ಲಂಚ ಸ್ವೀಕರಿಸುತ್ತಿದ್ದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂವರ ಅಧಿಕಾರಿಗಳ ಬಂಧನ

Thursday, January 13th, 2022
UUDA

ಉಡುಪಿ : ಲಂಚ ಸ್ವೀಕರಿಸುತ್ತಿದ್ದ ಆರೋಪದಡಿಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂವರ ಅಧಿಕಾರಿಗಳನ್ನು ಉಡುಪಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಗುರುವಾರ ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಂಡಿದ್ದಾರೆ. ಭೂ ಪರಿವರ್ತನೆಗೆ ಸಂಬಂಧಿಸಿ ಪ್ರಾಧಿಕಾರದ ಅಧಿಕಾರಿಗಳು ಮೂರು ಲಕ್ಷ ರೂ. ಹಣದ ಬೇಡಿಕೆಯನ್ನು ಮುಂದಿಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ನೀಡಿದ ದೂರಿನಂತೆ ಎಸಿಬಿ ಉಡುಪಿ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ತಂಡ, ಆರೋಪಿಗಳಾದ ಪ್ರಭಾರ ನಗರ ಯೋಜನಾ ಸದಸ್ಯ ಗುರುಪ್ರಸಾದ್, ಸಹಾಯಕ ನಗರ ಯೋಜನಾ ಸದಸ್ಯೆ ನಯೀಮ […]

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿನ ಸಮಸ್ಯೆಗಳು ಶೀಘ್ರ ಪರಿಹಾರ: ಆರ್ ಅಶೋಕ

Friday, July 9th, 2021
R Ashoka

ಬೆಂಗಳೂರು  : ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಸರಿಯಾದ ರೀತಿಯಲ್ಲಿ ಶೀಘ್ರವಾಗಿ ಸರಿಪಡಿಸಬೇಕು, ಸರ್ವರ್ ಮತ್ತು ಒಟಿಪಿ ಸಮಸ್ಯೆಯನ್ನು ತಕ್ಷಣವೇ ಸರಿಪಡಿಸಬೇಕು ಎಂದು ಕಂದಾಯ ಸಚಿವ ಆರ್ ಅಶೋಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಕುರಿತಂತೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಸಾರ್ವಜನಿಕರಿಗೆ ಆಸ್ತಿ ನೋಂದಣಿಯ ಸಮಯದಲ್ಲಿ ಸರ್ವರ್ ಮತ್ತು ಒಟಿಪಿಯಿಂದ ಆಗುವ ಸಮಸ್ಯೆಗಳ ಬಗ್ಗೆ ಹಾಗೂ ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿನ ಸಮಸ್ಯೆಗಳ ಬಗೆಗೆ ವಿಸ್ತಾರವಾಗಿ ಚರ್ಚೆ ನಡೆಸಲಾಯಿತು. ಶಿವರಾಮ್ ಕಾರಂತ್ ಬಡಾವಣೆಯಲ್ಲಿನ ಸರ್ಕಾರಿ ಜಮೀನನ್ನು ಬಿಡಿಎಗೆ […]

ಸ್ಥಳೀಯರಿಗೆ ಉದ್ಯೋಗದಲ್ಲಿ ತೊಂದರೆ ಕೊಟ್ಟರೆ ಹುಶಾರ್ – MRPL ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟ ಶಾಸಕ ಡಾ.ಭರತ್ ಶೆಟ್ಟಿ

Saturday, June 5th, 2021
Bharath Shetty

ಮಂಗಳೂರು  : MRPL ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಸ್ಥಳೀಯ ಯುವಕನೊಬ್ಬನ ಮೊಬೈಲ್ ಫೋನ್ ಅನ್ನು ಬಲವಂತವಾಗಿ ತೆಗೆದುಕೊಂಡು ಅದರಲ್ಲಿರುವ ಫೋಟೋಸ್, ದಾಖಲೆಗಳನ್ನು ತಡಕಾಡಿ ಆರು ಜನ ಅಧಿಕಾರಿಗಳು ತೀವ್ರತರ ತನಿಖೆ ಮಾಡಿ ಯುವಕನಿಗೆ ಮಾನಸಿಕ ದೌರ್ಜನ್ಯ ನಡೆಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿತ್ತು. ಇದು ಶಾಸಕ ಡಾ.ವೈ ಭರತ್ ಶೆಟ್ಟಿಯವರ ಗಮನಕ್ಕೆ ಬಂದ ಕೂಡಲೇ ಶನಿವಾರ ಬೆಳಿಗ್ಗೆ MRPL ಅತಿಥಿ ಗೃಹಕ್ಕೆ ತೆರಳಿದ ಡಾ.ಭರತ್ ಶೆಟ್ಟಿಯವರು ಅಲ್ಲಿ ಅಧಿಕಾರಿಗಳನ್ನು ಕರೆಸಿ ಎಚ್ಚರಿಕೆ ನೀಡಿದ್ದಾರೆ. ಅಧಿಕಾರಿಗಳು […]

ವಿಟ್ಲ ಉಪ ನೋಂದಣಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಸಂಜೀವ ಮಠಂದೂರು

Friday, September 11th, 2020
vitla Subregister

ಬಂಟ್ವಾಳ:  ವಿಟ್ಲ ಉಪನೋಂದಣಿ ಕಚೇರಿಗೆ ದಿಢೀರನೆ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ವಿಟ್ಲ ಉಪ ನೋಂದಣಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಶುಕ್ರವಾರ ನಡೆದಿದೆ. ಸಾರ್ವಜನಿಕರ ನಿರಂತರ ದೂರಿನ ಹಿನ್ನೆಲೆಯಲ್ಲಿ  ವಿಟ್ಲ ಉಪ ನೋಂದಣಿ  ಕಚೇರಿಗೆ ಭೇಟಿ ನೀಡಿದ ಶಾಸಕರು ಉಪನೋಂದಣಾಧಿಕಾರಿ ಪ್ರೇಮಾ  ಅವರನ್ನು  ನೀವು ಬೆಳಿಗ್ಗೆ 11 ಗಂಟೆಗೆ ಕರ್ತವ್ಯ ಹಾಜರಾಗುತ್ತಿದ್ದೀರಿ, ಪ್ರತಿನಿತ್ಯ ಜನರು ತಮ್ಮ ಕೆಲಸಕ್ಕೆ ಕಾಯಬೇಕು. ಕೆಲವರು ಕೆಲಸ ನಡೆಯದೇ ಹಿಂತಿರುಗುತ್ತಿದ್ದಾರೆ. ಜನರೊಂದಿಗೆ ದರ್ಪದಿಂದ ವರ್ತಿಸುತ್ತಿದ್ದೀರಿ ಎಂಬ ದೂರು ಬರುತ್ತಿದೆ. ನಾನು […]

ಮೋದಿ ಭೇಟಿ :ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ಗುಹಾಗು ಪರಿಶೀಲನೆ

Thursday, October 26th, 2017
darmasthala

ಮಂಗಳೂರು: ಬೆಳ್ತಂಗಡಿಯ ಉಜಿರೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಕಾರ್ತಿಕ ಮಾಸದಲ್ಲಿ ಧರ್ಮಸ್ಥಳಕ್ಕೆ ಮೋದಿ: ಭಕ್ತರಿಗೆ ದೇವಾಲಯದ ಮನವಿ ಜಿಲ್ಲೆಯ ಎಲ್ಲಾ ಆಯಕಟ್ಟಿನ ಸ್ಥಳಗಳು ಸೇರಿದಂತೆ ಪಶ್ಚಿಮಘಟ್ಟ ತಪ್ಪಲಿನ ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ . ಪ್ರಧಾನಿ ಅವರ ಭದ್ರತೆಯ ಜವಾಬ್ದಾರಿ ಹೊತ್ತಿರುವ ಎಸ್.ಪಿ.ಜಿ ಪಡೆಯ ಐಜಿ ಶ್ರೇಣಿಯ ಅಧಿಕಾರಿ ಸೇರಿದಂತೆ ಎಸ್.ಪಿ.ಜಿ ಪಡೆಯ ಕಮಾಂಡೋಗಳು ಈಗಾಗಲೇ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಧರ್ಮಸ್ಥಳಕ್ಕೆ […]