ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಜುಲೈ 5 ರ ವರೆಗೆ ಮುಂದುವರಿಕೆ

Monday, June 21st, 2021
KV Rajendra

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಲಾಕ್ ಡೌನ್ ಜುಲೈ 5 ರ ವರೆಗೆ ಮುಂದುವರಿಯಲಿದ್ದು, ಅಗತ್ಯ ವಸ್ತುಗಳ ಖರೀದಿ ಅವಧಿಯನ್ನು ಮಧ್ಯಾಹ್ನ 1ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಜೂನ್ 21 ರಿಂದ ಹೊಸ ಮಾರ್ಗಸೂಚಿ ಅನ್ವಯವಾಗಲಿದ್ದು, ಕೆಲವೊಂದು ಅಗತ್ಯ ಸೇವೆಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಅದರಂತೆ ಜೂನ್.21ರಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು, ಜುಲೈ 5ರ ಸಂಜೆಯವರೆಗೂ ವಿಸ್ತರಣೆಯಾಗಲಿದೆ. ಜೂನ್ 21ಕ್ಕೆ ಅನ್ವಯವಾಗುವಂತೆ ಕೆಲವೊಂದು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ.28 ರವರೆಗೆ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

Saturday, June 19th, 2021
KV Rajendra

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿಯಲ್ಲಿರುವ ಲಾಕ್‌ ಡೌನ್ ಜೂ.21 ರಿಂದ ಜೂ.28 ರವರೆಗೆ ಸೆಮಿ ಲಾಕ್‌ಡೌನ್ ಮಾದರಿಯಲ್ಲಿ   ಮುಂದುವರಿಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಶನಿವಾರ ಈ ಬಗ್ಗೆ ಮಾಧ್ಯಮದವರೊಂದಿಗೆ  ಮಾತನಾಡಿದ ಅವರು ಲಾಕ್‌ ಡೌನ್ ತೆರವು ಕುರಿತಂತೆ ರಾಜ್ಯ ಸರಕಾರ ಶನಿವಾರ  ಹೊರಡಿಸಿದೆ ಆದೇಶದಂತೆ   ಜೂ.11ರಂದು ಹೊರಡಿಸಿದ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿಸಲಾಗಿದೆ. ಹಾಗಾಗಿ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಪಡಿಸಲಾಗಿದೆ. ಆದಾಗ್ಯೂ ಜಿಲ್ಲೆಯಲ್ಲಿ ಸೆಮಿ ಲಾಕ್‌ಡೌನ್ ಮೂಲಕ […]

ಎರಡು ವಾರಗಳ ಕಠಿಣ ಲಾಕ್‌ಡೌನ್‌ ಅಗತ್ಯ ವಸ್ತುಗಳ ಖರೀದಿಗೆ ನೂಕು ನುಗ್ಗಲು

Monday, May 10th, 2021
Heavy Rush

ಮಂಗಳೂರು : ಎರಡು ವಾರಗಳ ಕಠಿಣ ಲಾಕ್‌ಡೌನ್‌ ಸೋಮವಾರದಿಂದ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಬಹುತೇಕ ಕಡೆಗಳಲ್ಲಿ ಇಂದು ಬೆಳಗ್ಗೆ ಅಗತ್ಯ ವಸ್ತುಗಳ ಖರೀದಿಗೆ ಜನರು ಮಾರುಕಟ್ಟೆಗಳಿಗೆ ಮುಗಿಬಿದ್ದರು. ಮಂಗಳೂರಿನ ಮಲ್ಲಿಕಟ್ಟೆ, ನಗರ ಹೊರ ವಲಯದ ತೊಕ್ಕೊಟ್ಟು ಒಳಪೇಟೆ, ತಲಪಾಡಿ ಕೆ.ಸಿ.ರೋಡ್ ನಲ್ಲಿ ಜನರು ಖರೀದಿಯ ಅವಸರದಲ್ಲಿ ಸಾಮಾಜಿಕ ಅಂತರವನ್ನೇ ಮರೆತಿದ್ದರು ಜನ ಮಾಸ್ಕ್ ಧಾರಣೆಯನ್ನು ಮರೆತಿದ್ದರು. ಮಾರುಕಟ್ಟೆಯನ್ನು ಸಂಪರ್ಕಿಸುವ ರಸ್ತೆಗಳಂತೂ ವಾಹನಗಳು ಹಾಗೂ ಜನಜಂಗುಳಿಯಿಂದ ಗಿಜಿಗುಡುತ್ತಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ […]