ಬಂಟ್ವಾಳ : ಕಳೆನಾಶಕ ಸೇವಿಸಿ ಗ್ರಾಪಂ ಅಭ್ಯರ್ಥಿ ಸಾವು
Monday, December 28th, 2020ಮಂಗಳೂರು: ಕಳೆನಾಶಕವನ್ನು ಸೇವಿಸಿ ಗ್ರಾಪಂ ಸದಸ್ಯ ಹಾಗೂ ಹಾಲಿ ಅಭ್ಯರ್ಥಿಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದಲ್ಲಿ ನಡೆದಿದೆ. ಕಾವಳಮುಡೂರು ಗ್ರಾಮದ ಅರ್ಗತ್ಯಾರು ನಿವಾಸಿ ಜಯಂತ ಪ್ರಭು (58) ಮೃತ ವ್ಯಕ್ತಿ. ಡಿ. 21ರಂದು ರಾತ್ರಿ 11 ಗಂಟೆಯ ವೇಳೆ ಬಾಯಿ ಹುಣ್ಣಿಗೆಂದು ತೆಗೆದುಕೊಳ್ಳುತ್ತಿದ್ದ ಔಷಧದ ಬದಲಾಗಿ ಖಾಲಿಯಾಗಿದ್ದ ಔಷಧ ಬಾಟಲಿಯಲ್ಲಿ ಶೇಖರಿಸಿಟ್ಟಿದ್ದ ಟ್ರೈಕಾಟ್ ಎಂಬ ಹುಲ್ಲಿಗೆ ಸಿಂಪಡಣೆ ಮಾಡುವ ಕಳೆನಾಶಕ ಸೇವಿಸಿದ್ದರು. ಮರುದಿನ ಗ್ರಾಪಂ ಚುನಾವಣೆಯಲ್ಲಿ ಮತದಾನ ಮಾಡಿದ್ದರಲ್ಲದೆ ಮತಗಟ್ಟೆಯಲ್ಲೂ ಒಂದಷ್ಟು ಹೊತ್ತು ಕಳೆದು […]