ಉಳ್ಳಾಲದಲ್ಲಿ ಜೆಡಿಎಸ್ ಅಶ್ರಫ್ ಪರ ಭರ್ಜರಿ ಪ್ರಚಾರ

Thursday, May 3rd, 2018
ashraf

ಮಂಗಳೂರು: ಆಹಾರ ಸಚಿವ ಯ.ಟಿ. ಖಾದರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಂಗಳೂರು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಚುರುಕು ಪಡೆದುಕೊಂಡಿದೆ. ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಖಾದರ್ ನಾಲ್ಕನೇ ಬಾರಿ ಆಯ್ಕೆಯಾಗಲು ಮತದಾರರನ್ನು ಎದುರಿಸುತ್ತಿದ್ದಾರೆ. ಬಿಜೆಪಿಯಿಂದ ಯುವ ನಾಯಕ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬೋಳಿಯಾರ್ ಸಂತೋಷ್ ರೈ ಸ್ಪರ್ಧೆ ನಡೆಸುತ್ತಿದ್ದಾರೆ. ಕಳೆದ ಬಾರಿ 29 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಖಾದರ್ ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳಿಂದ ಕಠಿಣ […]

ಮಂಗಳೂರು ಜೆಡಿಎಸ್ ಅಭ್ಯರ್ಥಿ ಅಶ್ರಫ್ ನಾಮಪತ್ರ ಸಲ್ಲಿಕೆ

Tuesday, April 24th, 2018
ashraf

ಮಂಗಳೂರು: ಮಂಗಳೂರು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮೇಯರ್ ಕೆ.ಅಶ್ರಫ್ ಮಂಗಳವಾರ ನಾಮಪತ್ರ ಸಲ್ಲಿಸಿದರು. ಅದಕ್ಕೂ ಮುನ್ನ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಪಕ್ಷದ ಚುನಾವಣಾ ಪ್ರಚಾರ ಸಭೆ ನಡೆಯಿತು. ಅಲ್ಲಿಂದ ರ್ಯಾಲಿ ಮೂಲಕ ನಗರಕ್ಕೆ ಆಗಮಿಸಿ ಮಿನಿ ವಿಧಾನಸೌಧದಲ್ಲಿರುವ ಚುನಾವಣಾಧಿಕಾರಿಯ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಾಮಪತ್ರದ ಠೇವಣಿಯನ್ನು ಜೆಡಿಎಸ್ ಅಭ್ಯರ್ಥಿ ಅಶ್ರಫ್‌ಗೆ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿ ಕೊಡಲಿದ್ದಾರೆ ಎಂದು ಈ ಹಿಂದೆ ಸಚಿವ ಯು.ಟಿ.ಖಾದರ್ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ಜೆಡಿಎಸ್ ಕಾರ್ಯಕರ್ತರು ಹಣ ಸಂಗ್ರಹಿಸಿ […]

ಯುಟಿ ಖಾದರ್ ವಿರುದ್ಧ ಜೆಡಿಎಸ್ ನಿಂದ ಮುಸ್ಲಿಂ ಮುಖಂಡ ಅಶ್ರಫ್ ಕಣಕ್ಕೆ?

Friday, February 16th, 2018
ashraf

ಮಂಗಳೂರು: ಕರಾವಳಿಯಲ್ಲಿ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ ಮುಖಂಡ, ಮಾಜಿ ಮೇಯರ್ ಹಾಗೂ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಅಶ್ರಫ್ ಜೆಡಿಎಸ್ ಸೇರುತ್ತಿರುವುದು ಖಚಿತವಾಗಿದೆ. ಈ ನಿಟ್ಟಿನಲ್ಲಿ ಆಶ್ರಫ್ ಈಗಾಗಲೇ ಕಾಂಗ್ರೆಸಿಗೆ ಗುಡ್ ಬೈ ಹೇಳಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಅಶ್ರಫ್ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರಲಿದ್ದಾರೆ. ಈ ನಡುವೆ ಇನ್ನೊಂದು ಮಾಹಿತಿಯ ಪ್ರಕಾರ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಯು.ಟಿ.ಖಾದರ್ ಅವರ ಎದುರು ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ […]

ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಸ್ಥಾನಕ್ಕೆ ಅಶ್ರಫ್‌ ಗುಡ್‌ ಬೈ

Friday, February 9th, 2018
ashraf

ಮಂಗಳೂರು: ಮಾಜಿ ಮೇಯರ್ ಕೆ. ಅಶ್ರಫ್ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಅಶ್ರಫ್‌ ಕಾಂಗ್ರೆಸ್‌ನ ಸಕ್ರಿಯ ಮುಖಂಡರಾಗಿದ್ದವರು. ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರ ಬೆಂಬಗಲಿರಾಗಿದ್ದ ಅಶ್ರಫ್‌, ಬಳಿಕ ಪೂಜಾರಿ ವಿರುದ್ಧವೇ ತಮ್ಮ ಅಸಮಾಧಾನ ಹೊರಹಾಕಿದ್ದರು. ನಂತರ ಕಾಂಗ್ರೆಸ್‌ ಪಕ್ಷದ ಕಾರ್ಯ ಚಟುವಟಿಕೆಗಳಿಂದಲೇ ದೂರ ಉಳಿದಿದ್ದರು. ಇತ್ತೀಚೆಗೆ ಮತ್ತೆ ಪಕ್ಷದಲ್ಲಿ ಸಕ್ರಿಯರಾಗಿದ್ದ ಅಶ್ರಫ್ ಅವರನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರನ್ನಾಗಿ […]

ಬೆಂಜನಪದವಿನಲ್ಲಿ ಎಸ್‌ಡಿಪಿಐ ವಲಯಾಧ್ಯಕ್ಷನನ್ನು ಅಟ್ಟಾಡಿಸಿ ಹತ್ಯೆ

Wednesday, June 21st, 2017
sdpi

ಬಂಟ್ವಾಳ : ಎಸ್‌ಡಿಪಿಐ ಅಮ್ಮುಂಜೆ ವಲಯ ಅಧ್ಯಕ್ಷರನ್ನು ಮಾರಕಾಯುಧಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಜನಪದವಿನ ಕರಾವಳಿ ಕಾಲೇಜು ಬಳಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಮಲ್ಲೂರು ಅಮ್ಮುಂಜೆಯ ಕಲಾಯಿ ನಿವಾಸಿ ಅಶ್ರಫ್(35) ಎಂದು ಗುರುತಿಸಲಾಗಿದೆ.  ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಅಶ್ರಫ್ ಕಲಾಯಿ ಇಂದು ಬೆಳಗ್ಗೆ ಕಲಾಯಿಯಲ್ಲಿ ಧ್ವಜಾರೋಹಣ ನೆರೆವೇರಿಸಿ, ಬಳಿಕ ಹೊಂಡಮಯವಾಗಿರುವ ಕಲಾಯಿ ರಸ್ತೆಯ ದುರಸ್ತಿಗೊಳಿಸಲು ಸಾರ್ವಜನಿಕರೊಂದಿಗೆ ಶ್ರಮದಾನ ಮಾಡಿದ್ದರು. ಆ ಬಳಿಕ ಅವರ ಬಾಡಿಗೆಗೆಂದು ಬೆಂಜನಪದವು ಕರಾವಳಿ ಸೈಟ್‌ಗೆ ತೆರಳಿದ್ದರೆಂದು ತಿಳಿದುಬಂದಿದೆ. ಕಲಾಯಿಯಲ್ಲಿ ರಿಕ್ಷಾ […]