ಎಪಿಎಲ್‌ ಕಾರ್ಡ್‌ದಾರರಿಗೆ ಇಲ್ಲ ಅಕ್ಕಿ: ಇದು ಕಾಂಗ್ರೆಸ್ ಸರ್ಕಾರದ ಅರ್ಥವಿಲ್ಲದ ನೀತಿ: ಶಾಸಕ ಕಾಮತ್

Wednesday, September 27th, 2023
ಎಪಿಎಲ್‌ ಕಾರ್ಡ್‌ದಾರರಿಗೆ ಇಲ್ಲ ಅಕ್ಕಿ: ಇದು ಕಾಂಗ್ರೆಸ್ ಸರ್ಕಾರದ ಅರ್ಥವಿಲ್ಲದ ನೀತಿ: ಶಾಸಕ ಕಾಮತ್

ಮಂಗಳೂರು : ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಕಳೆದ ನಾಲ್ಕೈದು ತಿಂಗಳಿಂದ ಅವಿಭಜಿತ ಜಿಲ್ಲೆಗಳಲ್ಲಿ ಎಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಸಿಗುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು ಈ ಅವ್ಯವಸ್ಥೆಗೆ ನೇರವಾಗಿ ರಾಜ್ಯ ಸರ್ಕಾರದ ಅರ್ಥವಿಲ್ಲದ ನೀತಿ ನಿರೂಪಣೆಯೇ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ ದಾರರಿಗೆ ಕೇಂದ್ರ ಸರ್ಕಾರದಿಂದ ಈಗಾಗಲೇ ಉಚಿತವಾಗಿ ಅಕ್ಕಿ ಪೂರೈಕೆಯಾಗುತ್ತಿದೆ. ಆದರೆ ಎಪಿಎಲ್‌ ಕಾರ್ಡ್‌ದಾರರಿಗೆ ಸಿಗಬೇಕಾಗಿದ್ದ ಅಕ್ಕಿಗೆ ರಾಜ್ಯ ಸರ್ಕಾರದ ಕ್ರಮ ಬದ್ಧವಲ್ಲದ […]

ಲಾಕ್ ಡೌನ್ : ದಿನದ ಆಹಾರಕ್ಕಾಗಿ ಸಂಕಷ್ಟದಲ್ಲಿರುವ ಕುಟುಂಬಗಳು ಈ ದೂರವಾಣಿಗೆ ಕೂಡಲೇ ಸಂಪರ್ಕಿಸಿ

Sunday, April 12th, 2020
Sunil-Bajal

ಮಂಗಳೂರು : ಕಳೆದ ಹಲವಾರು ದಿನಗಳ ಲಾಕ್ ಡೌನ್ ನಿಂದಾಗಿ ಕಾರ್ಮಿಕ ವರ್ಗದ ಬದುಕು ತೀರಾ ಶೋಚನೀಯವಾಗಿದೆ . ಮುಂದಕ್ಕೆ ಇದು ಎಷ್ಟು ದಿನಗಳವರೆಗೆ ಮುಂದುವರಿಯುತ್ತೆ ಎಂಬುದು ತೀರಾ ಆತಂಕಕಾರಿಯಾಗಿದೆ. ಸರಕಾರ, ಸಂಘ ಸಂಸ್ಥೆಗಳು, ಸಂಘಟನೆಗಳು ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದರೂ ಇನ್ನೂ ಕೂಡ ಕೆಲವು ಕುಟುಂಬಗಳು ತೀರಾ ಸಂಕಷ್ಟದಲ್ಲಿದೆ. ಅಂತಹವರು ನೇರವಾಗಿ ಸಂಪರ್ಕಿಸಿ ಸಹಾಯ ಯಾಚನೆ ಮಾಡುತ್ತಿದ್ದಾರೆ. ಈಗಾಗಲೇ ಕುದ್ರೋಳಿ ಶ್ರೀ ಗೋಕರ್ಣಾನಾಥ ಕ್ಷೇತ್ರದ ವತಿಯಿಂದ ನೀಡಲಾದ 6 ಕ್ವಿಂಟಾಲ್ ಅಕ್ಕಿಯನ್ನು ಅಂತಹ ಕುಟುಂಬಗಳಿಗೆ ತಲುಪಿಸಲಾಗಿದೆ. […]

ಮಾಜಿ ಸಚಿವ ಬಿ. ರಮಾನಾಥ ರೈ ಅವರಿಂದ ಅಕ್ಕಿ ಮತ್ತು ದಿನ ಬಳಕೆಯ ಸಾಮಗ್ರಿ ವಿತರಣೆ

Tuesday, April 7th, 2020
ramanatha-rai

ಬಂಟ್ವಾಳ : ಮಾಜಿ ಸಚಿವ ಬಿ. ರಮಾನಾಥ ರೈ ವೈಯಕ್ತಿಕ ಖರ್ಚಿನಲ್ಲಿ ಬಡವರಿಗೆ ಹಾಗೂ ಸಂಕಷ್ಟದಲ್ಲಿ ಜೀವನ ನಡೆಸುವ ನಾಗರಿಕರಿಗೆ ಅಕ್ಕಿ ಮತ್ತು ದಿನ ಬಳಕೆಯ ಸಾಮಗ್ರಿಗಳನ್ನು ಹಸ್ತಾಂತರಿಸಿದ್ದಾರೆ. ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 44 ಪಂಚಾಯತ್ ಮತ್ತು 27 ಪುರಸಭಾ ವಾರ್ಡ್ಗಳಿಗೆ ಕಾಂಗ್ರೆಸ್ ಕಾರ್ಯಕರ್ತರ ಸಹಕಾರದಿಂದ ಆಹಾರ ಸಾಮಗ್ರಿ ಹಸ್ತಾಂತರಿಸಿದ್ದಾರೆ. ಸೋಮವಾರ ಈ ಕಾರ್ಯಕ್ಕೆ ಸ್ವತಃ ಬಿ. ರಮಾನಾಥ ರೈ ಚಾಲನೆ ನೀಡಿದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಉಪಸ್ಥಿತರಿದ್ದರು.

ಅಕ್ಷರ ದಾಸೋಹದ ಅಕ್ಕಿಯನ್ನು ಖಾಸಗಿ ರೈಸ್‌ಮಿಲ್‌ಗೆ ಸಾಗಿಸುವ ಲಾರಿ ಪೊಲೀಸರ ವಶಕ್ಕೆ

Friday, September 7th, 2018
Rice mill

ಮಂಗಳೂರು : ರಾಜ್ಯ ಸರಕಾರದ ಶಾಲಾ ಮಕ್ಕಳಿಗೆ ಕೊಡುವ ಅಕ್ಷರ ದಾಸೋಹದ ಯೋಜನೆಯಡಿ ಬರುವ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಿ ಖಾಸಗಿ ರೈಸ್‌ಮಿಲ್‌ಗೆ ತಂದು ಗೋಣಿ ಬದಲಾಯಿಸಿ ಮಾರಾಟ ಮಾಡವ ಲಾರಿ ಕೆಎ -19- ಎಎ- 5508 ಲಾರಿ ಮತ್ತು ಚಾಲಕನನ್ನು ಪೊಲೀಸರು ಶುಕ್ರವಾರ ಬೆಳಿಗ್ಗೆ ವಶಪಡಿಸಿ ಕೊಂಡಿದ್ದಾರೆ. ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ದಾಳಿ ನಡೆಸಿ ಸುಮಾರು 5 ಕ್ವಿಂಟಾಲ್ ಗೂ ಹೆಚ್ಚು ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಶಕ್ತಿನಗರದಲ್ಲಿರುವ ಸರ್ಕಾರಿ ರೈಸ್ ಮಿಲ್ ನಿಂದ ಅಕ್ಕಿಯನ್ನು ಲಾರಿ ಮೂಲಕ […]

ಒಂದು ರೂಪಾಯಿಗೆ ಕೆ.ಜಿ. ಅಕ್ಕಿ; ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಸಚಿವ ರೈ ಚಾಲನೆ

Wednesday, July 10th, 2013
Anna Bhagya

ಮಂಗಳೂರು : ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಇಂದು ಬೆಳಗ್ಗೆ ನಗರದ ಪುರಭವನದಲ್ಲಿ ಬಡಕುಟುಂಬವೊಂದಕ್ಕೆ 30 ಕೆ.ಜಿ. ಅಕ್ಕಿಯನ್ನು ನೀಡುವುದರ ಮೂಲಕ  ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಬಿಪಿಎಲ್ ಪಟ್ಟಿಯಲ್ಲಿರುವ ಪ್ರತಿಯೊಂದು ಕುಟುಂಬಕ್ಕೆ ತಿಂಗಳಿಗೆ 30 ಕೆ.ಜಿ. ಅಕ್ಕಿಯನ್ನು ಕೆ.ಜಿ.ಗೆ ಒಂದು ರೂಪಾಯಿಯಂತೆ ನೀಡಲಾಗುವುದು. ಈ ಯೋಜನೆ ಬಡವರಿಗೆ ತಲುಪುವಂತೆ ಮಾಡಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ರೈ ಹೇಳಿದರು. ರಾಷ್ಟ್ರದಲ್ಲಿ ಈ […]