ಮೇಲಾಧಿಕಾರಿಗಳ ಕಿರುಕುಳಕ್ಕೆ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆಗೆ ಶರಣು
Saturday, October 19th, 2019ಶಿವಮೊಗ್ಗ : ಮೇಲಾಧಿಕಾರಿಗಳ ಕಿರುಕುಳದಿಂದಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಮ್ಯಾನೇಜರ್ ಒಬ್ಬರು ಆತ್ಮಹತ್ಯೆ ಶರಣಾಗಿದ್ದಾರೆ. ಜೋಗಫಾಲ್ಸ್ ಎಸ್ಬಿಐ ಶಾಖೆಯ ಅನಿಲ್ ಕುಮಾರ್ (35) ಆತ್ಮಹತ್ಯೆ ಮಾಡಿಕೊಂಡ ಮ್ಯಾನೇಜರ್. ಮೃತ ಅನಿಲ್ ಕುಮಾರ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅನಿಲ್ ಕುಮಾರ್ ಕೆಲಸದ ಒತ್ತಡದಿಂದ ಮಾನಸಿಕವಾಗಿ ಕುಂದಿದ್ದರು. ಕಳೆದ ಎರಡು ದಿನಗಳಿಂದ ರಜೆಯಲ್ಲಿದ್ದ ಅವರು ಇಂದು ಬ್ಯಾಂಕ್ಗೆ ಹೋಗಿ ಬಾಗಿಲು ತೆರೆದಿದ್ದರು. ಆದರೆ ಸ್ವಲ್ಪ ಸಮಯದ ಬಳಿಕ ಮನೆಗೆ ವಾಪಸ್ ಆಗಿದ್ದರು. ಬಳಿಕ ಪತ್ನಿಯನ್ನು ಮನೆಯಿಂದ […]