ಕೊರೊನಾ ವಿರುದ್ಧ ಹೋರಾಟ- ಕರ್ನಾಟಕ ಸರ್ಕಾರದ ಕ್ರಮಗಳ ಬಗ್ಗೆ ಅಮಿತ್ ಷಾ ಮೆಚ್ಚುಗೆ

Thursday, September 2nd, 2021
Amith Sha

ಬೆಂಗಳೂರು : ದೇಶ ಮತ್ತು ಜಗತ್ತು ಹಿಂದೆಂದೂ ಕಂಡಿರದ, ಮಾನವಕುಲಕ್ಕೇ ಸವಾಲಾಗಿದ್ದ ಕೊರೊನಾ ಮಹಾಮಾರಿಯನ್ನು ಕರ್ನಾಟಕ ಸರ್ಕಾರ ಅತ್ಯುತ್ತಮವಾಗಿ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಸರ್ಕಾರವನ್ನು ಮುಕ್ತಕಂಠದಿಂದ ಪ್ರಶಂಸಿಸಿದರು. ಕರ್ನಾಟಕ ರಾಜ್ಯ ಮೊದಲಿಗೆ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಾಗೂ ಈಗ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೊರೊನಾ ವಿರುದ್ಧ ಸಮರ್ಥವಾಗಿ ಹೋರಾಡಿದೆ. ಈ ವರೆಗೆ ಸುಮಾರು 5.2 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಆ ಪೈಕಿ 4 ಕೋಟಿ […]

ಎನ್​ಪಿಆರ್​ಗೂ ಎನ್ಆರ್​ಸಿಗೂ ಸಂಬಂಧವಿಲ್ಲ : ಯಾರೂ ಪೌರತ್ವ ಕಳೆದುಕೊಳ್ಳುವುದಿಲ್ಲ; ಅಮಿತ್ ಶಾ ಸ್ಪಷ್ಟನೆ

Wednesday, December 25th, 2019
Amit

ನವದೆಹಲಿ : ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಯೋಜನೆಗೆ ಕೇಂದ್ರ ಸಂಪುಟ ಇವತ್ತು ಅನುಮೋದನೆ ನೀಡಿದ ಬೆನ್ನಲ್ಲೇ ಎನ್ಆರ್ಸಿ, ಪೌರತ್ವ ಕಾಯ್ದೆ ಬಗ್ಗೆ ಹಲವರು ಆತಂಕ ವ್ಯಕ್ತಪಡಿಸಲು ಪ್ರಾರಂಭಿಸಿದ್ಧಾರೆ. ಎನ್ಪಿಆರ್ ಬಗ್ಗೆಯೂ ಅನುಮಾನದ ದೃಷ್ಟಿ ಇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ ಅವರು ಎನ್ಪಿಆರ್, ಎನ್ಆರ್ಸಿ ಕುರಿತು ಉದ್ಭವಿಸಿರುವ ಅನುಮಾನಗಳಿಗೆ ತೆರೆ ಎಳೆಯಲು ಯತ್ನಿಸಿದ್ಧಾರೆ. ಎನ್ಆರ್ಸಿಗೂ ಎನ್ಪಿಆರ್ಗೂ ಯಾವುದೇ ಸಂಬಂಧವಿಲ್ಲ. ಭಾರತಾದ್ಯಂತ ಎನ್ಆರ್ಸಿ ಜಾರಿಗೊಳಿಸುವ ಬಗ್ಗೆ ಇನ್ನೂ ಚರ್ಚೆ ನಡೆದಿಲ್ಲ ಎಂದೂ […]

ಅಮಿತ್ ಶಾ, ಯಡಿಯೂರಪ್ಪ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್​ನಿಂದ ಬೃಹತ್​ ಪ್ರತಿಭಟನೆ

Tuesday, November 5th, 2019
Pratibhatane

ಬೆಂಗಳೂರು: ವೈರಲ್ ಆಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ವಿಡಿಯೋ ಸಂಭಾಷಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಭಾಗಿಯಾಗಿದ್ದಾರೆ. ಇಬ್ಬರೂ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಎಂ.ಜಿ. ರಸ್ತೆಯ ಟ್ರಿನಿಟಿ ವೃತ್ತದ ವಿಜಯ ಬ್ಯಾಂಕ್ ಜಂಕ್ಷನ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ನ ವಿವಿಧ ನಾಯಕರು ಭಾಗಿಯಾಗಿದ್ದರು. ಅಮಿತ್ ಶಾ ಹಾಗೂ ಬಿ.ಎಸ್.ಯಡಿಯೂರಪ್ಪ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ. ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. […]

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿದ ಅಮಿತ್ ಶಾ

Thursday, October 3rd, 2019
amith-shah

ನವದೆಹಲಿ : ದೇಶಿ ನಿರ್ಮಿತ, ಅತ್ಯಂತ ವೇಗದ ಇಂಜಿನ್ ರಹಿತ ವಂದೇ ಭಾರತ್ ಎಕ್ಸ್ ಪ್ರೆಸ್ (ಟ್ರೈನ್ 18) ರೈಲಿಗೆ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯಲ್ಲಿ ವಿಧ್ಯುಕ್ತವಾಗಿ ಚಾಲನೆ ನೀಡಿದರು. ದೆಹಲಿ-ಕತ್ರಾ ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಕೇವಲ 8ಗಂಟೆಗಳಲ್ಲಿ 655 ಕಿಲೋ ಮೀಟರ್ ತಲುಪಲಿದೆ. ಅಕ್ಟೋಬರ್ 5ರಿಂದ ದೆಹಲಿ-ಕತ್ರಾ ನಡುವೆ ಸಂಚಾರ ಆರಂಭಿಸಲಿದ್ದು, ಐಆರ್ ಸಿಟಿಸಿ ವೆಬ್ ಸೈಟ್ ನಲ್ಲಿ ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ. ವೈಷ್ಣೋದೇವಿ ದೇವಸ್ಥಾನ […]

ಮತ್ತೆ ರಾಜ್ಯ ಪ್ರವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸಿದ್ಧತೆ..!

Friday, July 13th, 2018
yedyurappa

ಬೆಂಗಳೂರು: ವಿಧಾನಸಭೆ ಅಧಿವೇಶನ ಮುಗಿಯುತ್ತಿದ್ದಂತೆ ಮತ್ತೆ ರಾಜ್ಯ ಪ್ರವಾಸಕ್ಕೆ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸಿದ್ಧತೆ ನಡೆಸುತ್ತಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಭೇಟಿ ನೀಡಿ ಸರ್ಕಾರದ ವಿರುದ್ಧ ಆಂದೋಲನ ನಡೆಸಲಿದ್ದಾರೆ ಎನ್ನುವ ಮಾಹಿತಿ ಬಿಜೆಪಿ ಆಪ್ತ ಮೂಲಗಳಿಂದ ಸಿಕ್ಕಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಎರಡು ಬಾರಿ ರಾಜ್ಯ ಸುತ್ತಿದ್ದ ಬಿಜೆಪಿ ಯಡಿಯೂರಪ್ಪ ಇದೀಗ ಮತ್ತೆ ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದಾರೆ. ಸಾಲಮನ್ನಾ ವಿಚಾರ ಸೇರಿದಂತೆ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಿಸದ‌ ಮೈತ್ರಿ ಸರ್ಕಾರದ ವಿರುದ್ಧ ಜನರ […]

ಜನಾದೇಶ ಕಾಂಗ್ರೆಸ್‌ಗೆ ವಿರುದ್ಧವಾಗಿದ್ದರೂ ಜೆಡಿಎಸ್ ನೊಂದಿಗೆ ಆತುರವಾಗಿ ಮೈತ್ರಿ : ಅಮಿತ್ ಶಾ

Monday, May 21st, 2018
Amith sha

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜನಾದೇಶ ಕಾಂಗ್ರೆಸ್‌ಗೆ ವಿರುದ್ಧವಾಗಿತ್ತು. ಅದಕ್ಕಾಗಿಯೇ ಜೆಡಿಎಸ್ ನೊಂದಿಗೆ ಆತುರವಾಗಿ ಮೈತ್ರಿ ಮಾಡುಲು ಒಪ್ಪಿಕೊಂಡಿದೆ ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಲನ್ನು ಗೆಲುವೆಂದು ಬಿಂಬಿಸಲು ಕಾಂಗ್ರೆಸ್‌ ಹೊಸ ದಾರಿಯನ್ನು ಈ ರೀತಿಯಾಗಿ ಕಂಡುಕೊಂಡಿದೆ ಎಂದು ಹೇಳಿದರು. ಹೆಚ್ಚಿನ ಎಲ್ಲ ಸಚಿವರು ಸೋತ ಹೊರತಾಗಿಯೂ ತಾವು ಸಂಭ್ರಮಿಸುತ್ತಿರುವುದು ಯಾಕೆ ಎಂಬುದನ್ನು ಕಾಂಗ್ರೆಸ್‌ನವರು ರಾಜ್ಯದ ಜನತೆಗೆ ವಿವರಿಸಲಿ ಎಂದು ಶಾ ಹೇಳಿದರು. ‘ಕೇವಲ […]

ಅಮಿತ್‌ ಶಾ ‘ಗೂಬೆಲ್‌’ ತಂತ್ರ ನಡೆಯಲ್ಲ: ರಾಜ್ಯದಲ್ಲಿ ಅದಕ್ಕೆ ಅವಕಾಶವೂ ಇಲ್ಲ: ಸಿದ್ದರಾಮಯ್ಯ

Friday, May 18th, 2018
siddaramaih

ಬೆಂಗಳೂರು: ನಾಳೆಯೇ ಬಿ.ಎಸ್‌‌.ಯಡಿಯೂರಪ್ಪ ಅವರಿಗೆ ಬಹುಮತ ಸಾಬೀತು ಪಡಿಸಲು ಸೂಚಿಸಿರುವ ಸುಪ್ರೀಂಕೋರ್ಟ್‌ ಆದೇಶವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ತೀರ್ಪು ನೀಡಿರುವ ನ್ಯಾಯಮೂರ್ತಿಗಳನ್ನು ಅಭಿನಂದಿಸುತ್ತೇನೆ. ದೇಶದ ಇತಿಹಾಸದಲ್ಲಿ ಇದು ಮೈಲಿಗಲ್ಲಾಗುವ ತೀರ್ಪು ಎಂದು ಸಿದ್ದರಾಮಯ್ಯ ಹೇಳಿದರು. ಸುಪ್ರೀಂಕೋರ್ಟ್‌ ಆದೇಶ ಹೊರ ಬರುತ್ತಿದ್ದಂತೆ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್‌ ನಗರದ ಕೆಪಿಪಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ತೀರ್ಪಿನ ಮೂಲಕ ನ್ಯಾಯಾಧೀಶರು ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆ ಮಾಡುವ ಕರ್ತವ್ಯ ನಿರ್ವಹಿಸಿದ್ದಾರೆ. ಸುಪ್ರೀಂ ನ್ಯಾಯಾಧೀಶರಿಗೆ […]

ಐದು ವರ್ಷದಿಂದಲೇ ನಡೆದಿತ್ತು ರಾಜೇಶ್ ನೈಕ್‌ ಚುನಾವಣಾ ತಯಾರಿ!

Friday, May 11th, 2018
rajesh-naik

ಬಂಟ್ವಾಳ: ರಾಜೇಶ್ ನೈಕ್‌ಅವರಿಗೆ ಈ ಬಾರಿಗೆಲ್ಲುವ ಸಾಧ್ಯತೆ ನೂರಕ್ಕೆತೊಂಭತ್ತೊಂಭತ್ತರಷ್ಟುಇದೆಎನ್ನುವುದಕ್ಕೆಕಾರಣಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಗಳಿಸಿಕೊಂಡಿರುವ ಜನಬೆಂಬಲ. ಹಾಗಂತ ರಾಜೇಶ್ ನೈಕ್‌ಅವರಿಗೆ ಈ ಮಟ್ಟದಯಶಸ್ಸು ಸುಮ್ಮಸುಮ್ಮನೆ ಒಲಿದಿಲ್ಲ. ಅವರು ಕಳೆದ ಐದು ವರ‍್ಷಗಳಲ್ಲಿ ಎಡೆಬಿಡದೆ ಇದಕ್ಕಾಗಿ ಶ್ರಮಿಸಿದ್ದಾರೆ. ಕಳೆದ ಬಾರಿ 2003 ರಲ್ಲಿಚುನಾವಣೆ ನಡೆದಾಗರಾಜೇಶ್ ನೈಕ್ ಈ ಪರಿ ಜನ ಬೆಂಬಲವನ್ನು ಗಳಿಸಿರಲಿಲ್ಲ. ಯಾಕೆಂದರೆ ಅದು ಅವರ ಪ್ರಥಮ ಚುನಾವಣೆಯಾಗಿತ್ತು. ಅದರೊಂದಿಗೆ ಅವರು ಎದುರಿಸಬೇಕಾಗಿರುವುದು ಕರ‍್ನಾಟಕದ ಘಟಾನುಘಟಿ ರಾಜಕಾರಣಿ ಎಂದೇ ಹೆಸರು ಮಾಡಿರುವ ಬಿ ರಮಾನಾಥ ರೈಅವರನ್ನು. ಅಷ್ಟೇ ಅಲ್ಲದೆ […]

ಸಿದ್ದರಾಮಯ್ಯರಿಂದ ಕೊಲೆಗಡುಗರ ರಕ್ಷಣೆ: ಅಮಿತ್ ಶಾ ಆರೋಪ

Wednesday, May 9th, 2018
amit-shah

ಮಂಗಳೂರು: ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದವರನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣೆ ಮಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಪಾತಾಳದಲ್ಲಿದ್ದರೂ ಕೊಲೆಗಡುಕರನ್ನು ಹುಡುಕಿ ಬಂಧಿಸುತ್ತೇವೆ ಎಂದು ಹೇಳಿದ್ದಾರೆ. ನಗರದ ನವಭಾರತ್ ವೃತ್ತದಿಂದ ಡೊಂಗರಕೇರಿ ಮೂಲಕ ಕಾರ್‌ಸ್ಟ್ರೀಟ್ ತನಕ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರೊಂದಿಗೆ ರೋಡ್ ಶೋ ನಡೆಸಿದ ಬಳಿಕ ಅವರು ಮಾತನಾಡಿದರು. ಸಿದ್ದರಾಮಯ್ಯ ಸರಕಾರ ಅಭಿವೃದ್ಧಿ ವಿರೋಧಿ ಮತ್ತು ಗೂಂಡಾಗಿರಿಯ ಸರಕಾರ. ಕಾರ್ಯಕರ್ತರನ್ನು ಹತ್ಯೆ […]

ಅಮಿತ್ ಶಾ ರೋಡ್ ಶೋ, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿ

Tuesday, May 8th, 2018
road-show

ಮಂಗಳೂರು : ಮಂಗಳೂರು ಕ್ಷೇತ್ರದ ಕಾಪಿಕಾಡ್ ನಿಂದ ತೊಕ್ಕೊಟ್ಟು ವರೆಗೆ ಅಮಿತ್ ಶಾ ರೋಡ್ ಶೋ ನಡೆಯಿತು. ರೋಡ್ ಶೋ ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದು, ಕಾಪಿಕಾಡ್ ನಿಂದ ತೊಕ್ಕೊಟ್ಟು ವರೆಗೆ ರೋಡ್ ಶೋ ನಡೆಯಿತು. ಮಂಗಳೂರು ಬಿಜೆಪಿ ಅಭ್ಯರ್ಥಿ ಸಂತೋಷ್ ರೈ ಬೋಳಿಯಾರ್ ಮತ್ತು ಬಿಜೆಪಿ ಮುಖಂಡರೊಂದಿಗೆ ಅಮಿತ್ ಷಾ ರೋಡ್ ಶೋ ನಡೆಯಿತು.