ನಾಲ್ಕನೇ ದಿನವೂ ಪತ್ತೆಯಾಗದ ಓರ್ವ ಮೀನುಗಾರನ ಮೃತದೇಹ

Friday, December 4th, 2020
Boat Tragedy

ಮಂಗಳೂರು: ಪರ್ಸಿನ್ ಬೋಟ್ ದುರಂತದಲ್ಲಿ ಸಾವಿಗೀಡಾದ ಆರು ಜನರ ಪೈಕಿ ಇನ್ನೋರ್ವನ  ಓರ್ವನ ಮೃತದೇಹ ಪತ್ತೆಗೆ ನಾಲ್ಕನೇ ದಿನ ಕೂಡಾ ಹುಡುಕಾಟ ಮುಂದುವರೆದಿದೆ. ಶ್ರೀರಕ್ಷಾ ಎಂಬ ಬೋಟ್ ಮೀನುಗಳನ್ನು ತುಂಬಿಸಿಕೊಂಡು ವಾಪಸ್ ಬರುವ ವೇಳೆ ಇತ್ತೀಚೆಗೆ ಅಳಿವೆ ಬಾಗಿಲಿನಲ್ಲಿ ದುರಂತಕ್ಕೀಡಾಗಿತ್ತು. ಪರಿಣಾಮ, ಆರು ಮಂದಿ ಮೀನುಗಾರರು ಮೃತಪಟ್ಟಿದ್ದರು. ಈ ಪೈಕಿ ಐವರ ಮೃತದೇಹ ಪತ್ತೆಯಾಗಿತ್ತು. ಅನ್ಸಾರ್ ಮೃತದೇಹ ಸಿಕ್ಕಿತಾದರೂ ಸಮುದ್ರದಾಳದಿಂದ ಮೇಲಕ್ಕೆ ತರುವಾಗ ಮುಳುಗು ತಜ್ಞರ ಕೈಜಾರಿ ಮತ್ತೆ ಸಮುದ್ರದಾಳ ಸೇರಿತ್ತು. ಇದಾಗಿ ಎರಡು ದಿನವಾದರೂ ಮೃತದೇಹ ಸಿಕ್ಕಿರಲಿಲ್ಲ. […]

ಮೀನುಗಾರಿಕಾ ದೋಣಿ ಮುಳುಗಿ 6 ಮಂದಿ ಮೀನುಗಾರರು ನಾಪತ್ತೆ

Friday, September 16th, 2011
ಮೀನುಗಾರಿಕಾ ದೋಣಿ ಮುಳುಗಿ 6 ಮಂದಿ ಮೀನುಗಾರರು ನಾಪತ್ತೆ

ಮಂಗಳೂರು: ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ 6 ಮಂದಿ ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಅಳಿವೆ ಬಾಗಿಲಿನ ಸಮೀಪ ಅರಬಿ ಸಮುದ್ರದಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ. ‘ಓಶಿಯನ್‌ ಫಿಶರೀಸ್‌- 2’ ಎಂಬ ಮೀನುಗಾರಿಕಾ ದೋಣಿಯಲ್ಲಿ 8 ದಿನಗಳ ಹಿಂದೆ 7 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಮೀನು ಹಿಡಿದು ಹಿಂದಿರುಗುತ್ತಿದ್ದಾಗ ಮಂಗಳೂರಿನ ಅಳಿವೆ ಬಾಗಿಲಿನ ಸಮೀಪ ದುರ್ಘ‌ಟನೆ ಸಂಭವಿಸಿದೆ. ದೋಣಿಯಲ್ಲಿದ್ದ ೭ಜನರ ಪೈಕಿ ದೋಣಿಯ ಚಾಲಕ ಬಳ್ಳಾರಿ ಹೊಸಪೇಟೆಯ ಕಾಂಬ್ಲಿಪುರ ಕಂಟರ್‌ಬಿನ್ನೆಯ ಶ್ರೀಕಾಂತ್‌, ಕೊಪ್ಪಳದ ನಾರಾಯಣ, ಮಂಗಳೂರು ಪಂಜಿಮೊಗರಿನ […]