ಕಂದಾವರ ಪಂಚಾಯತ್‌ ಅಧ್ಯಕ್ಷರ ಮೇಲೆ ಹಲ್ಲೆ ಮಾಡಿದ ಪಿಡಿಒ, ಗ್ರಾಮಸ್ಥರಿಂದ ಪ್ರತಿಭಟನೆಗೆ ಕರೆ

Tuesday, November 30th, 2021
Umesha Kandavara

ಮಂಗಳೂರು :   ಕಂದಾವರ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ಕಂದಾವರ ಪಂಚಾಯತ್‌ ಅಧ್ಯಕ್ಷ ಉಮೇಶ್ ಮೂಲ್ಯ ಹಲ್ಲೆಗೊಳಗಾದವರು. ಈ ನೆಲೆಯಲ್ಲಿ ಪಂಚಾಯತ್ ಸದಸ್ಯರು ಪಂಚಾಯತ್ ಕಚೇರಿಯ ಮುಂಭಾಗ ಪಿಡಿಒ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬುಧವಾರ ಬೆಳಿಗ್ಗೆ ಗ್ರಾಮಸ್ಥರು ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರಾಗಿ ಎಂ.ಪಿ.ಶ್ರೀನಾಥ್ ಆಯ್ಕೆ

Sunday, November 21st, 2021
srinath

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರಾಗಿ ಉಪನ್ಯಾಸಕ, ಲೇಖಕ ಎಂ.ಪಿ.ಶ್ರೀನಾಥ್ ಆಯ್ಕೆಯಾದರು.  ಶ್ರೀನಾಥ್ ಅವರು ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ 26 ವರ್ಷಗಳಿಂದ ಕನ್ನಡ ಉಪನ್ಯಾಸಕರಾಗಿದ್ದಾರೆ. ಭಾನುವಾರ ಏಕಕಾಲಕ್ಕೆ ರಾಜ್ಯಾದ್ಯಂತ ಕಸಾಪ ರಾಜ್ಯ ಘಟಕ ಹಾಗೂ ಎಲ್ಲಾ ಜಿಲ್ಲಾ ಘಟಕಗಳಿಗೆ ಚುನಾವಣೆ ನಡೆಯಿತು. ದ.ಕ ಜಿಲ್ಲೆಯಲ್ಲಿ ಮಂಗಳೂರು ಅಲ್ಲದೆ ಮೂಡುಬಿದಿರೆ, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ತಾಲೂಕು ಕಚೇರಿ, ಮೂಲ್ಕಿ ನಗರ ಪಂಚಾಯಿತಿ, ವಿಟ್ಲ ಪಟ್ಟಣ ಪಂಚಾಯಿತಿ, ಕೊಕ್ಕಡ ನಾಡ ಕಚೇರಿಯಲ್ಲಿ ಮತದಾನ […]

ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಚುನಾವಣಾ ಕಾರ್ಯಾಲಯದ ಉದ್ಘಾಟನೆ

Tuesday, November 16th, 2021
MN Rajendrakumar

ಮಂಗಳೂರು : ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ವಿಧಾನ ಪರಿಷತ್ ಚುನಾವಣಾ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮವು ಮಂಗಳವಾರ ನಗರದ “ಇನ್‌ಲ್ಯಾಂಡ್ ಓರ್ನೆಟ್” ನಲ್ಲಿ ನಡೆಯಿತು. ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ‌ ಹರೀಶ್ ಶೆಟ್ಟಿ ಕಾರ್ಯಾಲಯವನ್ನು ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ  ಅವರು ಸಹಕಾರಿ ಧುರೀಣ  ಅತ್ಯಂತ ಪ್ರಾಮಾಣಿಕರಾದ, ಜನಸಾಮಾನ್ಯರ ಸೇವಕರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಪಕ್ಷಾತೀತ ವ್ಯಕ್ತಿ. ಸಮಾಜ ಸೇವಕರಿಗೆ ಯಾವುದೇ ಪಕ್ಷದ ಅಗತ್ಯವಿಲ್ಲ, ಜನಸಾಮಾನ್ಯರ ಸಹಕಾರವೇ ಶಕ್ತಿಯಾಗಿದೆ. ಈ ಶಕ್ತಿಯಿಂದಲೇ […]

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಸುಧಾಕರ ಪೂಂಜ

Saturday, October 9th, 2021
Sudhakara Punja

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2021-2023 ಸಾಲಿನ ನೂತನ ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜ ಹೊಸಬೆಟ್ಟು ಆಯ್ಕೆ ಗೊಂಡಿದ್ದಾರೆ. ಬಂಟರ ಭವನದಲ್ಲಿ ನೂತನ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಅಯ್ಕೆ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜಾ ಹೊಸಬೆಟ್ಟು ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು ಕಾರ್ಯದರ್ಶಿಯಾಗಿ ಪ್ರವೀಣ್ ಶೆಟ್ಟಿ ಸುರತ್ಕಲ್, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಸುರತ್ಕಲ್, ಜತೆ ಕಾರ್ಯದರ್ಶಿಯಾಗಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು,ಸಂಘಟನಾ ಕಾರ್ಯದರ್ಶಿಯಾಗಿ ದೇವೇಂದ್ರ ಕೆ ಶೆಟ್ಟಿ ಇಡ್ಯಾ,ಸಾಂಸ್ಕೃತಿಕ […]

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಪ್ರಶಾಂತ್ ಪುಂಜಾಲಕಟ್ಟೆ

Tuesday, September 14th, 2021
Prashanth Poonjalakatte

ಬಂಟ್ವಾಳ : ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಪ್ರಶಾಂತ್ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೌನೇಶ ವಿಶ್ವಕರ್ಮ ಆಯ್ಕೆಯಾಗಿದ್ದಾರೆ. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಅಧ್ಯಕ್ಷತೆಯಲ್ಲಿ ನಡೆದ ಮಹಾ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿದರು. ನೂತನ ಉಪಾಧ್ಯಕ್ಷರಾಗಿ ಯಾದವ್ ಅರ್ಗಬೈಲ್, ಜೊತೆ ಕಾರ್ಯದರ್ಶಿಯಾಗಿ ಇಮ್ತಿಯಾಝ್ […]

ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಪ್ರಧಾನ ಕಾರ್ಯದರ್ಶಿಯಾಗಿ ವೇಣು ವಿನೋದ್ ಆಯ್ಕೆ

Friday, July 30th, 2021
Press Bhavan Trust

ಮಂಗಳೂರು : ಪತ್ರಿಕಾ ಭವನ ಟ್ರಸ್ಟ್ ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ರಾಮಕೃಷ್ಣ ಆರ್. (ಸಂಯುಕ್ತ ಕರ್ನಾಟಕ) ಮುಂದಿನ ಮೂರು ವರ್ಷದ ಅವಧಿಗೆ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ವೇಣು ವಿನೋದ್ (ವಿಜಯವಾಣಿ) ಹಾಗೂ ಕೋಶಾಧಿಕಾರಿಯಾಗಿ ಹರ್ಷ (ಡೆಕ್ಕನ್ ಹೆರಾಲ್ಡ್) ಆಯ್ಕೆಯಾಗಿದ್ದಾರೆ. ಬುಧವಾರ ಪತ್ರಿಕಾಭವನದಲ್ಲಿ ಟ್ರಸ್ಟ್ ನ ಅಧ್ಯಕ್ಷ ಆನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕೋವಿಡ್ -19 ಸಂದರ್ಭದಲ್ಲಿ ಪತ್ರಿಕಾಭವನ ಟ್ರಸ್ಟ್ ವತಿಯಿಂದ 2020ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ […]

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ರಾಗಿ ಶ್ರೀ ನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧ ಆಯ್ಕೆ

Tuesday, July 27th, 2021
Press Housing Board

ಮಂಗಳೂರು : ಪತ್ರಕ ರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಯ ಪ್ರಕ್ರೀಯೆಯನ್ನು ಸಹಕಾರ ಸಂಘದ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ.ಎಂ ಚುನಾವಣಾಧಿಕಾರಿಯಾಗಿ ನಡೆಸಿಕೊಟ್ಟರು. ಸಂಘದ ನಿರ್ದೇಶಕರಾದ ಕೇಶವ ಕುಂದರ್ ,ಪುಷ್ಪರಾಜ್ ಬಿ.ಎನ್,ಇಬ್ರಾಹಿಂ ಅಡ್ಕಸ್ಥಳ,ಆರಿಫ್ ಪಡುಬಿದ್ರೆ,ಜಿತೇಂದ್ರ ಕುಂದೇಶ್ವರ,ಆತ್ಮ ಭೂಷಣ್ ಭಟ್, ಸತ್ಯವತಿ, ಕೆ.ವಿಲ್ ಫ್ರೆಡ್ ಡಿ ಸೋಜ, […]

ತಮಿಳುನಾಡು ಸರಕಾರಕ್ಕೆ ಹೆದರಿ ಮೇಕೆದಾಟು ಯೋಜನೆಯನ್ನು ವಿಳಂಬ ಮಾಡುವ ಅಗತ್ಯ ಇಲ್ಲ : ಡಿ.ಕೆ.ಶಿವಕುಮಾರ್

Monday, July 5th, 2021
DK Shivakumar

ಮಂಗಳೂರು : ದ.ಕ ಜಿಲ್ಲೆಗೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪತ್ರಕರ್ತರೊಂದಿಗೆ ಮಾಡನಾಡಿ ತಮಿಳುನಾಡು ಸರಕಾರಕ್ಕೆ ಹೆದರಿ   ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಮೇಕೆದಾಟು ಯೋಜನೆಯನ್ನು ವಿಳಂಬ ಮಾಡುವ ಅಗತ್ಯ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮೇಕೆದಾಟು ಯೋಜನೆಯನ್ನು ರಾಜ್ಯ ಸರಕಾರ ಕೈಗೆತ್ತಿಕೊಂಡು ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು. ಈ ಬಗ್ಗೆ ಯಡಿಯೂರಪ್ಪ ತಕ್ಷಣ ಕ್ರಮ ಕೈಗೊಳ್ಳ ಬೇಕು. ತಮಿಳುನಾಡು ಸರಕಾರದ ಮುಂದೆ ಭಿಕ್ಷೆ ಬೇಡ ಬೇಕಾಗಿಲ್ಲ ಎಂದು ಹೇಳಿದರು. ಸುಪ್ರೀಂ ಕೋರ್ಟ್ ನೀಡಿರುವ […]

ಮಂಗಳ ಮುಖಿಯರಿಗೆ ಪಡಿತರ ಕಿಟ್ ಹಾಗೂ ಮೆಡಿಕಲ್ ಕಿಟ್ ವಿತರಣೆ

Thursday, June 3rd, 2021
mangala Mukhi

ಬೆಂಗಳೂರು: ಕೋವಿಡ್-19 ಸಂಕಷ್ಟದಲ್ಲಿರುವ 150 ಕ್ಕೂ ಹೆಚ್ಚು ಮಂಗಳ ಮುಖಿಯರಿಗೆ ದಿನಸಿ ಸಾಮಾಗ್ರಿಗಳ ಪಡಿತರ ಕಿಟ್ ಹಾಗೂ ಮೆಡಿಕಲ್ ಕಿಟ್‍ಗಳನ್ನು ಅಗರವಾಲ್ ಸಮಾಜ (ಕರ್ನಾಟಕ)ದ ಬೆಂಗಳೂರು ಪ್ರೆಸ್‍ಕ್ಲಬ್‍ನಲ್ಲಿಂದು ಅಧ್ಯಕ್ಷ ಸಂಜಯ್ ಗರ್ಗ್ ವಿತರಿಸಿದರು. ಪೋಟೊ ಜರ್ನಲಿಸ್ಟ್ ಅಸೋಸಿಯೇಷಯನ್ ಆಫ್ ಬೆಂಗಳೂರು ಮತ್ತು ಅಗರವಾಲ್ ಸಮಾಜ (ಕರ್ನಾಟಕ) ಜಂಟಿಯಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪ್ರಾಸ್ತವಾಕವಾಗಿ, ಸಂಜಯ್ ಗರ್ಗ್ ಮಂಗಳಮುಖಿಯರಿಗೆ ಪಡಿತರ ಕಿಟ್ ನೀಡುತ್ತಿರುವುದು ನಮಗೆ ಸಂತಸ ಉಂಟುಮಾಡಿದೆ. ಸಮಾಜದಿಂದ ನಿರ್ಲಕ್ಷ್ಯಕ್ಕೆ ಒಳಗಾಗದ ಈ ವರ್ಗದವರ ಬಗ್ಗೆ ಕಾಳಜಿ ಹೊಂದಿರುವ […]

ಚೀನಾದಲ್ಲಿ ಇನ್ನು ದಂಪತಿಗಳು ಮೂರು ಮಕ್ಕಳನ್ನು ಹೊಂದಬಹುದು

Monday, May 31st, 2021
china-child

ಬೀಜಿಂಗ್ : ವಿವಾಹಿತ ದಂಪತಿಗಳು ಮೂರು ಮಕ್ಕಳನ್ನು ಹೊಂದ ಬಹುದು ಎಂದು ಚೀನಾ ಸೋಮವಾರ ಪ್ರಕಟಿಸಿದೆ. ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೊಲಿಟ್‌ಬ್ಯುರೊ ಸಭೆಯಲ್ಲಿ ಈ ಬದಲಾವಣೆಯನ್ನು ಅನುಮೋದಿಸಲಾಗಿದೆ ಎಂದು ಅಧಿಕೃತ ಸುದ್ದಿ ಸಂಸ್ಥೆ ಕ್ಸಿನ್ಹುವಾ ವರದಿ ಮಾಡಿದೆ. ಇತ್ತೀಚಿನ ಮಾಹಿತಿಯು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶಗಳಲ್ಲಿ ಚೀನಾದ ಜನನ ಪ್ರಮಾಣ ಕುಸಿದಿದೆ ಎಂಬ ನಾಟಕೀಯ ವರದಿಯನ್ನು ತೋರಿಸಿದ ನಂತರ ಈಗ ಅಸ್ತಿತ್ವದಲ್ಲಿರುವ ಎರಡು ಮಕ್ಕಳ ಮಿತಿಯ ಪ್ರಮುಖ ನೀತಿ ಬದಲಾವಣೆಯಾಗಿದೆ. ದೇಶದ […]