ದೇವರಗುಂಡಿ ಫಾಲ್ಸ್​​​ನಲ್ಲಿ ಅರೆಬೆತ್ತಲೆ ಫೋಟೊ ಶೂಟ್, ಸ್ಥಳೀಯರ ಆಕ್ರೋಶ

Thursday, October 29th, 2020
Devaragundi

ಸುಳ್ಯ: ಸಾಕ್ಷಾತ್ ಶಿವನೇ ಸ್ನಾನಕ್ಕೆ ಬರುತ್ತಿದ್ದ ಎನ್ನುವ ನಂಬಿಕೆ ಇರುವ  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದಲ್ಲಿರುವ ದೇವರಗುಂಡಿ ಫಾಲ್ಸ್ನಲ್ಲಿ ಬೆಂಗಳೂರು ಮೂಲದ ಇಬ್ಬರು ಮಾಡೆಲ್ಗಳು ಅರೆಬೆತ್ತಲೆಯಾಗಿ ಫೋಟೊ ಶೂಟ್ ನಡೆಸಿರುವ ಆರೋಪ ಕೇಳಿಬಂದಿದೆ. ಈ ಫೋಟೊಗಳು  ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸುಳ್ಯದ ತೋಡಿಕಾನ ಸಮೀಪ ಇರುವ ಪ್ರಸಿದ್ಧ ಮಲ್ಲಿಕಾರ್ಜುನ ದೇವಸ್ಥಾನ ಬಳಿ ಇರುವ ಈ ದೇವರಗುಂಡಿ ಫಾಲ್ಸ್ನಲ್ಲಿ ಮಾಡೆಲ್ಗಳು ಫೋಟೊ ಶೂಟ್ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ. […]

ದುರ್ಗಾಂಬಿಕಾ ಜಾತ್ರೆಯಲ್ಲಿ ಅರೆಬೆತ್ತಲೆಯ ಬೇವಿನ ಉಡುಗೆ ಸೇವೆ, ಕೋಣನ ವಧೆ

Thursday, March 13th, 2014
Dhavangere Durgambika Temple

ದಾವಣಗೆರೆ: ಜಿಲ್ಲಾಡಳಿತದ ಕಟ್ಟು­ನಿಟ್ಟಿನ ಕ್ರಮದ ನಡುವೆಯೂ ನಗರದ ದುರ್ಗಾಂಬಿಕಾ ಜಾತ್ರೆಯಲ್ಲಿ ಅರೆಬೆತ್ತಲೆಯ ಬೇವಿನ ಉಡುಗೆ ಸೇವೆ ಮಂಗಳವಾರ ಮಧ್ಯರಾತ್ರಿಯಿಂದ ಬುಧ­ವಾರ ದಿನಪೂರ್ತಿ ನಿರಾತಂಕವಾಗಿ ನಡೆಯಿತು. ಜಾತ್ರೆ ಅಂಗವಾಗಿ ಜಿಲ್ಲಾಡಳಿತ ಬಿಗಿ ಕ್ರಮ ಕೈಗೊಂಡಿತ್ತು. ಸ್ಥಳದಲ್ಲಿ ರಾತ್ರಿ­ಯಿಡೀ ಪೊಲೀಸರು ಕೋಣನ ವಧೆ ಮಾಡದಂತೆ ಎಚ್ಚರ ವಹಿಸಿದ್ದರು. ಅದರ ನಡುವೆಯೂ ದೇಗುಲದ ಹೊರ ವಲಯದಲ್ಲಿ ಮಧ್ಯರಾತ್ರಿ ಕೆಲವರು ಕೋಣನ ವಧೆ ಮಾಡಿ ಅಂಬೇಡ್ಕರ್‌ ವೃತ್ತದ ಮನೆಯೊಂದರಲ್ಲಿ ತಲೆ ಹಾಗೂ ಕಾಲುಗಳನ್ನು ಇಟ್ಟಿದ್ದರು. ಅದನ್ನು ದೇಗುಲದ ಸುತ್ತ ಪ್ರದಕ್ಷಿಣೆಗೆ ತರುವ ಮಾಹಿತಿ […]