ಅಡ್ಯಾರ್ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ

Saturday, July 11th, 2020
Yaqub Adyar

ಬಂಟ್ವಾಳ : ಅಡ್ಯಾರ್ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯರೊಬ್ಬರ ಮೇಲೆ ದುಷ್ಕರ್ಮಿಗಳ ತಂಡ ಮಾರಣಾತಿಕ ಹಲ್ಲೆ ನಡೆಸಿದ ಘಟನೆ  ಅಡ್ಯಾರ್ ಸಮೀಪ  ಶುಕ್ರವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯ, ಅಡ್ಯಾರ್ ಪದವು ನಿವಾಸಿ ಯಾಕೂಬ್ ಎಂದು ಗುರುತಿಸಲಾಗಿದೆ. ಶುಕ್ರವಾರ  ರಾತ್ರಿ 9 ಗಂಟೆಯ ಸುಮಾರಿಗೆ ಅಡ್ಯಾರ್ ಸಮೀಪ ತಂಡವೊಂದು ಯಾಕೂಬ್ ಮೇಲೆ ದಾಳಿ ನಡೆಸಿದೆಯೆನ್ನಲಾಗಿದೆ. ತಂಡದಲ್ಲಿದ್ದವರಲ್ಲಿ ಒಬ್ಬ ವ್ಯಕ್ತಿ ಯಾಕೂಬ್ ಅವರಿಗೆ ಪರಿಚಯಸ್ಥನಾಗಿದ್ದು ಕೆಲವು ವರ್ಷಗಳ ಹಿಂದೆ ಆತ ಅಡ್ಯಾರ್ ಪದವಿನಲ್ಲಿ ವಾಸವಿದ್ದು ಪ್ರಸಕ್ತ ಮಂಗಳೂರಿನಲ್ಲಿ ವಾಸವಿದ್ದಾನೆ […]