ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ರಾಜಧಾನಿ ಬೆಂಗಳೂರು ತತ್ತರ

Friday, July 29th, 2016
Bengaluru-rain

ಬೆಂಗಳೂರು: ಸತತ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ರಾಜಧಾನಿ ಬೆಂಗಳೂರು ತತ್ತರಿಸಿ ಹೋಗಿದ್ದು, ನಿನ್ನೆ ಇಡೀ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನಗರದ ಪ್ರಮುಖ ಪ್ರದೇಶಗಳು ಜಲಾವೃತ್ತವಾಗಿವೆ. ಬೆಂಗಳೂರಿನ ಕೆಂಗೇರಿ, ಬಾಪೂಜಿನಗರ, ಬಿಳೇಕಹಳ್ಳಿ, ಶಿವಾಜಿನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಮೈಸೂರು ರಸ್ತೆಯಿಂದ ಸಿಟಿ ಮಾರುಕಟ್ಟೆ ಸಂಪರ್ಕಿಸುವ ಶ್ರೀ ಬಾಲಗಂಗಾಧರನಾಥ ಸ್ವಾಮಿ ಮೇಲ್ಸೇತುವೆ ಸೇರಿದಂತೆ ಪ್ರಮುಖ ಪ್ರದೇಶಗಳ ರಸ್ತೆಗಳಲ್ಲಿ 2 ರಿಂದ 3 ಅಡಿಗಳಷ್ಟು ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವಂತಾಗಿತ್ತು. ಇನ್ನು ನಾಯಂಡಹಳ್ಳಿ ಸಮೀಪ […]

ಗರ್ಭಿಣಿಯರ ಸ್ಕ್ಯಾನಿಂಗ್: 5ವರ್ಷಗಳ ದಾಖಲೆ ಪರಿಶೀಲನೆಗೆ ಸಿಇಓ ಸೂಚನೆ

Tuesday, February 9th, 2016
scaning

ಮ೦ಗಳೂರು : ಕಳೆದ 5ವರ್ಷಗಳಲ್ಲಿ ಜಿಲ್ಲೆಯ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ನಡೆದಿರುವ ಗರ್ಭಿಣಿಯರಿಗೆ ಸಂಬಂಧಪಟ್ಟ ಎಲ್ಲಾ ಸ್ಕ್ಯಾನಿಂಗ್‌ಗಳ ದಾಖಲೆ ಪರಿಶೀಲನೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಸೂಚಿಸಿದ್ದಾರೆ. ಜನನ ಪೂರ್ವ ಲಿಂಗ ನಿರ್ಣಯ- ನಿರ್ಬಂಧ ಮತ್ತು ದುರ್ಬಳಕೆ ತಡೆ ಕಾಯಿದೆಗೆ(ಪಿಸಿ & ಪಿಎನ್‌ಡಿಟಿ) ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಲಿಂಗಾನುಪಾತದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆಯಾಗಲು ಕಾರಣ, ಬಗ್ಗೆ ಸರಿಪಡಿಸಲು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ಚರ್ಚಿಸಲು ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ […]