ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಅಣ್ಣಾ ಹಜಾರೆ

Thursday, March 29th, 2018
anna-hajare

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹಿರಿಯ ಹೋರಾಟಗಾರ ಅಣ್ಣಾ ಹಜಾರೆ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಲೋಕಪಾಲರ ನೇಮಕ ಮತ್ತು ರೈತರ ಬೆಳೆಗಳಿಗೆ ಸೂಕ್ತ ದರ ನಿಗದಿ ಮಾಡಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ವರದಿ ಜಾರಿಗೆ ಅಣ್ಣಾ ಹಜಾರೆ ಒತ್ತಾಯಿಸಿದ್ದರು. ಈ ಸಂಬಂಧ ಇದೇ 23ರಿಂದ ರಾಮ್‌ಲೀಲಾ ಮೈದಾನದಲ್ಲಿ ಅವರು ಅನಿರ್ಧಿಷ್ಟಾವಧಿಯ ಉಪವಾಸ ಸತ್ಯಾಗ್ರಹ ಶುರು ಮಾಡಿದ್ದರು. ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್‌ ಹಾಗೂ ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವ ಗಜೇಂದ್ರ ಸಿಂಗ್‌ […]

ಮಮತಾಗೆ ಕೈಕೊಟ್ಟ ‘ಅಣ್ಣಾ’ ರಾಜಕೀಯ!

Thursday, March 13th, 2014
Mamata-Banerjee

ನವದೆಹಲಿ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮುಂದಿಟ್ಟುಕೊಂಡು ದೆಹಲಿಯಲ್ಲಿ ರಾಜಕೀಯ ಮಾಡಲು ಹೊರಟ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಯೋಜನೆ ವಿಫಲವಾಗಿದೆ. ರಾಮಲೀಲಾ ಮೈದಾನದಲ್ಲಿ ಬುಧವಾರ ಆಯೋಜಿಸಲಾಗಿದ್ದ ರ್ಯಾಲಿಗೆ ಅಣ್ಣಾ ಕೈಕೊಟ್ಟಿದ್ದಾರೆ. ಬೆರಳೆಣಿಕೆ ಸಂಖ್ಯೆಯ ಜನರಿಗೆ ಮಮತಾ ಅವರೊಬ್ಬರೇ ಭಾಷಣ ಮಾಡಿ ಹೋಗಿದ್ದಾರೆ. ಅಣ್ಣಾ ಗೈರು ಹಾಜರಾಗಲು ಅನಾರೋಗ್ಯದ ಕಾರಣ ನೀಡಲಾಗುತ್ತಿದೆ. ಆದರೆ, ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಬೆಂಬಲಿಗ, ಭೂ ಸೇನೆ ನಿವೃತ್ತ ಮುಖ್ಯಸ್ಥ ಜ. ವಿ.ಕೆ. ಸಿಂಗ್ ಪ್ರಭಾವವೇ ರ್ಯಾಲಿಯಿಂದ ಅಣ್ಣಾ ದೂರ ಉಳಿಯಲು […]

ಶ್ರೀಮಂತಿಕೆ ಹೊಂದಲು ಭ್ರಷ್ಟಾಚಾರದ ಆದಿ ಹಿಡಿಯುವುದು ತಪ್ಪು : ನ್ಯಾ| ಹೆಗೆಡೆ

Sunday, October 16th, 2011
Anti-Corruption

ಮಂಗಳೂರು: ಭ್ರಷ್ಟಾಚಾರ ವಿರೋಧಿ ಸಮಿತಿ ಮಂಗಳೂರು ಹಾಗೂ ಕೆನರಾ ಕಾಲೇಜಿನ ಸಹಯೋಗದಲ್ಲಿ ನಗರದಲ್ಲಿ ಶನಿವಾರ ಟಿ.ವಿ ರಮಣ ಪೈ ಹಾಲ್ ನಲ್ಲಿ ಜರಗಿದ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾ ಸ್ವೀಕಾರ ಸಮಾರಂಭವನ್ನು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ, ಮಾಜಿ ಲೋಕಾಯುಕ್ತ ನ್ಯಾ| ಎನ್‌. ಸಂತೋಷ್‌ ಕುಮಾರ್ ಹೆಗೆಡೆ ಅವರು ದೀಪ ಬೆಳಗಿಸಿ ಉಧ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಭ್ರಷ್ಟಾಚಾರ ಹಾಗೂ ದುರಾಡಳಿತದ ವಿರುದ್ಧ ವಿದ್ಯಾರ್ಥಿಗಳು, ಯುವಜನತೆ ಎಚ್ಚೆತ್ತುಕೊಂಡು ಹೋರಾಟ ನಡೆಸದಿದ್ದರೆ ಈ ದೇಶ ಭವಿಷ್ಯದಲ್ಲಿ ದೊಡ್ಡ […]

ಅಣ್ಣಾ ಬೇಡಿಕೆ : ಕೊನೆಗೂ ಧ್ವನಿಮತದಿಂದ ಸಮ್ಮತಿಸಿದ ಸರಕಾರ

Saturday, August 27th, 2011
Anna Hazare/ ಅಣ್ಣಾ ಹಜಾರೆ

ನವ ದೆಹಲಿ: ಲೋಕಸಭೆಯಲ್ಲಿ ಲೋಕಪಾಲ ಮಸೂದೆಯ ಚರ್ಚೆಯ ನಂತರ ಸಂಸತ್ತಿನಲ್ಲಿ ಧ್ವನಿಮತದ ಪ್ರಸ್ತಾವನೆಗೆ ಕೊನೆಗೂ ಕೇಂದ್ರ ಸರಕಾರ ಒಪ್ಪಿಕೊಂಡಿದೆ. ಲೋಕಪಾಲ ಚರ್ಚೆಯ ನಂತರ ಧ್ವನಿಮತಕ್ಕೆ ಹಾಕುವ ಕೇಂದ್ರ ಸರಕಾರದ ನಿರ್ಧಾರದಿಂದ ಸಂತೋಷವಾಗಿದೆ ಎಂದು ಅಣ್ಣಾ ತಂಡದ ಸದಸ್ಯರಾದ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಸಂಸತ್ತಿನಲ್ಲಿ ನಿರ್ಣಯ ಅಂಗೀಕಾರವಾದ ನಂತರ ಪ್ರಧಾನಿಮಂತ್ರಿ ಮನಮೋಹನ್ ಸಿಂಗ್ ಅವರ ಪತ್ರದೊಂದಿಗೆ ಕೇಂದ್ರ ಸಚಿವ ವಿಲಾಸರಾವ್ ದೇಶಮುಖ್, ಅಣ್ಣಾ ಹಜಾರೆಯವರ ಭೇಟಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಣ್ಣಾ ಹಜಾರೆ, ಜನಲೋಕಪಾಲ ಮಸೂದೆ ಜಾರಿಗೊಳಿಸುವಂತೆ […]

ಭ್ರಷ್ಟಾಚಾರದ ವಿರುದ್ದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

Saturday, August 27th, 2011
ABVP-protst/ ಎ.ಬಿ.ವಿ.ಪಿ ಪ್ರತಿಭಟನೆ

ಮಂಗಳೂರು : ನಗರದ ಕೆ.ಪಿ.ಟಿ. ಬಳಿ ರಾಷ್ಟ್ರೀಯ ಹೆದ್ದಾರಿ 66 ರ ಬಸವೇಶ್ವರ ವೃತ್ತದಲ್ಲಿ ಮತ್ತು ಹಂಪನಕಟ್ಟೆ ಸಿಗ್ನಲ್‌ ವೃತ್ತದಲ್ಲಿ ಅಣ್ಣಾ ಹಜಾರೆ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಹಾಗೂ ಜನ ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಎ.ಬಿ.ವಿ.ಪಿ. ಕಾರ್ಯಕರ್ತರು ಮಾನವ ಸರಪಳಿ ರಚಿಸಿ ರಸ್ತೆ ತಡೆ ಮತ್ತು ಪ್ರತಿಭಟನೆ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎ.ಬಿ.ವಿ.ಪಿ. ಮಂಗಳೂರು ನಗರ ಸಂಘಟನಾ ಕಾರ್ಯದರ್ಶಿ ವಿನಯ್‌ ಮತ್ತು ಮಿಥೇಶ್‌ ನೇತೃತ್ವ ವಹಿಸಿದ್ದರು. ಹಂಪನಕಟ್ಟೆ ಸಿಗ್ನಲ್‌ ವೃತ್ತದಲ್ಲಿ ಎ.ಬಿ.ವಿ.ಪಿ. ದ.ಕ. […]

ಅಣ್ಣಾ ಅಂದದ್ದೇ ಸೈ : ಒಮ್ಮತದ ಲೋಕಪಾಲಗೆ ಇಂದು ನಿರ್ಣಯ

Friday, August 26th, 2011
Anna Hazare

ನವದೆಹಲಿ: ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಹತ್ತನೇ ದಿನಕ್ಕೆ ಕಾಲಿಟ್ಟಿದ್ದು,ಅವರ ಆರೋಗ್ಯ ಕ್ಷಿಣಿಸುತ್ತಿದೆ. ಆದರೂ ಸ್ಥಿರವಾಗಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ತಿಳಿಸಿದ್ದಾರೆ. ರಕ್ತ ಮಾದರಿ ಪರೀಕ್ಷೆಯಿಂದ ಅಣ್ಣಾ ಆರೋಗ್ಯ ಉತ್ತಮವಾಗಿದೆ. ಆದರೆ ಅವರ ದೇಹ ತೂಕ ಆರು ಕೆ.ಜಿ.ಯಷ್ಟು ಕಡಿಮೆ ಆಗಿದೆ.ಇದು ಆತಂಕಕ್ಕೆ ಕಾರಣವಾದ ಅಂಶ ಎಂದು ಅಣ್ಣಾ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿರುವ ಖ್ಯಾತ ಹೃದ್ರೋಗ ತಜ್ಞ ನರೇಶ್ ಟ್ರೆಹಾನ್ ತಿಳಿಸಿದರು. ಅಣ್ಣಾ ಆರು ಲೀಟರ್ ನೀರು ಕುಡಿದಿದ್ದು, ಇದು […]

ಅಣ್ಣಾ ಹಜಾರೆ ಹೋರಾಟದ ಬೆಂಬಲಕ್ಕೆ ನಿಂತ ವಕೀಲರ ಸಂಘ

Friday, August 19th, 2011
lawyers Protest/ ವಕೀಲರ ಸಂಘ

ಮಂಗಳೂರು : ವಕೀಲರ ಸಂಘದ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಅಣ್ಣಾ ಹಜಾರೆ ಆರಂಭಿಸಿರುವ ಹೋರಾಟವನ್ನು ಬೆಂಬಲಿಸಿ ವಕೀಲರ ಸಂಘದ ವತಿಯಿಂದ ಗುರುವಾರ ಜಿಲ್ಲಾ ನ್ಯಾಯಾಲಯದ ಆವರಣದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಮೌನ ಮೆರವಣಿಗೆ ಮತ್ತು ಬಳಿಕ ಪ್ರತಿಭಟನಾ ಸಭೆ ಜರಗಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಕೀ‌ಲರ ಸಂಘದ ಅಧ್ಯಕ್ಷ ಎಸ್‌.ಪಿ. ಚೆಂಗಪ್ಪ ಕೇಂದ್ರ ಸರಕಾರ ಸಂಸತ್ತಿನಲ್ಲಿ ಮಂಡಿಸಿರುವ ಲೋಕ ಪಾಲ ಮಸೂದೆಯಿಂದ ಎಲ್ಲಾ ಭ್ರಷ್ಟರನ್ನು ಶಿಕ್ಷಿಸಲು ಸಾಧ್ಯವಾಗದು. ಪ್ರಧಾನಿ ಮತ್ತು ಉನ್ನತ ನ್ಯಾಯಾಂಗದ ಸಹಿತ […]

ಅಡ್ವಾಣಿ ಬ್ಲಾಗ್ ನಲ್ಲಿ ಅಣ್ಣಾ ಹಜಾರೆಗೆ ಖಂಡನೆ

Tuesday, April 12th, 2011
ಎಲ್ .ಕೆ. ಅಡ್ವಾಣಿ

ನವದೆಹಲಿ : ಜನಲೋಕಪಾಲ್ ಮಸೂದೆ ಜಾರಿ ಹೋರಾಟದಲ್ಲಿ ಅಣ್ಣಾ ಹಜಾರೆ ಎಲ್ಲಾ ರಾಜಕಾರಣಿಗಳನ್ನು ಒಂದೇ ತಕ್ಕಡಿಯಲ್ಲಿಟ್ಟು ನೋಡುವ ಅಣ್ಣಾ ಅವರ ಧೋರಣೆ ಬಗ್ಗೆ ಬಿಜೆಪಿ ನಾಯಕ ಎಲ್.ಕೆ.ಆಡ್ವಾಣಿ ತಮ್ಮ ಬ್ಲಾಗ್‌ನಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಗೂ 2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಜೆಪಿಸಿ ತನಿಖೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಸತತ ಎರಡು ತಿಂಗಳ ಕಾಲ ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲವಾಗಿತ್ತು. ಆದರೆ ಅಣ್ಣಾ ಹಜಾರೆ ಅವರು ಕೇವಲ ನಾಲ್ಕು ದಿನಗಳ ಕಾಲ ಉಪವಾಸ ಸತ್ಯಾಗ್ರಹ ಮಾಡಿ […]