ಕೊಂಕಣಿ ಸುಗಮ ಸಂಗೀತ ಕಮ್ಮಟ

Thursday, March 29th, 2018
konkani

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠವು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ಕೊಂಕಣಿ ವಿಭಾಗದ ಸಹಯೋಗದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಕೊಂಕಣಿ ಸುಗಮ ಸಂಗೀತ ಕಮ್ಮಟವನ್ನು ಆಯೋಜಿಸಿತ್ತು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಆರ್. ಪಿ. ನಾಯ್ಕರವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕೊಂಕಣಿ ಅಧ್ಯಯನ ಪೀಠ ಮತ್ತು ಸ್ನಾತಕೋತ್ತರ ಕೊಂಕಣಿ ವಿಭಾಗದ ಕಾರ್ಯವನ್ನು ಶ್ಲಾಘಿಸಿದರು. ಮುಂಬರುವ ದಿನಗಳಲ್ಲಿ ಕೊಂಕಣಿಯ ಕಂಪು ಎಲ್ಲೆಡೆ ಪಸರಿಸಲು ಇಂಥ ಶೈಕ್ಷಣಿಕ ಚಟುವಟಿಕೆಗಳು ಮತ್ತು ತರಬೇತಿ […]

ಮಂಗಳೂರಿನ ಜನ ಚಾಕುವಿನಿಂದ ಚುಚ್ಚುವವರು: ನಾಗಲಕ್ಷ್ಮಿಬಾಯಿ

Tuesday, February 27th, 2018
nagalakshmi

ಮಂಗಳೂರು:”ಉತ್ತರ ಕರ್ನಾಟಕ ಭಾಗದ ಜನರು ಬೀದಿಗಿಳಿದು ಹೋರಾಟ ನಡೆಸುತ್ತಾರೆ. ಆದರೆ ಮಂಗಳೂರಿನ ಜನ ಬೀದಿಯಲ್ಲೇ ಚೂರಿಯಿಂದ ಇರಿಯುತ್ತಾರೆ” ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ವಿವಾದಾತ್ಮಕ ಹೇಳಿಕೆ ನೀಡಿ, ದಕ್ಷಿಣ ಕನ್ನಡ ಜಿಲ್ಲೆಯ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪುತ್ತೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ 20ರಂದು ಸುಳ್ಯದಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ಕೊಲೆ ಪ್ರಕರಣದ ಕುರಿತು ಮಾತನಾಡಿದರು. ಮಂಗಳೂರು ಭಾಗದ ಜನ ಶಾಂತಿ, ಸೌಮ್ಯತೆಗೆ, ಸೌಜನ್ಯತೆಗೆ ಬೆಲೆ ಕೊಡುವ ಜನ ಎಂಬ […]

ಅಕ್ಷತಾ ಕೊಲೆ ಆರೋಪಿ ಕಾರ್ತಿಕ್ ನಮ್ಮವನಲ್ಲ: ಎಬಿವಿಪಿ ಸ್ಪಷ್ಟನೆ

Saturday, February 24th, 2018
akshatha

ಮಂಗಳೂರು: ಸುಳ್ಯದಲ್ಲಿ ಇತ್ತೀಚೆಗೆ ನಡೆದ ಕಾಲೇಜು ವಿದ್ಯಾರ್ಥಿನಿ ಅಕ್ಷತಾಳ ಕೊಲೆ ಪ್ರಕರಣವನ್ನು ಕೆಲವರು ರಾಜಕೀಯ ಉದ್ದೇಶಕ್ಕಾಗಿ ಬಳಕೆ ಮಾಡುತ್ತಿದ್ದಾರೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆರೋಪಿಸಿದೆ. “ಅಕ್ಷತಾ ಕೊಲೆ ಆರೋಪಿ ಕಾರ್ತಿಕ್ ತಮ್ಮ ಕಾರ್ಯಕರ್ತನಲ್ಲ ಎಂದು ಎಬಿವಿಪಿ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದೆ. ಈ ಕುರಿತು ಸುಳ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಬಿವಿಪಿ ವೃತ್ತಿ ಶಿಕ್ಷಣ ಪ್ರಮುಖ ನಿಕೇಶ್ ಉಬರಡ್ಕ, “ಘಟನೆ ಬಳಿಕ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಕಾರ್ತಿಕ್ ಎಬಿವಿಪಿ ಕಾರ್ಯಕರ್ತ ಎಂದು ಅಪಪ್ರಚಾರದಲ್ಲಿ […]

ಸುಳ್ಯದಲ್ಲಿ ವಿದ್ಯಾರ್ಥಿನಿಗೆ ಏಳು ಬಾರಿ ಚೂರಿಯಿಂದ ಇರಿದ ಪಾಗಲ್ ಪ್ರೇಮಿ

Tuesday, February 20th, 2018
Sullia student

ಸುಳ್ಯ : ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಪ್ರೇಮ ವೈಫಲ್ಯಗೊಂಡ  ಅದೇ ಕಾಲೇಜಿನ ವಿದ್ಯಾರ್ಥಿ ಚೂರಿಯಿಂದ ಇರಿದು ಕೊಲೆಗೈದ ಘಟನೆ ಸುಳ್ಯದಲ್ಲಿ ಮಂಗಳವಾರ  ಸಂಜೆ 4:30ರ ಸುಮಾರಿಗೆ ನಡೆದಿದೆ. ಸುಳ್ಯ ಎನ್‌ಎಂಸಿ ಕಾಲೇಜಿನಲ್ಲಿ ಕಲಿಯುತ್ತಿದ್ದ  ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ, ನೆಲ್ಲೂರು ಕೆಮ್ರಾಜೆ ನಿವಾಸಿ ಚಂದ್ರಶೇಖರ್ ಎಂಬವರ ಪುತ್ರ ಕಾರ್ತಿಕ್ ತನ್ನ ಸಹಪಾಠಿ  ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿನಿ ಅಕ್ಷತಾಳನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ. ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾದ ಶಾಂತಿ ನಗರ ನಿವಾಸಿಯಾಗಿದ್ದ ಅಕ್ಷತಾ ಮಂಗಳವಾರ ಸಂಜೆ ಕಾಲೇಜಿನಿಂದ ಬರುತ್ತಿದ್ದ ರೋಟರಿ ಶಾಲೆಯ ಬಳಿ […]