ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ ಹರಣ ಶಿಕ್ಷೆ ನೀಡಬೇಕು : ಶೋಭಾ ಕರಂದ್ಲಾಜೆ

Saturday, October 10th, 2020
shobha

ಉಡುಪಿ :  ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ ಹರಣ ಶಿಕ್ಷೆ ವಿಧಿಸುವುದು ಸೂಕ್ತ, ಅತ್ಯಾಚಾರ ಪ್ರಕರಣಗಳಿಗೆ ಧರ್ಮ, ಜಾತಿಯ ಲೇಪನ ಹಚ್ಚುವುದು ಸರಿಯಲ್ಲ. ಇದು ಮಾನಸಿಕ ಸ್ಥಿತಿಯ ಮೇಲೆ ಅವಲಂಭಿತವಾಗಿರುತ್ತದೆ ಎಂದು ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಹಲವು ಕಡೆಗಳಲ್ಲಿ ಪದೇ ಪದೇ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೇ ಇವೆ. ಇದೇ ಸಂದರ್ಭದಲ್ಲಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಬಗ್ಗೆಯೂ ಎಲ್ಲ ಕಡೆಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅತ್ಯಾಚಾರಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ […]

ಅತ್ಯಾಚಾರಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಲು ಅವಕಾಶ ನೀಡಬಾರದು : ರಾಮನಾಥ್​​ ಕೋವಿಂದ್​​

Friday, December 6th, 2019
Ramnath

ನವದೆಹಲಿ : ಶಿಶು ಅತ್ಯಾಚಾರಿಗಳಿಗೆ ಕ್ಷಮಾದಾನದ ಅರ್ಜಿ ಸಲ್ಲಿಸಲು ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎನ್ನುವ ಮೂಲಕ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇಂದು ರಾಜಸ್ಥಾನದ ಕಾರ್ಯಕ್ರಮವೊಂದರಲ್ಲಿ ಮಾತಾಡಿದ ರಾಷ್ಟ್ರಪತಿ ಕೋವಿಂದ್, ಫೋಕ್ಸೋ ಕಾಯ್ದೆ ಅಡಿಯಲ್ಲಿ ಶಿಕ್ಷೆಗೆ ಗುರಿಯಾದ ಅತ್ಯಾಚಾರಿಗಳಿಗೆ ಕ್ಷಮಾದಾನಕ್ಕೆ ಅವಕಾಶವೇ ಕೊಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. ಮಹಿಳೆಯರ ರಕ್ಷಣೆ ಅತ್ಯಂತ ಗಂಭೀರ ವಿಚಾರ. ಹಾಗಾಗಿ ಫೋಕ್ಸೋ ಕಾಯ್ದೆಯಡಿ ಶಿಕ್ಷೆಗೊಳಗಾದ ಅತ್ಯಾಚಾರಿಳಿಗೆ ಕ್ಷಮೆ ಕೋರಿಕೆ ಅರ್ಜಿ ಸಲ್ಲಿಸುವ ಅವಕಾಶ ನೀಡಬಾರದು. ಅತ್ಯಾಚಾರಿಗಳಿಗೆ ಇಂತಹ […]

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ : ವುಮೆನ್ ಇಂಡಿಯಾ ಮೂವ್‌ಮೆಂಟ್ ಪ್ರತಿಭಟನೆ

Thursday, December 5th, 2019
Women-india

ಮಡಿಕೇರಿ : ಮಹಿಳೆಯರ ಭದ್ರತೆಯನ್ನು ಸರ್ಕಾರಗಳು ತನ್ನ ಆದ್ಯತೆಯ ವಿಷಯವನ್ನಾಗಿ ಪರಿಗಣಿಸಬೇಕು ಮತ್ತು ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಶೀಘ್ರ ಪೂರ್ಣಗೊಳಿಸಿ ತಪ್ಪಿತಸ್ತರಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕೆಂದು ಆಗ್ರಹಿಸಿ ವುಮೆನ್ ಇಂಡಿಯಾ ಮೂವ್‌ಮೆಂಟ್‌ನ ಕೊಡಗು ಜಿಲ್ಲಾ ಘಟಕ ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿತು. ವುಮೆನ್ ಇಂಡಿಯಾ ಮೂವ್‌ಮೆಂಟ್‌ನ ಜಿಲ್ಲಾಧ್ಯಕ್ಷೆ ನಫೀಸ ಅಡ್ಕಾರ್ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು ಜಿಲ್ಲಾಡಳಿತ ಭವನದ ಮುಂಭಾಗ ಘೋಷಣೆಗಳ ಸಹಿತ ಪ್ರತಿಭಟನೆ ನಡೆಸಿದರು. ನಿತ್ಯೋಪಯೋಗಿ ವಸ್ತುಗಳ ಬೆಲೆ ಹೆಚ್ಚಳವನ್ನು ಖಂಡಿಸಿದರು. […]

ಅತ್ಯಾಚಾರಿ ಕೊಲೆಗಡುಕರಿಗೆ ಮರಣ ದಂಡನೆ ವಿಧಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಯವರಿಗೆ ಮನವಿ

Wednesday, December 4th, 2019
Mangaluru

ಮಂಗಳೂರು : ಇತ್ತೀಚಿಗೆ 4 ಜನ ನರ ರಾಕ್ಷಸರಿಂದ ಅತ್ಯಾಚಾರಕ್ಕೊಳಗಾಗಿ ಅಮಾನವೀಯವಾಗಿ ಕೊಲೆಯಾದ ವೈದ್ಯೆ ಪ್ರಿಯಾಂಕ ರೆಡ್ಡಿಯವರ ಸಾವಿಗೆ ನ್ಯಾಯ ದೊರೆಯ ಬೇಕಾದರೆ ಈ ಪ್ರಕರಣವು ಆದಷ್ಟು ಬೇಗ ತ್ವರಿತ ನ್ಯಾಯಾಲಯದಲ್ಲಿ ಇತ್ಯರ್ಥವಾಗಿ ಅತ್ಯಾಚಾರಿ ಕೊಲೆಗಡುಕರಿಗೆ ಮರಣ ದಂಡನೆಯಾಗಬೇಕು. ಮಾತ್ರವಲ್ಲ ಇಷ್ಟರವರೆಗೆ ನಡೆದ ಎಲ್ಲಾ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಆದಷ್ಟು ಬೇಗ ಮರಣ ದಂಡನೆ ವಿಧಿಸ ಬೇಕೆಂದು ಒತ್ತಾಯಿಸಿ ದಿನಾಂಕ 4-12-2019 ರಂದು ಬೆಳಗ್ಗೆ 11 ಘಂಟೆಗೆ ದ.ಕ ಮಹಿಳಾ ಕಾಂಗ್ರೆಸ್ ವತಿಯಿಂದ ಮಂಗಳೂರು ಜಿಲ್ಲಾಧಿಕಾರಿಯವರಿಗೆ ಮನವಿಯನ್ನು […]

ತೊಕ್ಕೋಟು : ಅತ್ಯಾಚಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು

Monday, March 16th, 2015
Thokkottu Rape

ತೊಕ್ಕೋಟು : ಜಿಲ್ಲೆಯಲ್ಲಿ ಮುಂದೆ ಯಾವ ಮಗುವಿನ ಮೇಲೆಯೂ ಲೈಂಗಿಕ ದೌರ್ಜನ್ಯ ನಡೆಯಬಾರದು. ಅದಕ್ಕಾಗಿ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತೊಕ್ಕೊಟ್ಟು ಅತ್ಯಾಚಾರ ಪ್ರಕರಣದ ಬಾಲಕಿಯ ತಾಯಿ ಸರಕಾರವನ್ನು ಆಗ್ರಹಿಸಿದರು. ನಗರದಲ್ಲಿ ಭಾನುವಾರ ದ.ಕ. ಜಿಲ್ಲಾ ಸಂಯುಕ್ತ ಮುಸ್ಲಿಂ ಜಮಾಅತ್ ಕರೆದ ಪತ್ರಿಕಾಗೋಷ್ಠಿಯಲ್ಲಿ ಅಳಲು ತೋಡಿಕೊಂಡ ಅವರು, ದಿಲ್ಲಿ, ಬೆಂಗಳೂರಿನಲ್ಲಿ ಅತ್ಯಾಚಾರ ಘಟನೆ ನಡೆದ ತಕ್ಷಣ ಶಾಸಕ, ಸಚಿವರು ಧಾವಿಸಿದರು. ಹೋರಾಟ ನಡೆಯಿತು, ಹೊಸ ಕಾನೂನು ರಚನೆಯಾಯಿತು. ನಮ್ಮಲ್ಲಿ ಆರೋಪಿ ಬಂಧನವಾಗಿದೆ. ಅದು ಬಿಟ್ಟರೆ […]