ಸಮುದ್ರಪಾಲಾಗುತ್ತಿದ್ದ ಆಂಧ್ರಪ್ರದೇಶ ಮೂಲದ ಮೂವರು ಮಹಿಳೆಯರನ್ನು ರಕ್ಷಿಸಿದ ಸ್ಥಳೀಯರು, ಓರ್ವ ಮಹಿಳೆ ಮೃತ್ಯು

Tuesday, June 11th, 2024
ಸಮುದ್ರಪಾಲಾಗುತ್ತಿದ್ದ ಆಂಧ್ರಪ್ರದೇಶ ಮೂಲದ ಮೂವರು ಮಹಿಳೆಯರನ್ನು ರಕ್ಷಿಸಿದ ಸ್ಥಳೀಯರು, ಓರ್ವ ಮಹಿಳೆ ಮೃತ್ಯು

ಉಳ್ಳಾಲ : ಆಂಧ್ರಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ‌. ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್ ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ (57) ಸಾವನ್ನಪ್ಪಿದವರು. ಉಳ್ಳಾಲ ಬೀಚ್ ಸಮುದ್ರದಲ್ಲಿ ವಿಹರಿಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿ ನಾಲ್ವರು ಮಹಿಳೆಯರನ್ನು ಎಳೆದೊಯ್ದಿತ್ತು. ಸ್ಥಳೀಯರು ತಕ್ಷಣ ನಾಲ್ವರನ್ನು ಸಮುದ್ರದಿಂದ ಹೊರಗೆಳೆದು ರಕ್ಷಿಸಿದ್ದಾರೆ. ಹೈದರಾಬಾದ್ ನಿಂದ 5 ಮಂದಿ ಮಹಿಳೆಯರ ತಂಡ ಜೂ.6 ಕ್ಕೆ ಮೈಸೂರಿಗೆ ವಿಮಾನದ ಮೂಲಕ ಬಂದಿಳಿದಿದ್ದರು. […]

ಚಾಲಾಕಿ ಅಂತರರಾಜ್ಯ ಕಳ್ಳ ಬೆಳ್ತಂಗಡಿ ಪೊಲೀಸರ ಬಲೆಗೆ

Friday, September 29th, 2023
Umesh-Balegara

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ ಉಮೇಶ್​ ಬಳೆಗಾರ ಎಂದು ಗುರುತಿಸಲಾಗಿದೆ. ಕಳೆದ ಆಗಸ್ಟ್ 12ರಂದು ಉಜಿರೆ ಗ್ರಾಮದ ಕಲ್ಲೆ ನಿವಾಸಿ ಫೆಲಿಕ್ಸ್ ಎಂಬವರ ಮನೆಯಲ್ಲಿ ಕಳ್ಳತನವಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳಗೆ ನುಗ್ಗಿದ ಆರೋಪಿ 15 ಪವನ್ ಚಿನ್ನಾಭರಣ ಮತ್ತು 20 ಸಾವಿರ ನಗದು ಎಗರಿಸಿ ಪರಾರಿಯಾಗಿದ್ದನು. ಈ ಬಗ್ಗೆ ಬೆಳ್ತಂಗಡಿ […]

ಆಂಧ್ರಪ್ರದೇಶ ಮೂಲದ ಏಳು ಮಂದಿ ಭಾರತೀಯರನ್ನು ಬಂಧಿಸಿದ ಕುವೈತ್‌ ಪೊಲೀಸರು

Tuesday, November 26th, 2019
kuwait-police

ಕುವೈತ್‌:  ಆಂಧ್ರಪ್ರದೇಶ ಮೂಲದ ಏಳು ಮಂದಿ ಭಾರತೀಯರನ್ನು ಭಾರತೀಯ ರಾಯಭಾರ ಕಚೇರಿಯ ದಾಖಲೆಗಳನ್ನು ಮತ್ತು ಪ್ರಮಾಣ ಪತ್ರಗಳನ್ನು ನಕಲು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕುವೈತ್‌ನಲ್ಲಿ  ಬಂಧಿಸಲಾಗಿದೆ. ದಾಖಲೆಗಳನ್ನು ನಕಲು ಮಾಡುವ ಜಾಲದ ಬಗ್ಗೆ ಸುಳಿವು ಸಿಕ್ಕಿದ ಹಿನ್ನೆಲೆಯಲ್ಲಿ ಪೊಲೀಸರೇ ವ್ಯವಹಾರ ಕುದುರಿಸುವವರಂತೆ ನಟಿಸಿ ಅವರ ಸೇವೆಯನ್ನು ಬಳಸಿಕೊಳ್ಳುವಂತೆ ನಂಬಿಸಿ ಅವರನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ವಾಟ್ಸ್‌ಆ್ಯಪ್‌ ಮೂಲಕವೇ ಈ ತಂಡ ಡೀಲ್‌ ಕುದುರಿಸುತ್ತಿತ್ತು. ಡ್ರೈವಿಂಗ್‌ ಲೈಸನ್ಸ್‌ ಅನ್ನು ನಕಲು ಮಾಡಿಕೊಡುವುದರಲ್ಲಿ ಈ ತಂಡ ಸಿದ್ಧಹಸ್ತವಾಗಿದೆ ಎಂದು ತನಿಖೆಯಿಂದ ತಿಳಿದು […]

ಆಂಧ್ರಪ್ರದೇಶದ ಮಾಜಿ ಸ್ಪೀಕರ್ ಕೋಡೆಲಾ ಶಿವ ಪ್ರಸಾದ್ ಆತ್ಮಹತ್ಯೆ

Monday, September 16th, 2019
shiva-prasad

ಆಂಧ್ರಪ್ರದೇಶ : ಆಂಧ್ರಪ್ರದೇಶ ವಿಧಾನಸಭೆಯ ಮಾಜಿ ಸ್ಪೀಕರ್, ಟಿಡಿಪಿ ಮುಖಂಡ ಕೋಡೆಲಾ ಶಿವ ಪ್ರಸಾದ್(72) ಹೈದರಾಬಾದ್ ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಭ್ರಷ್ಟಾಚಾರ ಮತ್ತು ಆರ್ಥಿಕ ಅವ್ಯವಹಾರದ ಆರೋಪದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ಕುಟುಂಬದ ಮೂಲಗಳು ದೂರಿವೆ. ಸೋಮವಾರ ಬೆಳಗ್ಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದು, ಕೂಡಲೇ ಅವರನ್ನು ಬಸವ ತಾರಕರಾಮಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ. ಆಂಧ್ರದಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ ಆರ್ ಪಿ ಸರಕಾರ ಅಧಿಕಾರಕ್ಕೆ […]

ಐಟಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದ ಆರೋಪಿ ಬಂಧನ

Saturday, October 13th, 2018
income-tax

ಬೆಂಗಳೂರು: ಫೇಸ್ಬುಕ್‌ನಲ್ಲಿ ಐಟಿ ಅಧಿಕಾರಿ ಎಂದು ಪರಿಚಯಿಸಿಕೊಂಡು ಐಟಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯಿಂದ 5.8 ಲಕ್ಷ ರೂ. ಪಡೆದು ವಂಚಿಸಿದ್ದ ಆರೋಪಿಯನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ನಿವಾಸಿ ನವೀನ್‌ಕುಮಾರ್ ಬಂಧಿತ ಆರೋಪಿ. ಪಿಯುಸಿ ವ್ಯಾಸಂಗ ಮಾಡಿದ್ದ ನವೀನ್, ಆರ್.ಟಿ.ನಗರದ ಹೆಲ್ತ್ ಕ್ಲಬ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಫೇಸ್‌ಬುಕ್‌ನಲ್ಲಿ ಪರಿಚಯ ಮಾಡಿಕೊಂಡಿದ್ದ.‌ ಆಕೆಯ ಸ್ನೇಹ ಸಂಪಾದಿಸಿಕೊಂಡಿದ್ದ. ತಾನು ಐಟಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಿಮಗೂ ಐಟಿ ಇಲಾಖೆಯಲ್ಲಿ ಅಧಿಕಾರಿ ಕೆಲಸ […]

ಚಿತ್ರಮಂದಿರ ಬಂದ್‌‌ಗೆ ಮಂಗಳೂರಲ್ಲಿ ಉತ್ತಮ‌ ಸ್ಪಂದನೆ

Saturday, March 10th, 2018
theater

ಮಂಗಳೂರು: ಡಿಜಿಟಲ್ ಸರ್ವಿಸರ್ಸ್ ಪ್ರೊವೈಡರ್ಸ್ ವಿಧಿಸುತ್ತಿರುವ ದರ ಕಡಿತಗೊಳಿಸಲು ಆಗ್ರಹಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ‌ ಇಂದು ಕರೆ ನೀಡಿದರುವ ರಾಜ್ಯದ‌ ಚಿತ್ರಮಂದಿರಗಳ ಬಂದ್‌‌ಗೆ ನಗರದಲ್ಲಿ ಉತ್ತಮ‌ ಸ್ಪಂದನೆ ಸಿಕ್ಕಿದೆ. ಪ್ರೇಕ್ಷಕರು ಮುಚ್ಚಿದ ಬಾಗಿಲುಗಳ ಚಿತ್ರಮಂದಿರಗಳನ್ನು ನೋಡಿ ಹಿಂದಕ್ಕೆ ಮರಳಿದ್ದಾರೆ. ಈಗಾಗಲೇ ವಿಧಿಸಿರುವ ದರಗಳಲ್ಲಿ ಶೇ. 25ರಷ್ಟು ಕಡಿತ ಮಾಡಲು ಯುಎಫ್ಒ‌ ಮತ್ತು ಕ್ಯೂಬ್‌‌‌‌‌‌ಗೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಪುದುಚ್ಚೇರಿ ಚಲನಚಿತ್ರ ವಾಣಿಜ್ಯ ಮಂಡಳಿಗಳು ಮನವಿ ಸಲ್ಲಿಸಿದ್ದವು. ಎರಡೆರಡು ಬಾರಿ ಮಾತುಕತೆ ನಡೆಸಿದರೂ ಯಾವುದೇ […]