ಬೈಕ್ ಹಾಗೂ ಜೀಪು ನಡುವೆ ಅಪಘಾತ, ವಿದ್ಯಾರ್ಥಿ ಸಾವು

Wednesday, March 23rd, 2022
dharshan

ಸುಳ್ಯ : ಬೈಕ್ ಹಾಗೂ ಜೀಪು ನಡುವೆ ಸಂಭವಿಸಿದ  ಅಪಘಾತದಲ್ಲಿ  ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರಾಜೆಯ ಕುಂಬಳಚೇರಿ ಎಂಬಲ್ಲಿ ಮಾ.23 ರಂದು ನಡೆದಿದೆ. ಘಟನೆಯಲ್ಲಿ  ಇನ್ನೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದಾನೆ. ಪೆರಾಜೆಯ ನಿವಾಸಿ ಆರ್.ಡಿ. ವೆಂಕಪ್ಪ ಎಂಬವರ ಪುತ್ರ ದರ್ಶನ್ ಹಾಗೂ ಪೆರಾಜೆಯ ನಿವಾಸಿ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಎಂಬ ಇಬ್ಬರು ಬಾಲಕರು ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದು ಪರೀಕ್ಷೆ ಬರೆದು ಹಿಂತಿರುಗುತ್ತಿದ್ದರು ಎನ್ನಲಾಗಿದೆ. ಇಬ್ಬರು ಬೈಕಿನಲ್ಲಿ ಮನೆಗೆ ಬರುತ್ತಿದ್ದ […]

ಆಟೋ ರಿಕ್ಷಾ – ಕಾರಿನ ನಡುವೆ ಅಪಘಾತ, ಆಟೋ ಚಾಲಕ ಸಾವು

Friday, August 27th, 2021
Manila

ಬಂಟ್ವಾಳ : ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೋ ಚಾಲಕ ಮೃತಪಟ್ಟಿರುವ ಘಟನೆ ವಿಟ್ಲ ಪುಣಚ ಗ್ರಾಮದ ಮಾಣಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಇಲ್ಲಿನ ಪರಿಯಾಲ್ತಡ್ಕ ನಿವಾಸಿ ಅಶ್ರಫ್ ಅಪಘಾತದಲ್ಲಿ ಮೃತಪಟ್ಟ ರಿಕ್ಷಾ ಚಾಲಕ. ಗಂಭೀರ ಗಾಯಗೊಂಡಿದ್ದ ಅಶ್ರಫ್ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಎರಡು ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಕಾರು ರಸ್ತೆ […]

ಓಮ್ನಿ ಕಾರು ಡಿಕ್ಕಿ ಹೊಡೆದು ಇಬ್ಬರು ಒಣ ಮೀನು ವ್ಯಾಪಾರಿಗಳು ಮೃತ್ಯು

Friday, May 28th, 2021
omni car accident

ಮಂಗಳೂರು  : ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಎಂಬಲ್ಲಿ ಓಮ್ನಿ ಕಾರು ನಿಂತಿದ್ದ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ  ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್(22) ಹಾಗೂ ಕುಂಜತ್ಕಲ ನಿವಾಸಿ ಉನೈಸ್(27) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನೋರ್ವ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಮಂಗಳೂರಿನ ದಕ್ಕೆಯಲ್ಲಿ ಒಣ ಮೀನು ವ್ಯಾಪಾರಿಗಳಾಗಿದ್ದರು. ಮಂಗಳೂರಿನಿಂದ ಫರಂಗಿಪೇಟೆ ಕಡೆಗೆ ಬರುತ್ತಿದ್ದ […]

ಅಪಘಾತಕ್ಕೊಳಗಾಗಿದ್ದ ಎಎಸ್‌ಐ ನಾರಾಯಣ ನಾಯ್ಕ್ ವಿಧಿವಶ

Sunday, March 14th, 2021
Narayan nayak

ಮಂಗಳೂರು : ಪಾಂಡೇಶ್ವರ ಸಂಚಾರ ಪಶ್ಚಿಮ ಠಾಣಾ ಎಎಸ್‌ಐ ನಾರಾಯಣ ನಾಯ್ಕ್ ಎರಡು ವರ್ಷದ ಹಿಂದೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 14 ರವಿವಾರ ಮೃತಪಟ್ಟಿದ್ದಾರೆ. 2018 ಅಕ್ಟೋಬರ್ 10ರಂದು ಹೈವೇ ಪ್ಯಾಟ್ರೋಲಿಂಗ್ ವೇಳೆ ಮೇರಿಹಿಲ್ ಬಳಿ ರಸ್ತೆ ಅಪಘಾತಕ್ಕೆ ಒಳಗಾಗಿ  ತೀವ್ರ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆಯಲ್ಲಿದ್ದ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಹೆಣ್ಮಕ್ಕಳನ್ನು ಅಗಲಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತರ  ನೇತೃತ್ವದಲ್ಲಿ ಮಂಗಳೂರು ಸಿಎಆರ್ ಮೈದಾನದಲ್ಲಿ ಪಾರ್ಥಿವ ಶರೀರಕ್ಕೆ […]

ಬೈಕ್ ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ ವಿದ್ಯಾರ್ಥಿ ಮೃತ್ಯು

Friday, February 5th, 2021
Abhinav

ಪುತ್ತೂರು: ಕಾಲೇಜ್ ವಿದ್ಯಾರ್ಥಿಯೊಬ್ಬ ಬೈಕ್ ಮತ್ತು ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮುರ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೈಕ್ ಚಲಾಯಿಸುತ್ತಿದ್ದ ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಅಭಿನವ್(23) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಅಭಿನವ್ ಅವರು ಸುಳ್ಯ ಕೆ.ವಿ.ಜಿ ಕಾಲೇಜ್ ವಿದ್ಯಾರ್ಥಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಕುದ್ರೆಬೆಟ್ಟು ಎಂಬಲ್ಲಿ ಕಾರು ಮತ್ತು ಬೈಕ್ ಅಪಘಾತ ಕಲ್ಲಡ್ಕ ನಿವಾಸಿ ಮೃತ್ಯು

Monday, November 23rd, 2020
Yatiraj

ಬಂಟ್ವಾಳ : ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ. ಕಲ್ಲಡ್ಕ ನಿವಾಸಿ, ಸಂಘಪರಿವಾರದ ಕಾರ್ಯಕರ್ತ ಯತಿರಾಜ್ (30) ಮೃತ ಯುವಕ. ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಓಮ್ನಿ ಕಾರು ಯತಿರಾಜ್ ಸಂಚರಿಸುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡಿದ್ದ ಯತಿರಾಜ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ […]

ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ನವದಂಪತಿ ದಾರುಣ ಸಾವು

Tuesday, October 27th, 2020
Rayan-priya

ಮಂಗಳೂರು  : ಟ್ರಕ್  ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ಮಂಗಳವಾರ  ಸಂಜೆ ಸಂಭವಿಸಿದೆ. ಬಜಾಲ್ ನಿವಾಸಿ ರಯಾನ್ ಫೆರ್ನಾಂಡಿಸ್(30) ಮತ್ತು ಪ್ರಿಯಾ ಫೆರ್ನಾಂಡಿಸ್(32) ಮೃತರು. ಕಂಕನಾಡಿ ಫಾದರ್ ಮುಲ್ಲಸ್೯ ಆಸ್ಪತ್ರೆಯಲ್ಲಿ ಸಿಬ್ಬಂದಿಯಾಗಿರುವ ಇಬ್ಬರು ಕರ್ತವ್ಯ ಮುಗಿಸಿ ಉಳ್ಳಾಲ ಬಂಗೇರಲೇನ್ ನಲ್ಲಿರುವ ಬಾಡಿಗೆ ಮನೆಗೆ ತೆರಳುವ ಸಂದರ್ಭ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿದೆ. ದಂಪತಿಗಳು ಬೈಕ್ ಮೂಲಕ  ಉಳ್ಳಾಲ ಕಡೆಗೆ ತಿರುಗುವ […]

ಅಪಘಾತ ಗೊಂಡಿದ್ದ ವಿರಕ್ತ ಮಠದ ಗುರುಲಿಂಗ ಸ್ವಾಮೀಜಿ ಲಿಂಗೈಕ್ಯ

Tuesday, July 14th, 2020
Gurulinga Swamiji

ಚಿತ್ರದುರ್ಗ:  ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸುಲೇಪೇಟದ ಪ್ರತಿಷ್ಠಿತ ಖಟ್ವಾಂಗೇಶ್ವರ ವಿರಕ್ತ ಮಠದ ಗುರುಲಿಂಗ ಸ್ವಾಮೀಜಿ (46) ಸೋಮವಾರ ರಾತ್ರಿ.8.30ಕ್ಕೆ ಚಿತ್ರದುರ್ಗದಲ್ಲಿ ಲಿಂಗೈಕ್ಯರಾದರು. ಗುರುಲಿಂಗ ಸ್ವಾಮೀಜಿ ಚಳ್ಳಕೇರಿಯ ಕಲ್ಲಯ್ಯ ಈರಮ್ಮಾ ದಂಪತಿಯ ನಾಲ್ಕನೇ ಪುತ್ರ.  ಚಿತ್ರದುರ್ಗ ಬೃಹನ್ಮಠದ ಶಾಖಾಮಠವಾಗಿರುವ ಖಟ್ವಾಂಗೇಶ್ವರ ಮಠಕ್ಕೆ 1991-92ರಲ್ಲಿ ನಿಯೋಜಿತರಾಗಿದ್ದರು. ಬಸವ ಪರಂಪರೆಯಂತೆ 1994ರಲ್ಲಿ ಪಟ್ಟಾಧಿಕಾರ ನಡೆಸಲಾಗಿತ್ತು. ಸ್ವಾಮೀಜಿ ಅಕ್ಟೋಬರ್ 27ರಂದು ಶ್ರೀಮಠದಿಂದ ಸ್ವಂತ ಕಾರಿನಲ್ಲಿ ತೆರಳುವಾಗ ಕಲಬುರ್ಗಿ ಬಳಿಯ ಕಪನೂರ ಹತ್ತಿರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಅಂದಿನಿಂದ ಕಲಬುರ್ಗಿಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ […]

ಸೋಮವಾರಪೇಟೆಗೆ ತೆರಳುತ್ತಿದ್ದ ಕನ್ನಡದ ರಿಯಾಲಿಟಿ ಶೋ ಹುಡುಗಿ ಅಪಘಾತದಲ್ಲಿ ಮೃತ್ಯು

Wednesday, May 27th, 2020
Mebina-Michael

ಮಂಡ್ಯ: ಕನ್ನಡದ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ ಸೀಸನ್ 4 ವಿಜೇತೆ ಮೆಬಿನಾ ಮೈಕಲ್, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ  ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿನ್ನೆ ಸಂಜೆ 4.30ರ ವೇಳೆಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. […]

ಹಾಸನ : ಎರಡು ಲಾರಿಗಳು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು

Tuesday, February 25th, 2020
hasana

ಹಾಸನ : ಸರಕು ಸಾಗಣೆ ಮಾಡುತ್ತಿದ್ದ ಎರಡು ಲಾರಿಗಳ ನಡುವೆ ಇಂದು ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಸಿಂಗಾಪುರ ಗ್ರಾಮದ ಬಳಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ‌ ಈ ಅಪಘಾತ ಸಂಭವಿಸಿದೆ. ಅಪಘಾತ ನಡೆದ ಸ್ಥಳದಲ್ಲಿ ಯಾವುದೇ ತಿರುವು ಇರಲಿಲ್ಲ. ಆದಾಗ್ಯೂ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹ ಹೊರ ತೆಗೆಯಲು ಸ್ಥಳೀಯರು, ಪೊಲೀಸರ ಹರಸಾಹಸ ಪಟ್ಟಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ […]