ಸೆಪ್ಟೆಂಬರ್ 23 ರೊಳಗೆ ರಾಜ್ಯ ವಿಧಾನಸಭಾ ಅಧಿವೇಶನ : ಸಭಾಧ್ಯಕ್ಷರಿಂದ ಪರಿಶೀಲನೆ

Thursday, August 6th, 2020
Kageri

ಬೆಂಗಳೂರು :ಕಳೆದ ಮಾರ್ಚ್‍ನಲ್ಲಿ ರಾಜ್ಯ ವಿಧಾನ ಸಭಾ ಅಧಿವೇಶನವು ನಡೆದಿದ್ದು, ಸಂವಿಧಾನಬದ್ದವಾಗಿ ಆರು ತಿಂಗಳ ಒಳಗೆ ಅಂದರೆ ಸೆಪ್ಟೆಂಬರ್ 23 ರೊಳಗೆ, ಮತ್ತೊಮ್ಮೆ ಸಮಾವೇಶಗೊಳ್ಳಬೇಕಿರುವ ಹಿನ್ನೆಲೆಯಲ್ಲಿ ಸದನದಲ್ಲಿ ರಾಜ್ಯ ಸಚಿವ ಸಂಪುಟದ ಸದಸ್ಯರು ಮತ್ತು ಸದನದ ಸದಸ್ಯರು, ಸದನದಲ್ಲಿ ಹಾಜರಿರುವ ಅಧಿಕಾರಿಗಳು ಹಾಗೂ ಮಾಧ್ಯಮದವರ ಆರೋಗ್ಯಕ್ಕೆ ಕೋವಿಡ್-19 ರ ಸೋಂಕು ತಗುಲದಂತೆ ಕ್ರಮ ವಹಿಸುವುದು ಹೇಗೆ ? ಎಂಬುದರ ಕುರಿತು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಸದನದಲ್ಲಿನ ವ್ಯವಸ್ಥೆಗಳನ್ನು […]

ಜುಲೈ 30 ರಿಂದ ಆನ್‌ಲೈನ್ ಮೂಲಕ 9ನೆಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

Wednesday, July 29th, 2020
Sanathana

ಮಂಗಳೂರು  : ಮೋದಿ ಸರಕಾರ ಕೇಂದ್ರದಲ್ಲಿ ಎರಡನೆಯ ಬಾರಿಗೆ ಬಂದ ಬಳಿಕ ಕಾಶ್ಮೀರಿ ಹಿಂದೂಗಳ ಪುನರ್ವಸತಿಯ ದೃಷ್ಟಿಯಿಂದ ಕಲಮ್ ೩೭೦ ರದ್ದುಗೊಳಿಸುವುದು, ಪೌರತ್ವ ತಿದ್ದುಪಡಿ ಕಾನೂನು (ಸಿ.ಎ.ಎ.), ಸರ್ವೋಚ್ಚ ನ್ಯಾಯಾಲಯವು ರಾಮಮಂದಿರದ ಪರವಾಗಿ ನೀಡಿರುವ ಐತಿಹಾಸಿಕ ತೀರ್ಪು, ಅಲ್ಲದೇ ೫ ಆಗಸ್ಟ್ ೨೦೨೦ ರಂದು ಆಯೋಜಿಸಲಾಗಿರುವ ರಾಮಮಂದಿರದ ಭೂಮಿಪೂಜೆ ಮುಂತಾದ ಸಕಾರಾತ್ಮಕ ವಿಷಯಗಳು ಘಟಿಸುತ್ತಿವೆ. ಇದರಲ್ಲಿ ಪೌರತ್ವ ತಿದ್ದುಪಡಿ ಕಾನೂನು ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ ಫಲಶ್ರುತಿಯಾಗಿದೆ. ೨೦೧೪ ನೇ ಇಸವಿಯಲ್ಲಿ ‘ಹಿಂದೂ ರಾಷ್ಟ್ರ ಅಧಿವೇಶನದಲ್ಲಿ […]

ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಲು ತೆಲಂಗಾಣ ಸರ್ಕಾರ ನಿರ್ಧಾರ

Monday, February 17th, 2020
CAA

ನವದೆಹಲಿ : ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ದೇಶದೆಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ತೆಲಂಗಾಣ ಸರ್ಕಾರವು ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ನಿರ್ಣಯವನ್ನು ಅಂಗೀಕರಿಸಲು ನಿರ್ಧರಿಸಿದೆ. ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ರಾವ್ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸುವುದಾಗಿ ಸಿಎಂ ಚಂದ್ರಶೇಖರ್ ರಾವ್ ಕಳೆದ ತಿಂಗಳು ಹೇಳಿದ್ದರು. ಕೇರಳ, ಪಂಜಾಬ್, ರಾಜಸ್ಥಾನ, ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶ ಹಾಗೂ ಕೇಂದ್ರಾಡಳಿತ ಪ್ರದೇಶವಾದ […]

ಹಿಂದೂ ರಾಷ್ಟ್ರದ ನಿರ್ಮಾಣ ಮತ್ತು ಹಿಂದೂ ಸಂಘಟನೆಗಳ ಐಕ್ಯತೆಗಾಗಿ ಮಂಗಳೂರಿನಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Friday, February 7th, 2020
hindhu-jana-jagruti

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರಾಂತೀಯ ಹಿಂದೂ ಅಧಿವೇಶನ ಮಂಗಳೂರಿನಲ್ಲಿ ನಡೆಯಲಿದೆ. ಈ ಪ್ರಾಂತೀಯ ಹಿಂದೂ ಅಧಿವೇಶನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾರ್ಯ ಮಾಡುವ 50 ಕ್ಕೂ ಅಧಿಕ ಹಿಂದೂ ಸಂಘಟನೆಗಳ 100 ಕ್ಕೂ ಅಧಿಕ ಹಿಂದೂ ಸಂಘಟನೆಯ ಪದಾಧಿಕಾರಿಗಳು, 100 ಕ್ಕೂ ಅಧಿಕ ರಾಷ್ಟ್ರ ಪ್ರೇಮಿ ವಕೀಲರು, ಸಾಮಾಜಿಕ ಹೋರಾಟಗಾರರು ಮತ್ತು ಹಿಂದೂ ಧಾರ್ಮಿಕ ಮುಖಂಡರು, ಉದ್ಯಮಿಗಳು ಭಾಗಿಯಾಗುವವರಿದ್ದಾರೆ. ಈ ಅಧಿವೇಶನದಲ್ಲಿ ಪೌರತ್ವ […]