ಬಿಜೆಪಿ ವಿಜಯೋತ್ಸವ ವೇಳೆ ಕಲ್ಲು ತೂರಾಟ, ತಲವಾರು ದಾಳಿ: ನಾಲ್ವರಿಗೆ ಗಾಯ
Wednesday, May 16th, 2018ಮಂಗಳೂರು: ಬಿಜೆಪಿ ವಿಜಯೋತ್ಸವ ವೇಳೆ ಕಲ್ಲು ತೂರಾಟ, ತಲವಾರು ದಾಳಿ ನಡೆಸಲಾಗಿದ್ದು, ನಾಲ್ವರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ಹೊರವಲಯದ ಅಡ್ಯಾರ್ ಪದವಿನಲ್ಲಿ ಘಟನೆ ನಡೆದಿದೆ. ವಿಜಯೋತ್ಸವ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಸುಮಾರು 50ಕ್ಕೂ ಹೆಚ್ಚಿನ ಯುವಕರು ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.