ಚಾಲಾಕಿ ಅಂತರರಾಜ್ಯ ಕಳ್ಳ ಬೆಳ್ತಂಗಡಿ ಪೊಲೀಸರ ಬಲೆಗೆ

Friday, September 29th, 2023
Umesh-Balegara

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ ಉಮೇಶ್​ ಬಳೆಗಾರ ಎಂದು ಗುರುತಿಸಲಾಗಿದೆ. ಕಳೆದ ಆಗಸ್ಟ್ 12ರಂದು ಉಜಿರೆ ಗ್ರಾಮದ ಕಲ್ಲೆ ನಿವಾಸಿ ಫೆಲಿಕ್ಸ್ ಎಂಬವರ ಮನೆಯಲ್ಲಿ ಕಳ್ಳತನವಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳಗೆ ನುಗ್ಗಿದ ಆರೋಪಿ 15 ಪವನ್ ಚಿನ್ನಾಭರಣ ಮತ್ತು 20 ಸಾವಿರ ನಗದು ಎಗರಿಸಿ ಪರಾರಿಯಾಗಿದ್ದನು. ಈ ಬಗ್ಗೆ ಬೆಳ್ತಂಗಡಿ […]