿಂದ ಮಾನಂದವಾಡಿ ರಸ್ತೆಯ ಮೂಲಕ ಹೆಚ್.ಡಿ ಕೋಟೆಗೆ ಹೋಗುತ್ತಿರುವಾಗ ಮಾದಾಪುರ ಗ್ರಾಮದ ಬಳಿ ಜೀಪ್ ನ ಅಕ್ಸೆಲ್ ಬ್ಲೇಡ್ ಕಟ್ಟಾದ, ಪರಿಣಾಮ ಜೀಪ್ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆಯಲ್ಲಿ ಪಲ್ಟಿ ಹೊಡೆದು ರಸ್ತೆ ಬದಿಯಲ್ಲಿದ್ದ ಮನೆಗೆ […]

ರಾಜ್ಯದಲ್ಲಿ ಬಿಜೆಪಿಯ ಅಧ್ಯಕ್ಷರಾದಿಯಾಗಿ ಎಲ್ಲರೂ ಬೇಲ್ ಗಾಡಿಗಳೇ: ಬಿ. ರಮಾನಾಥ ರೈ

Tuesday, July 17th, 2018
ramanath-rai

ಮಂಗಳೂರು: ಕಾಂಗ್ರೆಸ್ ನ ಅನೇಕ ನಾಯಕರು ಬೇಲ್ ಗಾಡಿಗಳು ಎಂಬುದಾಗಿ ಜನರಾಡಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಅಧ್ಯಕ್ಷರಾದಿಯಾಗಿ ಎಲ್ಲರೂ ಬೇಲ್ ಗಾಡಿಗಳೇ. ಅವರನ್ನು ಪ್ರಧಾನಿ ಏನು ಮಾಡುತ್ತಾರೆ ಎಂಬುದನ್ನು ಹೇಳಲಿ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಸವಾಲೆಸೆದಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರಕಾರದ ಆಡಳಿತ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಕೇಂದ್ರ ಸರಕಾರ ಚುನಾವಣೆ ಹತ್ತಿರ ಬರುತ್ತಿರುವಂತೆಯೇ ಗಿಮಿಕ್ ಮಾಡುತ್ತಿರುವುದೇ ಹೊರತು […]

ರಾಜ್ಯಪಾಲರ ನಿಲುವು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ನೇತೃತ್ವದಲ್ಲಿ ಪ್ರತಿಭಟನೆ

Friday, May 18th, 2018
congress-protest

ಮಂಗಳೂರು: ಪೂರ್ಣ ಬಹುಮತವಿಲ್ಲದ ಬಿಜೆಪಿಗೆ ಸರಕಾರ ನಡೆಸಲು ರಾಜ್ಯಪಾಲರು ಅವಕಾಶ ನೀಡಿರುವುದು ಪ್ರಜಾಪ್ರಭುತ್ವ ವಿರೋಧಿ ನಿರ್ಧಾರ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಗುರುವಾರ ಸಂಜೆ ಮಂಗಳೂರು ಪುರಭವನ ಮುಂಭಾಗದ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಯಿತು. ಮಾಜಿ ಶಾಸಕ ಜೆ.ಆರ್‌.ಲೋಬೋ ಮಾತನಾಡಿ, ದೇಶದಲ್ಲಿ ಪ್ರಜಾ ಪ್ರಭುತ್ವ ವಿರೋಧಿ ನಿಲುವು ಹಾಗೂ ನಡವಳಿಕೆಗಳು ನಡೆಯುತ್ತಲೇ ಇವೆ. ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಹುಮತವಿಲ್ಲದ ಬಿಜೆಪಿ ಪಕ್ಷಕ್ಕೆ ರಾಜ್ಯಪಾಲರು ಸರಕಾರ ರಚನೆಗೆ ಅವಕಾಶ […]

ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಈಗಾಗಲೇ ಒಳಒಪ್ಪಂದ ಮಾಡಿಕೊಂಡಿವೆ: ಐವನ್ ಡಿಸೋಜ

Thursday, May 10th, 2018
ivan-desouza

ಮಂಗಳೂರು: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಈಗಾಗಲೇ ಒಳಒಪ್ಪಂದ ಮಾಡಿಕೊಂಡಿವೆ. ಚುನಾವಣೆಯ ಬಳಿಕ ಒಳಒಪ್ಪಂದ ಮಾಡಿಕೊಳ್ಳಬೇಕಾದ ಈ ಎರಡು ಪಕ್ಷಗಳು ಚುನಾವಣಾ ಪೂರ್ವದಲ್ಲೇ ಒಳ ಒಪ್ಪಂದ ಮಾಡಿಕೊಳ್ಳುವ ಮೂಲಕ ಜನತೆಗೆ ಅನ್ಯಾಯ ಎಸಗಿದೆ. ಅವರ ಈ ತಂತ್ರ ಚುನಾವಣೆಯಲ್ಲಿ ಫಲಿಸುವುದಿಲ್ಲ. ಈ ಬಾರೀ ಕಾಂಗ್ರೆಸ್ ಪಕ್ಷ 130ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದ್ದು, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದ್ದಾರೆ. ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]

ದ.ಕ.ಜಿಲ್ಲೆಯ 8 ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಗೆಲುವು: ಜನಾರ್ದನ ಪೂಜಾರಿ

Wednesday, May 9th, 2018
j-r-lobo

ಮಂಗಳೂರು: ದ.ಕ. ಜಿಲ್ಲೆಯ 8 ಕ್ಷೇತ್ರದಲ್ಲೂ ಕೂಡ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಹೇಳಿದರು. ನಗರದ ಕದ್ರಿಯಲ್ಲಿರುವ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ 7 ಸ್ಥಾನಗಳನ್ನು ಗೆದ್ದಿದ್ದರೆ ಈ ಬಾರಿ 8 ಸ್ಥಾನವನ್ನೂ ಗೆಲ್ಲಲಿದೆ. ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಶಕ್ತಿಮೀರಿ ಶ್ರಮಿಸಲಿದ್ದಾರೆ ಎಂದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ ಜೆ.ಆರ್.ಲೋಬೊ ವಿರುದ್ಧ ತೀವ್ರ ಅಪಪ್ರಚಾರ ಮಾಡಲಾಗುತ್ತಿದೆ. ಇದು […]