ವೇಣೂರಿನ ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ಚಾಲನೆ

Friday, February 23rd, 2024
Venooru-Bahubali

ವೇಣೂರು : ಬೆಳ್ತಂಗಡಿ ತಾಲೂಕಿನ ವೇಣೂರಿನ ಬಾಹುಬಲಿ ಕ್ಷೇತ್ರದಲ್ಲಿ 12 ವರ್ಷದ ಬಳಿಕ ನಡೆಯುವ ಮಹಾಮಸ್ತಕಾಭಿಷೇಕಕ್ಕೆ ಗುರುವಾರ ಅಧಿಕೃತವಾಗಿ ಆರಂಭ ಗೊಂಡಿದೆ. 35 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಐದು ಅಂತಸ್ತಿನ ಅಟ್ಟಳಿಗೆ ಹತ್ತಿ ಭಕ್ತರು ಅಭಿಷೇಕ ಮಾಡುತ್ತಿದ್ದಾರೆ. ಫೆಬ್ರವರಿ 22 ರಿಂದ ಮಾರ್ಚ್ 1ರವರೆಗೆ ಮುಂದುವರಿಯಲಿದ್ದು ವಿವಿಧ ದ್ರವ್ಯಗಳಿಂದ ಬಾಹುಬಲಿ ಮೂರ್ತಿಗೆ ಅಭಿಷೇಕ ನಡೆಯಲಿದೆ. ರಾಜ್ಯದಲ್ಲಿರುವ ಪ್ರಮುಖ ನಾಲ್ಕು ಬಾಹುಬಲಿ ಮೂರ್ತಿಗಳ ಪೈಕಿ ಮೂರು ಮೂರ್ತಿಗಳು ದಕ ಜಿಲ್ಲೆಯಲ್ಲಿದ್ದರೆ, ಅತಿ ಎತ್ತರದ ಮೂರ್ತಿ ಶ್ರವಣಬೆಳಗೊಳದಲ್ಲಿದೆ. ಕಾರ್ಕಳದಲ್ಲಿ […]