ವಿಶ್ವ ಹಿಂದೂ ಪರಿಷತ್ ಕಾಸರಗೋಡು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅಂಗಾರ ಶ್ರೀಪಾದ ನಿಧನ

Monday, September 28th, 2020
Angara Sripada

ಕಾಸರಗೋಡು : ಉಪ್ಪಳ ಬಾಯಾರಿನ ಪೆರ್ವೋಡಿ ನಿವಾಸಿ ಅಂಗಾರ ಶ್ರೀಪಾದ (69) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಗ್ಗೆ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬಾಯಾರು ಸಹಕಾರಿ ಬ್ಯಾಂಕ್ ನ ನಿರ್ದೇಶಕರೂ ಆಗಿದ್ದ ಇವರು ಈ ಹಿಂದೆ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ ಹತ್ತು ವರ್ಷಗಳಿಂದ ವಿಶ್ವ ಹಿಂದೂ ಪರಿಷತ್ ನ ಕಾಸರಗೋಡು ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.