ಸರಕಾರಿ ಜಾಗದಲ್ಲಿ ಮೀನು ಮಾರುತ್ತಿದ್ದ ಗೂಡಂಗಡಿಗಳ ತೆರವು

Saturday, July 10th, 2021
Petty Shop

ಉಡುಪಿ : ಸರಕಾರಿ ಜಾಗದಲ್ಲಿ ಮೀನು ಮಾರುತ್ತಿದ್ದ ಗೂಡಂಗಡಿಗಳನ್ನು ಸಾರ್ವಜನಿಕರ ದೂರಿನ ಮೇರೆಗೆ ಉಡುಪಿ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆ ಮೂಲಕ ತೆರವುಗೊಳಿಸಿದ್ದಾರೆ. ನಗರಸಭೆಯ ಅಧಿಕಾರಿಗಳು ನಗರದ ಪೋಲಿಸರ ನೇತೃತ್ವದಲ್ಲಿ ಬ್ರಹ್ಮಗಿರಿ ಸರ್ಕಲ್ ಸುತ್ತಮುತ್ತಲಿನ ಒಟ್ಟು ಐದು ಅಂಗಡಿಗಳನ್ನು ತೆರವು ಮಾಡಿದ್ದಾರೆ. ಯಾವುದೇ ನೋಟೀಸ್ ನೀಡದೆ ಏಕಾಏಕಿ ತೆರವುಗೊಳಿಸಿರುವುದಕ್ಕೆಅಂಗಡಿ ಮಾಲಕರಾದ ಅಶೋಕ್ ರಾಜ್ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ ಗೂಡಂಗಡಿ ಸಾಗಿಸುವ ವಾಹನದಡಿ ಮಲಗಿ ಪ್ರತಿಭಟಿಸಿದರು.   ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಡಾ.ಉದಯ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್‌ರಾಜ್, […]

ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ತಿಂಗಳೊಳಗಾಗಿ ಪೂರ್ಣಗೊಳಿಸಿ: ಸಚಿವ ಕೆ.ಎಸ್.ಈಶ್ವರಪ್ಪ

Friday, July 9th, 2021
eswarappa

ಮೈಸೂರು :- ಕೇಂದ್ರ ಸರ್ಕಾರವು ವಿಶೇಷವಾಗಿ ಆಸಕ್ತಿವಹಿಸಿರುವ ಕುಡಿಯುವ ನೀರಿನ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯಡಿ ವಿಳಂಬವಾಗಿರುವ ಕಾಮಗಾರಿಗಳನ್ನು ಜುಲೈ ತಿಂಗಳೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಶುಕ್ರವಾರ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ, ಜಲಜೀವನ್ ಮಿಷನ್ ಸೇರಿದಂತೆ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಹಾಗೂ ಕೋವಿಡ್-19 ಸೋಂಕು ಗ್ರಾಮೀಣ ಪ್ರದೇಶದಲ್ಲಿ ಹರಡುವುದುನ್ನು […]

ಸಂಭವನೀಯ ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಅಗತ್ಯದ ಸಿದ್ದತೆಗೆ ಈಗಿನಿಂದಲೇ ಕ್ರಮ ಜರುಗಿಸಿ

Monday, June 7th, 2021
Gadaga

ಗದಗ : ಜಿಲ್ಲೆಯಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ನಿಯಂತ್ರಣಕ್ಕೆ ಬರುತ್ತಿರುವದು ಸಮಾಧಾನಕರವಾದ ಸಂಗತಿಯಾಗಿದೆ. ತಜ್ಞರ ವರದಿಯಂತೆ ಮುಂದೆ ಬರಬಹುದಾದ ಸಂಭವನೀಯ ಮೂರನೇ ಅಲೆಯನ್ನು ಎದುರಿಸಲು ಅಧಿಕಾರಿಗಳು ಮೈಮರೆಯದೆ ಬೇಕಾದ ಅಗತ್ಯದ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ವಿಡಿಯೋ ಸಭಾಂಗಣದಲ್ಲಿ ಜರುಗಿದ ಕೋವಿಡ್ ಸೋಂಕು ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಜ್ಞರ ವರದಿಯಂತೆ ಸಂಭವನೀಯ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರುವ ಸಂಭವವಿದ್ದು […]

ರಸ್ತೆ ಬದಿಯಲ್ಲಿ ಕಸ ಎಸೆಯುವವರನ್ನು ಕಾದು ಕುಳಿತು 5 ಸಾವಿರ ದಂಡ ಹಾಕಿದ ಪುತ್ತೂರು ನಗರಸಭೆ ಅಧಿಕಾರಿಗಳು

Saturday, August 22nd, 2020
Puttur Garbage

ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯ ಮುಕ್ರಂಪಾಡಿಯಲ್ಲಿ ರಸ್ತೆ ಬದಿಯಲ್ಲೇ ತ್ಯಾಜ್ಯ ಕಸಗಳನ್ನು ಎಸೆದು ಹೋಗುತ್ತಿದ್ದ ಉಸ್ಮಾನ್ ಮತ್ತು ಅಶ್ರಫ್ ಎಂಬುವರಿಗೆ ತಲಾ ರೂ. 5 ಸಾವಿರ ದಂಡ ವಿಧಿಸಿ ಪುತ್ತೂರು ನಗರಸಭೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಮನೆ ಮನೆ ತ್ಯಾಜ್ಯ ಸಂಗ್ರಹ ನಡೆಯುತ್ತಿದ್ದರೂ ಕೆಲವೊಂದು ಕಡೆ ರಸ್ತೆ ಬದಿಯಲ್ಲಿ ರಾಶಿ ರಾಶಿ ಕಸಗಳನ್ನು ಹಾಕಿ ಪರಿಸರ ಮಲೀನಗೊಳಿಸುತ್ತಿದ್ದರು. ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಕಸದ ರಾಶಿ ಇರುವ ಸ್ಥಳಗಳ ಬಳಿ ಕಸ ಹಾಕುವವರನ್ನು ಹಿಡಿಯಲು ಕಾದು ಕುಳಿತಿದ್ದರು. ಸಂಪ್ಯ ಕಡೆಯಿಂದ ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ಇಬ್ಬರು […]

ತಲಪಾಡಿ ಗಡಿ ಮೂಲಕ ಕೇರಳಕ್ಕೆ ತೆರಳಲು ಯತ್ನಿಸಿದ ನಾಲ್ವರನ್ನು ಬಂಧಿಸಿದ ಅಧಿಕಾರಿಗಳು

Thursday, April 16th, 2020
Talapady-corona-point

ಮಂಗಳೂರು : ಕರ್ನಾಟಕದಿಂದ ತಲಪಾಡಿ ಗಡಿ ಮೂಲಕ ಕೇರಳಕ್ಕೆ ತೆರಳಲು ಯತ್ನಿಸಿದ ನಾಲ್ವರನ್ನು ಗುರುವಾರ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದು ಅವರನ್ನು  ಕೊರೊನಾ ನಿಗಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಕಾಸರಗೋಡಿನಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿ ಭಾಗವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಈ ನಡುವೆ ಸಾಕಷ್ಟು ಚರ್ಚೆಗೂ ಕಾರಣವಾಗಿದೆ. ಅಗತ್ಯ ವಸ್ತುಗಳು ಹಾಗೂ ತುರ್ತು ಆಂಬ್ಯುಲೆನ್ಸ್ ಗಳಿಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ನಿಯಮ ಉಲ್ಲಂಘಿಸಿ ಹಲವರು ಸಂಚರಿಸಲು ಯತ್ನಿಸುತ್ತಿದ್ದಾರೆ. ಇದೀಗ ಲಾಕ್ ಡೌನ್ ಉಲ್ಲಂಘಿಸಿ ಗಡಿ ದಾಟಿ […]

ಮಂಗಳೂರಿನಲ್ಲಿ ಅಕ್ರಮ ಮರಳು ಮಾಫಿಯಾಕ್ಕೆ ಬಲಿಯಾಗುತ್ತಿರುವ ಅಧಿಕಾರಿಗಳು

Saturday, June 9th, 2018
VipulKumar

ಮಂಗಳೂರು  : ದಕ್ಷಿಣ ಕರಾವಳಿಯ ನದೀ ತೀರಗಳಲ್ಲಿ ನಡೆಯುವ ಅಕ್ರಮ ಮರುಳುಗಾಗಿಕೆ ಗೆ ಪೊಲೀಸ್ ಅಧಿಕಾರಿಗಳು ಬಲಿಯಾಗುತ್ತಿರುವುದಕ್ಕೆ ರಾಜಕೀಯ ಪ್ರೇರಿತ ಶಕ್ತಿಗಳು ಕಾರಣ ಎಂಬುದನ್ನು ಸ್ವತಃ ಅಧಿಕಾರಿಗಳೇ ಹೇಳುತ್ತಿದ್ದಾರೆ. ವಿಪುಲ್ ಕುಮಾರ್  ಆಕ್ರಮ ಮರಳುಗಾರಿಕೆ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು ಮಾತ್ರವಲ್ಲ, ವಿಶೇಷ ಕಾರ್ಯಪಡೆ ತಂಡ ಒಂದನ್ನು ರಚಿಸಿ ಅಕ್ರಮ ಮರಳು ದಾಸ್ತಾನು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದರು. 1400ಕ್ಕೂ ಅಧಿಕ ಲೋಡ್ ಮರಳನ್ನು ವಶಪಡಿಸಿಕೊಂಡಿದ್ದರು. ವಿಪುಲ್ ಕುಮಾರ್ ಅವರ ದಿಢೀರ್ ವರ್ಗಾವಣೆಗೆ ಅಕ್ರಮ ಮರಳುಗಾರಿಕೆಗೆ ತಡೆಯೊಡ್ಡಿದ್ದೇ […]