ಸಚಿವ ರಾಜಣ್ಣ ಶ್ರೀರಾಮ ಮಂದಿರ ವಿಷಯದಲ್ಲಿ ಹೇಳಿರುವುದು ಬಹುಸಂಖ್ಯಾತ ಹಿಂದುಗಳಿಗೆ ಮಾಡಿರುವ ಅವಮಾನ : ಸಂಸದ ನಳಿನ್‌

Saturday, January 20th, 2024
ಸಚಿವ ರಾಜಣ್ಣ ಶ್ರೀರಾಮ ಮಂದಿರ ವಿಷಯದಲ್ಲಿ ಹೇಳಿರುವುದು ಬಹುಸಂಖ್ಯಾತ ಹಿಂದುಗಳಿಗೆ ಮಾಡಿರುವ ಅವಮಾನ : ಸಂಸದ ನಳಿನ್‌

ಮಂಗಳೂರು : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ವಿಷಯದಲ್ಲಿ ಸಚಿವ ರಾಜಣ್ಣ ನೀಡಿರುವುದು ಮುರ್ಖತನದ ಹೇಳಿಕೆ. ಈ ಹೇಳಿಕೆ ಕಾಂಗ್ರೆಸ್‌ನ ಮಾನಸಿಕತೆಯನ್ನು ತೋರಿಸುತ್ತದೆ ಎಂದು ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ, ದ.ಕ. ಸಂಸದ ನಳಿನ್‌ ಕುಮಾರ್ ಕಟೀಲ್‌ ಹೇಳಿದ್ದಾರೆ. ಮಂಗಳೂರಿನಲ್ಲಿ ರಾಮ‌ ಮಂದಿರದ ಬಗ್ಗೆ ಸಚಿವ ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್‌ ಅವರು, ಅಯೋಧ್ಯೆಯ ಹೋರಾಟದ ಸಂದರ್ಭ ಕಾಂಗ್ರೆಸ್ ಟೀಕೆಗಳನ್ನು ಮಾಡಿತ್ತು. ರಾಮನ ಹುಟ್ಟಿನ‌ ಬಗ್ಗೆ ಪ್ರಶ್ನೆ ಮಾಡಿತ್ತು. ಕಾಂಗ್ರೆಸ್‌ಗೆ ಈ ದೇಶದ […]

ಅಯೋಧ್ಯೆ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆ ಮತ್ತು ಮಹತ್ವ

Friday, January 19th, 2024
ಅಯೋಧ್ಯೆ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆ ಮತ್ತು ಮಹತ್ವ

ಅಯೋಧ್ಯೆ: ಅಯೋಧ್ಯೆ ಶ್ರೀ ರಾಮ ಮಂದಿರದ ಗರ್ಭಗೃಹದಲ್ಲಿ ಸೋಮವಾರ 12.20 ಕ್ಕೆ ಪ್ರತಿಷ್ಠೆ ಗೊಳ್ಳಲಿರುವ ರಾಮಲಲ್ಲಾ ನ ವಿಗ್ರಹವು 150 ಕೆಜಿಗಿಂತ ಹೆಚ್ಚು ತೂಕವಿದ್ದು, 51 ಇಂಚು ಎತ್ತರವಿದೆ ಇದನ್ನು ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದಾರೆ. ಭಗವಾನ್ ರಾಮ ಮತ್ತು ಅವರ ಸಹೋದರರ ಮೂಲ ವಿಗ್ರಹಗಳನ್ನು ಗರ್ಭಗುಡಿಯೊಳಗಿನ ಹೊಸ ವಿಗ್ರಹ ಅಥವಾ ಜನವರಿ 22 ರ ಸಮಾರಂಭದ ಮೊದಲು ‘ಗರ್ಭಗೃಹ’ದ ಮುಂದೆ ಸ್ಥಾಪಿಸಲಾಗುವುದು. 1949 ರಿಂದ ಪೂಜಿಸಲ್ಪಡುತ್ತಿರುವ ಮೂಲ ವಿಗ್ರಹಗಳನ್ನು ಪ್ರಸ್ತುತ ಆವರಣದೊಳಗೆ ನಿರ್ಮಿಸಲಾದ […]

ವಿದ್ಯಾ ಚೌಡೇಶ್ವರಿ ದೇವಿಗೆ 2 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ಅರ್ಪಿಸಿದ ಹೆಚ್​​ಡಿ ದೇವೇಗೌಡ

Wednesday, January 17th, 2024
HD-Devegowda

ತುಮಕೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​​ಡಿ ದೇವೇಗೌಡ ಅವರು ವಿದ್ಯಾ ಚೌಡೇಶ್ವರಿ ದೇವಿಗೆ ಸುಮಾರು 2 ಕೋಟಿ ರೂಪಾಯಿ ಮೌಲ್ಯದ ವಜ್ರ ಖಚಿತ ಕಿರೀಟ ಅರ್ಪಿಸಿದ್ದಾರೆ. ವಿದ್ಯಾ ಚೌಡೇಶ್ವರಿ ದೇವಿ ದೇವಸ್ಥಾನ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹಂಗರಹಳ್ಳಿ ಹಂಗರಹಳ್ಳಿಯಲ್ಲಿದ್ದು, ವಜ್ರ ಕೀರಿಟ ಅರ್ಪಿಸಿ ಬಳಿಕ ಹೋಮದಲ್ಲಿ ಭಾಗಿಯಾದರು. ಚ್​​ಡಿ ದೇವೇಗೌಡ ಅವರು ವಿದ್ಯಾ ಚೌಡೇಶ್ವರಿಯ ಉತ್ತರಾಯಣ ದಲ್ಲಿ ನಡೆಯುವ ವರ್ಧಂತಿ ಉತ್ಸವ ಮತ್ತು ಅಮ್ಮನವರ ಚಿಕ್ಕಮ್ಮ ಜಾತ್ರೆಯು ಯಲ್ಲಿ ಭಾಗವಹಿಸಿ, ಉಪವಾಸ ವ್ರತ […]

ಪುತ್ತೂರಿನಲ್ಲಿ ಅಯೋಧ್ಯೆಯ ಮಂತ್ರಾಕ್ಷತೆ ಹಂಚುತ್ತಿದ್ದ ಯುವಕನ ಮೇಲೆ ತಂಡದಿಂದ ಹಲ್ಲೆ

Tuesday, January 16th, 2024
santhosh

ಮಂಗಳೂರು: ಅಯೋಧ್ಯೆಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆಗೆ ಪೂರ್ವಭಾವಿಯಾಗಿ ಮಂತ್ರಾಕ್ಷತೆ ವಿತರಣೆಗೆ ಸ್ವಯಂಸೇವಕರಾಗಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರೊಬ್ಬರ ಮೇಲೆ ಪುತ್ತೂರಿನಲ್ಲಿ ಹಲ್ಲೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಎಂಬಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದವರನ್ನು ಸಂತೋಷ್‌ ಎಂದು ಗುರುತಿಸಲಾಗಿದೆ. ಸಂತೋಷ್‌ ಅವರು ಮುಂಡೂರು ಗ್ರಾಮದಲ್ಲಿ ಮಂತ್ರಾಕ್ಷತೆ ಹಂಚುವ ಜವಾಬ್ದಾರಿ ಹೊತ್ತಿದ್ದರು. ಹೀಗೆ ಮಂತ್ರಾಕ್ಷತೆ ಹಂಚಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ನಿವಾಸಿ ಧನಂಜಯ್ ಮತ್ತು ತಂಡ ಕೃತ್ಯ ಎಸಗಿದೆ ಎಂದು ಆರೋಪಿಸಲಾಗಿದೆ. ಹಲ್ಲೆ ನಡೆಸಿದ […]

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಳ್ಳಿಯ ಪೂಜಾ ಸಾಮಗ್ರಿಗಳನ್ನು ಸಮರ್ಪಣೆ

Wednesday, January 10th, 2024
veerendra-heggade

ಧರ್ಮಸ್ಥಳ : ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಳ್ಳಿಯ ಪೂಜಾ ಸಾಮಗ್ರಿಗಳನ್ನು ಸಮರ್ಪಿಸಿದ್ದೇವೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಶ್ರೀ ರಾಮ ಮಂದಿರ ನಿರ್ಮಾಣವಾಗುವ ಮೂಲಕ ಭಾರತೀಯರ ಅನೇಕ ವರ್ಷದ ಕನಸು, ನಿರೀಕ್ಷೆಗಳು ಸಾಕಾರಗೊಂಡಿದೆ ಎಂದು ಅವರು ಹೇಳಿದರು. ಶ್ರೀ ರಾಮ ಮಂದಿರ ನಿರ್ಮಾಣದ ಮಹತ್ ಕಾರ್ಯದ ನೇತೃತ್ವ ವಹಿಸಿದ ಪ್ರಧಾನಿ ಮೋದಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡ ಎಲ್ಲರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

ತುಲಾಭಾರದ ವೇಳೆ ಅವಘಡ, ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Friday, November 3rd, 2023
lakshmi-hebbalkar

ಉಡುಪಿ : ತುಲಾಭಾರದ ವೇಳೆ ಆದ ಅವಘಡದ ಹಿನ್ನೆಲೆಯಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳ ಆರೋಗ್ಯದ ಕುರಿತಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ರೀಗಳ ಆರೋಗ್ಯ ವಿಚಾರಿಸಿದರು. ಶ್ರೀಗಳ ಆಪ್ತ ಸಹಾಯಕರಿಗೆ ಕರೆ ಮಾಡಿ ಸ್ವಾಮೀಜಿಗಳ ಆರೋಗ್ಯ ಕುರಿತಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ಪಡೆದರು. ಶ್ರೀಗಳಿಗೆ ಸಣ್ಣ ಗಾಯವಾಗಿದ್ದನ್ನು, ಗಾಭರಿಪಡುವಂತದ್ದು ಏನಿಲ್ಲ . ಈಗ ಆರೋಗ್ಯವಾಗಿದ್ದು, ನವದೆಹಲಿಯಿಂದ ಅಯೋಧ್ಯೆಯತ್ತ ಶ್ರೀಗಳು ಪ್ರಯಾಣಿಸುತ್ತಿದ್ದಾರೆ […]

ಜನವರಿ 15ರಿಂದ ದೇಶಾದ್ಯಂತ ಅಯೋಧ್ಯೆ ಶ್ರೀ ರಾಮಮಂದಿರಕ್ಕೆ ನಿಧಿ ಸಮರ್ಪಣಾ ಅಭಿಯಾನ ಆರಂಭ

Thursday, January 14th, 2021
vhp

ಮಂಗಳೂರು: ಅಯೋಧ್ಯೆಯಲ್ಲಿ ಅಂದಾಜು 1,100 ಕೋಟಿ ಮೊತ್ತದಲ್ಲಿ ನಿರ್ಮಾಣ ಆಗಲಿರುವ  ಶ್ರೀ ರಾಮಮಂದಿರಕ್ಕೆ ನಿಧಿ ಸಮರ್ಪಣಾ ಅಭಿಯಾನ ದೇಶಾದ್ಯಂತ ಜ.15ರಿಂದ ಆರಂಭಗೊಳ್ಳಲಿದೆ. ಅದರಂತೆ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಕಾಸರಗೋಡು ಜಿಲ್ಲೆಗಳ ಎಲ್ಲಾ ಮನೆಗಳನ್ನು ಸಂಪರ್ಕ ಮಾಡಬೇಕೆಂದು ಪೂರ್ವ ಸಿದ್ಧತೆ ಮಾಡಲಾಗಿದೆ ಎಂದು ವಿಹಿಂಪ ಮಂಗಳೂರು ವಿಭಾಗದ ಕಾರ್ಯದರ್ಶಿ ಶರಣ್ ಪಂಪ್ ವೆಲ್ ತಿಳಿಸಿದರು. ಅಯೋಧ್ಯೆ ಶ್ರೀ ರಾಮಮಂದಿರಕ್ಕೆ ಒಟ್ಟು 450-500 ಕೋಟಿ ರೂ. ಆಗಲಿದ್ದು, ಉಳಿದಂತೆ ವಸತಿ ಗೃಹ, ಅನ್ನಚತ್ರ, ಗ್ರಂಥಾಲಯ ಇತ್ಯಾದಿ ಒಳಗೊಂಡಂತೆ ಸುಮಾರು 600 ಕೋಟಿ […]

ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣ, ಎಲ್ಲಾ 32 ಮಂದಿ ಆರೋಪಿಗಳಿಗಳು ನಿರ್ದೋಷಿ

Wednesday, September 30th, 2020
Ayodya

ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕೇಸಿನಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ ಸೇರಿದಂತೆ ಎಲ್ಲಾ 32 ಮಂದಿ ಆರೋಪಿಗಳಿಗೆ ಲಖನೌ ವಿಶೇಷ ಸಿಬಿಐ ನ್ಯಾಯಾಲಯ ನಿರ್ದೋಷಿ ಎಂದು ಘೋಷಿಸಿದೆ. ಈ ಮೂಲಕ 28 ವರ್ಷಗಳ ದೀರ್ಘ ಕಾಲದ ಕಾನೂನು ಹೋರಾಟಕ್ಕೆ ಇಂದು ತಾತ್ವಿಕ ಅಂತ್ಯ ಸಿಕ್ಕಿದೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಒಂದು ಆಕಸ್ಮಿಕ ಘಟನೆ, ಮಸೀದಿ ಧ್ವಂಸ ಒಂದು ಪೂರ್ವ ನಿಯೋಜಿತ ಕೃತ್ಯವಲ್ಲ, ಉದ್ದೇಶಪೂರ್ವಕವಾಗಿ […]

ಶ್ರೀರಾಮ ಮಂದಿರ ಭೂಮಿ ಪೂಜೆ ಹಿನ್ನೆಲೆ : ಅಯೋಧ್ಯೆಯಲ್ಲಿ ಕರಸೇವಕರಾಗಿ ಪಾಲ್ಗೊಂಡವರಿಗೆ ಗೌರವ ಸನ್ಮಾನ

Thursday, August 6th, 2020
Karasevak

ಮಂಗಳೂರು : ಅಯೋಧ್ಯೆಯಲ್ಲಿ ಇಂದು ಶ್ರೀರಾಮ ಮಂದಿರ ಭೂಮಿ ಪೂಜೆ ಹಿನ್ನೆಲೆಯಲ್ಲಿ ವಿಶ್ವಹಿಂದು ಪರಿಷತ್, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ವತಿಯಿಂದ ಕರಸೇವಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಬುಧವಾರ ಬೆಳಗ್ಗೆ  ಮಂಗಳೂರಿನ ಕದ್ರಿ ಸಮೀಪವಿರುವ ವಿಶ್ವಹಿಂದು ಪರಿಷತ್ ನ ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 1991 ಮತ್ತು 1992ರಲ್ಲಿ ಕರಸೇವಕರಾಗಿ ಅಯೋಧ್ಯೆಗೆ ತೆರಳಿದ್ದ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಯೋಗಿಶ್ ಭಟ್, ವಿಹಿಂಪ ರಾಜ್ಯ ಮುಖಂಡ ಎಂ.ಬಿ.ಪುರಾಣಿಕ್, ವಿವಿಧ ಹಿಂದೂ ಸಂಘಟನೆಗಳ ಪ್ರಮುಖರಾದ ಗೋಪಾಲ್ ಕುತ್ತಾರ್, […]

ಜೈ ಶ್ರೀರಾಮ್‌ ಎಂದು ಬರೆದು ಅಯೋಧ್ಯೆಯಲ್ಲಿ ಶಿಲಾನ್ಯಾಸ ಆಗುತ್ತಿದ್ದಂತೆ ಸಂಭ್ರಮಿಸಿದ ಮುಸ್ಲಿಂ ಕಲಾವಿದ

Thursday, August 6th, 2020
munaf

ಗದಗ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನಡೆಯುತ್ತಿದ್ದಂತೆ ನಗರದ ಅಮರೇಶ್ವರ ಕಾಲೋನಿಯ ಮುನಾಫ್‌ ಹರ್ಲಾಪುರ ಎಂಬುವರು ಪುಟ್ಟ ಹಾಳೆಯಲ್ಲಿ ಮಂಡಲದ ಮಧ್ಯೆ ಶ್ರೀ ರಾಮನ ಪಾದಗಳ ಚಿತ್ರ ಬಿಡಿಸಿ, ಸುತ್ತಲು ಜೈ ಶ್ರೀರಾಮ್‌ ಎಂದು ಬರೆದಿದ್ದಾರೆ. ಜೊತೆಗೆ ರಾಮ ಭಕ್ತ ಹನುಮನನ್ನು ಬಿಡಿಸುವ ಮೂಲ ರಾಮಲಲ್ಲಾ ಜಪ ಮಾಡಿ, ಸಂಭ್ರಮಿಸಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರುತ್ತಿರುವುದರಿಂದ ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಹೀಗಾಗಿ ಹಿಂದೂಗಳು ವಿವಿಧ ದೇವಸ್ಥಾಗಳಲ್ಲಿ ಹೋಮ, ಹವನ ಹಾಗೂ ಜಪತಪಗಳಲ್ಲಿ ಮುಳುಗಿದ್ದರೆ,  ಇವರು  […]