ಕೊಡಗು ಜಿಲ್ಲೆ ಮತ್ತು ಸಕಲೇಶಪುರ ಅತೀವೃಷ್ಠಿ ಪೀಡಿತರಿಗೆ ಕ್ಷೇತ್ರ ಧರ್ಮಸ್ಥಳದಿಂದ ರೂ. 10 ಕೋಟಿ ಬಿಡುಗಡೆ
Friday, September 7th, 2018ಧರ್ಮಸ್ಥಳ : ಇತ್ತೀಚೆಗೆ ಕೊಡಗು ಜಿಲ್ಲೆಯಲ್ಲಿ ಅತೀವೃಷ್ಠಿಯಿಂದ ಉಂಟಾಗಿರುವ ವ್ಯಾಪಕ ಹಾನಿಯ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಇಂದು ಧರ್ಮಸ್ಥಳದಲ್ಲಿ ವಿಶ್ಲೇಷಣೆ ನಡೆಸಿದರು. ಕೊಡಗು ಜಿಲ್ಲೆಯಲ್ಲಿ ಕುಟುಂಬಗಳಿಗೆ ಉಂಟಾಗಿರುವ ಹಾನಿಯ ಬಗ್ಗೆ ನಡೆಸಿದ ಸರ್ವೇಕ್ಷಣೆ ವರದಿಯನ್ನು ಕೊಡಗು ಜಿಲ್ಲೆಯ ನಿರ್ದೇಶಕ ಶ್ರೀ ಯೋಗೀಶ್ರವರು ನೀಡಿದರು. ಜಿಲ್ಲೆಯಲ್ಲಿ ಸುಮಾರು 1,715 ಯೋಜನೆಯ ಕುಟುಂಬಗಳಿಗೆ ವ್ಯಾಪಕವಾಗಿ ಹಾನಿಯಾಗಿದೆ. ಈ ಪೈಕಿ 1,000 ಕುಟುಂಬಗಳ ಮನೆಗಳು ಸಂಪೂರ್ಣವಾಗಿ ನಾಶವಾಗಿದೆ ಇಲ್ಲವೇ ಹಾನಿಯುಂಟಾಗಿದೆ. ಸುಮಾರು ರೂ. 2.50 ಕೋಟಿಯ ಉಪಕರಣಗಳು, ಬೆಲೆಬಾಳುವ ವಸ್ತುಗಳು ಕಣ್ಮರೆಯಾಗಿದೆ. […]