ಆಟ, ಪಾಠದ ಜೊತೆಗೆ ಸಂಸ್ಕಾರದ ಜೀವನಕ್ಕೆ ಮೂಲ ತಳಹದಿ ಅಂಗನವಾಡಿ : ರಾಜೇಶ್ ನಾಯ್ಕ್ ಉಳಿಪ್ಪಾಡಿ

Saturday, November 16th, 2024
Kudrebettu school

ಬಂಟ್ವಾಳ: ಬಾಳ್ತಿಲ ,ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಗ್ರಂಥಾಲಯ ಕೊಠಡಿ ಮತ್ತು ಅಂಗನವಾಡಿ ಕೇಂದ್ರದ ಆಟಿಕಾ ವನವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಕ್ಕಳಿಗೆ ಶೈಕ್ಷಣಿಕ ಮನೋಭಾವವನ್ನು ಮೂಡಿಸುವ ಪ್ರಾರಂಭಿಕ ಹಂತವೇ ಅಂಗನವಾಡಿಯಾಗಿದೆ. ಇಲ್ಲಿ ಆಟ, ಪಾಠದ ಜೊತೆಗೆ ಸಂಸ್ಕಾರದ ಜೀವನಕ್ಕೆ ಮೂಲ ತಳಹದಿ ಎಂದು ಅವರು ತಿಳಿಸಿದರು. ಈ ನಿಟ್ಟಿನಲ್ಲಿ ಪರಿಪೂರ್ಣ ವ್ಯವಸ್ಥೆಯನ್ನು ಕಲ್ಪಿಸಲು ಇಲಾಖೆ ಜೊತೆ ಸಹಕಾರ ನೀಡಿದ ಕಂಪೆನಿಯ ಹಾಗೂ ಗ್ರಾಮದ […]

ಡಾ.ಭರತ್ ಶೆಟ್ಟಿಯವರಿಂದ ಕೊರೊನಾ ವಾರಿಯರ್ಸ್ ಗಳಿಗೆ ಸನ್ಮಾನ; ಸಚಿವ ಅಂಗಾರ ಉಪಸ್ಥಿತಿ

Monday, June 28th, 2021
Bharath Shetty

ಮಂಗಳೂರು  : ಕೊರೊನಾ ವಿರುದ್ದದ ಹೋರಾಟದಲ್ಲಿ ಆಶಾಕಾರ್ಯಕರ್ತರು, ಅಂಗನವಾಡಿ, ಎನ್‌ಎನ್‌ಎಂ ಗಳು, ದಾದಿಯರು, ವೈದ್ಯರ ಕೆಲಸ ಜೀವವುಳಿಸುವ ಪುಣ್ಯದ ಕಾರ್ಯವಾಗಿದ್ದು, ಇವರನ್ನು ಗುರುತಿಸಿ ಗೌರವಿಸಿರುವುದು ಶ್ಲಾಘನೀಯ ಎಂದು ಮೀನುಗಾರಿಕಾ, ಬಂದರು ಸಚಿವ ಅಂಗಾರ ನುಡಿದರು. ಅವರು ಬೈಕಂಪಾಡಿ ವಿದ್ಯಾರ್ಥಿ ಸಂಘ, ಜಿಲ್ಲಾಡಳಿತ, ರೆಡ್‌ಕ್ರಾಸ್ ಸಹಯೋಗದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಲಸಿಕೆ ಮೇಳದಲ್ಲಿ ಭಾಗವಹಿಸಿ ಕೊರೊನಾ ವಾರಿಯರ್ಸ್ಗಳನ್ನು ಸಮ್ಮಾನಿಸಿ ಮಾತನಾಡಿದರು. ಕೊರೊನಾ ವಿರುದ್ದದ ಹೋರಾಟದಲ್ಲಿ ಮನೆ ಮನೆಗೆ ತೆರಳಿ ಅವರನ್ನು ಗುರುತಿಸಿ ಕೆಲಸ ಮಾಡುವವರು ಕೆಳಸ್ತರದಲ್ಲಿರುವ ಕೊರೊನಾ […]

ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್ ವಿತರಣೆ

Saturday, January 2nd, 2021
smartPhone

ಮಂಗಳೂರು : ಕೋವಿಡ್-19 ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರು ಜೀವದ ಹಂಗು ತೊರೆದು , ಕೊರೊನಾ ನಿಯಂತ್ರಣಕ್ಕೆ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ತಿಳಿಸಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್‍ಫೋನ್ ವಿತರಣಾ ಕಾರ್ಯಕ್ರಮದಲ್ಲಿ ವಿತರಿಸಿ ಮಾತನಾಡಿದರು. ಪೋಷಣ ಅಭಿಯಾನ ಯೋಜನೆಯು ಕುಂಠಿತ ಬೆಳವಣಿಗೆ, ಅಪೌಷ್ಠಿಕತೆ, ರಕ್ತಹೀನತೆ, ಕಡಿಮೆ […]

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಎರಡು ದಿನ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Thursday, January 23rd, 2020
pratibhatane

ಬೆಂಗಳೂರು : ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರೀಡಂ ಪಾರ್ಕ್ ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಬಜೆಟ್ ವೇಳೆ ತಮ್ಮ ವೇತನ ಹೆಚ್ಚಿಸಬೇಕೆಂದು ಅಂಗನವಾಡಿ ಕಾರ್ಯರ್ತೆಯರು, ಎಐಟಿಯುಸಿ ಸಂಘಟನೆ ಹಾಗೂ ಸಹಾಯಕಿಯರ ಫೆಡರೇಷನ್ ವತಿಯಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು : *ಸೇವಾ ಜ್ಯೇಷ್ಠತೆ ಆಧಾರದ ಮೇಲೆ ವೇತನ ನೀಡಬೇಕು *ಎಲ್ ಕೆ ಜಿ ಹಾಗೂ ಯುಕೆಜಿಯನ್ನು ಅಂಗನವಾಡಿಯಲ್ಲಿ ಆರಂಭಿಸಬೇಕು […]

ಕಂದಾಯಾಧಿಕಾರಿಗಳ ಸಭೆ : ಅಂಗನವಾಡಿಗಳಿಗೆ ಜಾಗ ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

Friday, January 17th, 2020
kandaya-sabhe

ಮಡಿಕೇರಿ : ಅಂಗನವಾಡಿ ಕಟ್ಟಡಗಳ ನಿರ್ಮಾಣ ಸಂಬಂಧ ಇನ್ನೂ ಹಲವು ಅಂಗನವಾಡಿಗಳಿಗೆ ಜಾಗ ನೀಡಬೇಕಿದ್ದು, ಕೂಡಲೇ ಜಾಗ ಗುರುತಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಸ್ತಾಂತರಿಸುವಂತೆ ಜಿಲ್ಲಾಧಿಕಾರಿ ಅವರು ಕಂದಾಯ ನಿರೀಕ್ಷಕರಿಗೆ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಾಗೆಯೇ ಪಶುಪಾಲನಾ ಇಲಾಖೆಯ ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ನಿವೇಶನ ನೀಡಲಾಗಿದ್ದು, ಆದರೆ ಆರ್‌ಟಿಸಿ ಒದಗಿಸಿರುವುದಿಲ್ಲ. ಆದ್ದರಿಂದ ಆರ್‌ಟಿಸಿಯನ್ನು ತಕ್ಷಣವೇ ಒದಗಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. […]

ಅಂಗನವಾಡಿ ನೌಕರರ ಸಮಾವೇಶ, ಹಕ್ಕೊತ್ತಾಯ ಹಾಗೂ ನೆರವು ವಿತರಣಾ ಕಾರ್ಯಕ್ರಮ

Thursday, December 12th, 2019
anganavady

ಮಂಗಳೂರು : ದ.ಕ.ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಹಾಗೂ ದ.ಕ.ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಹಕಾರ ಸಂಘದ ಸಮಾಜ ಸೇವಾಂಜಲಿ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಗುರುವಾರ ಕದ್ರೋಳಿ ಗೋಕರ್ಣನಾಥ ದೇವಳದಲ್ಲಿ ಆಯೋಜಿಸಲಾದ ಅಂಗನವಾಡಿ ನೌಕರರ ಸಮಾವೇಶ, ಹಕ್ಕೊತ್ತಾಯ ಹಾಗೂ ನೆರವು ವಿತರಣಾ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ಸರ್ಕಾರ ಯಾವುದೇ ಯೋಜನೆಗಳನ್ನು ಯಶಸ್ವಿಯಾಗಿ ಜನರ ಬಳಿಗೆ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಕಾರ್ಯ ಶ್ಲಾಘನೀಯವಾಗಿದ್ದು, ಅವರ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ […]

ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ

Tuesday, December 3rd, 2019
madikeri

ಮಡಿಕೇರಿ : ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕ ಸಿಐಟಿಯು ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಗಾಂಧಿ ಮೈದಾನದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಹಾಗೂ ಸಹಾಯಕಿಯರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಸುನಂದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ ಉದಾರೀಕರಣ ನೀತಿಗಳ ಮೂಲಕ ಸರ್ಕಾರ ಎಲ್ಲಾ […]