ಚಂದ್ರಗಿರಿ ನದಿಗೆ ಹಾರಿದ ವ್ಯಕ್ತಿಯ ಮೃತದೇಹ ಪತ್ತೆ

Saturday, November 25th, 2023
Haisainar

ಕಾಸರಗೋಡು : ಚಂದ್ರಗಿರಿ ಸೇತುವೆಯಿಂದ ನದಿಗೆ ಹಾರಿದ್ದ ವ್ಯಾಪಾರಿಯೋರ್ವರ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಉಳಿಯತ್ತಡ್ಕ ಶಿರಿಬಾಗಿಲಿನ ಹಸೈನಾರ್ (46) ಮೃತಪಟ್ಟವರು. ಕುಟುಂಬದ ವಾಟ್ಸಪ್ ಗ್ರೂಪ್ ನಲ್ಲಿ ನನ್ನ ಜೀವನ ಅಂತ್ಯಗೊಳಿಸುವುದಾಗಿ ಶುಕ್ರವಾರ ಮುಂಜಾನೆ ಸಂದೇಶ ಕಳುಹಿಸಿದ್ದ ಹಸೈನಾರ್ ಬಳಿಕ ಕಾರಿನಲ್ಲಿ ಬಂದು ಚಂದ್ರಗಿರಿ ಸೇತುವೆಯಲ್ಲಿ ನಿಲ್ಲಿಸಿ ನಂತರ ನದಿಗೆ ಹಾರಿದ್ದರು. ನದಿಗೆ ಹಾರುತ್ತಿರುವುದನ್ನು ಗಮನಿಸಿದ ಪ್ರತ್ಯಕ್ಷದರ್ಶಿರೋರ್ವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ಚಪ್ಪಲಿ ಸೇತುವೆಯಲ್ಲಿ ಪತ್ತೆಯಾಗಿತ್ತು. ಬಳಿಕ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು , ನಾಗರಿಕರು […]

ಅಪರಾಧ ಪತ್ತೆಗೆ ಆಧುನಿಕ ತಂತ್ರಜ್ಞಾನ ಬಳಸಿ : ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಲಹೆ

Tuesday, July 13th, 2021
Vidhana Soudha

ಬೆಂಗಳೂರು: ಆಧುನಿಕ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಎಸಗಲಾಗುತ್ತಿರುವ ಆರ್ಥಿಕ ಅಪರಾಧ ಹಾಗೂ ಸೈಬರ್ ಕ್ರೈಮ್ ನಿಯಂತ್ರಣ ಮಾಡುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದರು. ಮಂಗಳವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಅಗ್ನಿಶಾಮಕ, ಗೃಹ, ಪೌರ ರಕ್ಷಕ ದಳ ಹಾಗೂ ಎಸ್ ಡಿ ಆರ್ ಎಫ್ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇತ್ತೀಚಿಗೆ ಅಪರಾಧಗಳ ಸ್ವರೂಪ ಬದಲಾಗುತ್ತಿದೆ. ತಂತ್ರಜ್ಞಾನ ಬದಲಾದಂತೆ ಅದನ್ನು ದುರುಪಯೋಗ […]

ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿಗೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು

Thursday, March 4th, 2021
Chicken Farm

ಪುತ್ತೂರು: ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿಯ ಪೈಪ್ ಸರಿಪಡಿಸಲು ಇಳಿದ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಪಾಣಾಜೆ ಗ್ರಾಮದ‌ ಕೋಟೆ ರಸ್ತೆಯ ಕೆಮಾಜೆ ಎಂಬಲ್ಲಿ ನಡೆದಿದೆ. ಜೆಸಿಬಿಯಲ್ಲಿ ಮಣ್ಣು ಅಗೆಯುವ ಸಂದರ್ಭ ಭೂ ಕುಸಿತದಿಂದ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಕಾರ್ಮಿಕರನ್ನು ಪಾಣಾಜೆ ಗ್ರಾಮದ ಪಾರ್ಪಳದವರು ಎಂದು ತಿಳಿದುಬಂದಿದೆ. ಕಡಮ್ಮಾಜೆ ಹಾಜಿ ಅಬ್ದುಲ್ಲಾ ಎಂಬುವವರಿಗೆ ಸೇರಿದ ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿಯ ಪೈಪ್ ಸರಿಪಡಿಸಲು ಇಳಿದಿರುವ ವೇಳೆ ಪೈಪ್ ಮುರಿದು ಬಿದ್ದು ಇಬ್ಬರು ಕಾರ್ಮಿಕರು ಹೊಂಡಕ್ಕೆ ಬಿದ್ದಿದ್ದಾರೆ. ಇದೇ […]

ಕಾರ್ಮಿಕರು ತೋಡಿದ ಗುಂಡಿಗೆ ಬಿದ್ದ ಕರುವನ್ನು ರಕ್ಷಿಸಿದ ಸ್ಥಳೀಯ ಯುವಕರು

Thursday, July 16th, 2020
nikhil-poojary

ಮಂಗಳೂರು : ತಣ್ಣೀರುಬಾವಿ ಬೀಚ್ ಗೆ ಹೋಗುವ ರಸ್ತೆ ಬದಿಯಲ್ಲಿ ಗುತ್ತಿಗೆ ಕಾರ್ಮಿಕರು ತೋಡಿದ ಗುಂಡಿಗೆ ಕರುವೊಂದು ಬಿದ್ದ ಕರು ವೊಂದನ್ನು ಸ್ಥಳೀಯ ಯುವಕರ  ಗುಂಪೊಂದು ರಕ್ಷಿಸಿದೆ. ಅದೇ ರಸ್ತೆಯಲ್ಲಿ ಪ್ರಯಾಣಿಸುತಿದ್ದ ನಿಖಿಲ್ ಪೂಜಾರಿ ನೀರು ತುಂಬಿದ ಹೊಂಡಕ್ಕೆ ಇಳಿದು ಒದ್ದಾಡುತ್ತಿದ್ದ ಕರುವನ್ನು ಮೇಲೆಕೆತ್ತಿ ರಕ್ಷಣೆ ಮಾಡಿದ್ದಾರೆ. ಪ್ರಾಣಪಾಯದಲ್ಲಿದ್ದ ಕರುವನ್ನು ರಕ್ಷಿಸಿ, ಜೀವ ಉಳಿಸಿದ್ದಾರೆ. ನಿಖಿಲ್ ಪೂಜಾರಿಗೆ ಸ್ಥಳೀಯ ಯುವಕರು, ಅಗ್ನಿಶಾಮಕ ದಳದವರು ಸಹಕರಿಸಿದ್ದಾರೆ. ನೀರು ತುಂಬಿದ ಗುಂಡಿಯಲ್ಲಿ ಮುಳುಗಿದ್ದ ಕರುವಿಗೆ ಮರು ಜೀವಕೊಟ್ಟ ನಿಖಿಲ್ ಪೂಜಾರಿ ಹಾಗು ಸಹಕರಿಸಿದ ಸ್ಥಳೀಯ […]

ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಬಾಲಕ

Saturday, October 26th, 2019
kolave-baavi

ಚೆನ್ನೈ : 2 ವರ್ಷದ ಬಾಲಕನೊಬ್ಬ ಕೊಳವೆಬಾವಿಗೆ ಬಿದ್ದಿರುವ ಘಟನೆ ತಮಿಳುನಾಡಿನ ತಿರಚ್ಚಿ ಜಿಲ್ಲೆಯ ನಡುಕಟ್ಟುಪಟ್ಟಿಯಲ್ಲಿ ನಡೆದಿದೆ. ಬಾಲಕನನ್ನು ಸುಜಿತ್ ವಿಲ್ಸನ್ ಎಂದು ಗುರುತಿಸಲಾಗಿದೆ. ಈತ 25 ಅಡಿ ಆಳಕ್ಕೆ ಬಿದ್ದಿದ್ದಾನೆ. ಶುಕ್ರವಾರ ಸಂಜೆ 5.30ರ ಸುಮಾರಿಗೆ ಮನೆ ಮುಂದೆ ಆಟವಾಡುತ್ತಿದ್ದಾಗ 7 ವರ್ಷದ ಹಿಂದೆ ತೆರೆದಿದ್ದ ಬೋರ್‍ವೆಲ್‍ಗೆ ಸುಜಿತ್ ವಿಲ್ಸನ್ ಬಿದ್ದಿದ್ದಾನೆ. ಬಾಲಕ ಕೊಳವೆ ಬಾವಿಗೆ ಬಿದ್ದಿರುವ ವಿಚಾರ ತಿಳಿಯುತ್ತಿದ್ದಂತೆಯೇ ರಕ್ಷಣಾ ತಂಡ, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸುತ್ತಿದೆ. ವೈದ್ಯರ ತಂಡ […]

ರಾಸಾಯನಿಕ ಉತ್ಪನ್ನ ತಯಾರಿಕಾ​ ಕಾರ್ಖಾನೆ ಸ್ಫೋಟ : 10 ಮಂದಿ ಸಾವು

Saturday, August 31st, 2019
Mumbay

ಮುಂಬೈ : ರಾಸಾಯನಿಕ ಉತ್ಪನ್ನ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಸುಮಾರು 20 ಮಂದಿ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ. 10ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರ ಧುಲೇ ಸಮೀಪದ ಶಿರ್ಪುರ್ ನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಸ್ಫೋಟದ ರಭಸಕ್ಕೆ 70ಕ್ಕೂ ಅಧಿಕ ಮಂದಿ ಕಾರ್ಖಾನೆ ಒಳಗಡೆ ಸಿಲುಕಿದ್ದು, ಸ್ಥಳಕ್ಕೆ ಎನ್ ಡಿಆರ್ ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವುದಾಗಿ ವರದಿ ತಿಳಿಸಿದೆ. ಇಂದು ಬೆಳಗ್ಗೆ 9.45ರ ಸುಮಾರಿಗೆ ಕೆಮಿಕಲ್ ಫ್ಯಾಕ್ಟರಿಯೊಳಗೆ […]

ಲಾರಿ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ : ಹೊತ್ತಿ ಉರಿದ ಲಾರಿ

Friday, August 30th, 2019
bhatkala

ಭಟ್ಕಳ : ಲಾರಿ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಡೀಸೆಲ್ ಟ್ಯಾಂಕಿಗೆ ಬೆಂಕಿ ತಗುಲಿ ರಸ್ತೆ ಮಧ್ಯೆದಲ್ಲಿಯೇ ಟ್ಯಾಂಕರ್ ಮತ್ತು ಲಾರಿ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೈಲೂರು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೇರಳ ಹಾಗೂ ಕರ್ನಾಟಕದ ಬಿಜಾಪುರ ಮೂಲದ ಲಾರಿ ಮತ್ತು ಟ್ಯಾಂಕರ್’ಗಳ ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಡೀಸೆಲ್ ಟ್ಯಾಂಕರ್ ಮತ್ತು ಲಾರಿಗೆ ಬೆಂಕಿ ತಗುಲಿ ಹೊತ್ತಿ ಉರಿದು ಸಂಪೂರ್ಣ ಭಸ್ಮವಾಗಿದೆ. […]