ಬೆಲೆಯೇರಿಕೆಯ ವಿರುದ್ಧ ಬೀದಿಗಿಳಿದ ಬೀದಿಬದಿ ವ್ಯಾಪಾರಸ್ಥರು

Thursday, July 8th, 2021
street-vendors

ಮಂಗಳೂರು  : ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ವಿರೋಧಿಸಿ ಮಂಗಳೂರು ನಗರದ ಬೀದಿಬದಿ ವ್ಯಾಪಾರಸ್ಥರೂ ಕೂಡ ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇಂದು ನಗರದ ಸ್ಟೇಟ್ ಬ್ಯಾಂಕ್ ಬಳಿ ಹಾಗೂ ಲೇಡಿಗೋಷನ್ ಬಳಿಯಲ್ಲಿ ಬೀದಿಬದಿ ವ್ಯಾಪಾರಸ್ಥರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ದ ಘೋಷಣೆಗಳನ್ನು ಕೂಗುವ ಮೂಲಕ ಬಿತ್ತಿಚಿತ್ರ ಹಿಡಿದು ಪ್ರತಿಭಟಿಸಿದರು. ಬೆಲೆಯೇರಿಕೆಯ ವಿರುದ್ದ CPIM ಮಂಗಳೂರು ನಗರದಾದ್ಯಂತ ಹಮ್ಮಿಕೊಂಡ ವಾರಾಚರಣೆಯ ಭಾಗವಾಗಿ ಬೀದಿಬದಿ ವ್ಯಾಪಾರಸ್ಥರೂ ಕೂಡ […]

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ : ಮಾಜಿ ಸಚಿವ ರಮಾನಾಥ ರೈ ಆಕ್ರೋಶ

Friday, February 14th, 2020
ramanath

ಮಂಗಳೂರು : ಏಕಾಏಕಿ ಅಡುಗೆ ಅನಿಲ ದರ ಇಷ್ಟು ದರ ಏರಿಕೆ ಮಾಡುವುದು ಸರಿಯಲ್ಲ. ಕಾಂಗ್ರೆಸ್ ಸರಕಾರ ಇದ್ದಾಗ ಸ್ವಲ್ಪ ಹೆಚ್ಚಳ ಮಾಡಿದರೂ ವಿರೋಧ ವ್ಯಕ್ತಪಡಿಸುತ್ತಿದ್ದರು. ಅಡುಗೆ ಅನಿಲ ದರ ಏರಿಕೆ ಸಾಮಾನ್ಯ ಜನರ ಮೇಲೆ ಬರೆ ಎಳೆದಂತೆ ಆಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಡುಗೆ ಅನಿಲ ದರ ಹೆಚ್ಚಳ ವಿಚಾರವಾಗಿ ಅವರು ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಕರ್ನಾಟಕದಲ್ಲಿ ಬಿಜೆಪಿ ಬಂದ ಬಳಿಕ ರಾಜ್ಯದ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. […]

ಅಡುಗೆ ಅನಿಲ ಸಾಗಾಟದ ಟ್ಯಾಂಕರೊಂದು ರಸ್ತೆ ಬದಿ ಮಗುಚಿ ಬಿದ್ದು ತಪ್ಪಿದ ಬಾರೀ ಅನಾಹುತ

Tuesday, December 6th, 2016
Tanker

ಪುತ್ತೂರು: ಪೆರ್ನೆ ಗ್ರಾಮದ ಕಡಂಬು ಬಳಿಯ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಅಡುಗೆ ಅನಿಲ ಸಾಗಾಟದ ಟ್ಯಾಂಕರೊಂದು ರಸ್ತೆ ಬದಿ ಮಗುಚಿ ಬಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿನತ್ತ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ಹೆದ್ದಾರಿ ಬದಿಗೆ ಮಗುಚಿ ಬಿದ್ದಿದೆ. ತಮಿಳುನಾಡು ಮೂಲದ ಚಾಲಕ ಅಲಗುರು ಸ್ವಾಮಿ(30) ಗಾಯಗೊಂಡಿದ್ದು, ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್‌ನಲ್ಲಿದ್ದ ತಮಿಳುನಾಡು ಮೂಲದ ಕ್ಲೀನರ್ ವೇಲುಗೆ ಯಾವುದೇ ಗಾಯಗಳಾಗಿಲ್ಲ. ಘಟನೆಯಲ್ಲಿ […]

ಅಡುಗೆ ಅನಿಲ ಸಮಸ್ಯೆ ದ.ಕ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ

Saturday, July 30th, 2011
Congress Protest/ ಕಾಂಗ್ರೆಸ್‌ ಕಾರ್ಯಕರ್ತರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಮಂಗಳೂರು: ಅಡುಗೆ ಅನಿಲ ಪೂರೈಕೆಯ ಸಮಸ್ಯೆಯನ್ನು ವಿರೋಧಿಸಿ ದ.ಕ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಈ ವಿಶೇಷ ರೀತಿಯ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಒಲೆ ಉರಿಸಿ, ಚಹಾ ತಯಾರಿಸಿ, ಹಪ್ಪಳ ವನ್ನು ಕಾಯಿಸಿ, ಖಾಲಿ ಗ್ಯಾಸ್‌ ಸಿಲಿಂಡರ್‌ಗಳನ್ನು ಪ್ರದರ್ಶಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಿದರು. ಪ್ರತಿಭಟನೆಯ ನೇತೃತ್ವವಹಿಸಿದ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಐವನ್‌ ಡಿ’ಸೋಜಾ ಮಾತನಾಡಿ ರಾಜ್ಯದ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯು ಗ್ಯಾಸ್‌ […]