ಪ್ರಾದೇಶಿಕ ಆಯುಕ್ತರ ಕಚೇರಿ ರದ್ದುಗೊಳಿಸಲು ಸರ್ಕಾರ ಚಿಂತನೆ: ಸಚಿವ ಆರ್ ಅಶೋಕ
Thursday, July 8th, 2021ಬೆಂಗಳೂರು : “ನಾಲ್ಕು ಪ್ರಾದೇಶಿಕ ಆಯುಕ್ತರ ಹುದ್ದೆಗಳನ್ನು ರದ್ದುಗೊಳಿಸಿ, ಬದಲಿಗೆ ಬೆಂಗಳೂರಿನಲ್ಲಿ ಪ್ರಾದೇಶಿಕ ಆಯುಕ್ತರನ್ನು ಸ್ಥಾಪಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ”. ಎಂದು ಕಂದಾಯ ಸಚಿವ ಆರ್ ಅಶೋಕ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಕಂದಾಯ ಸಚಿವರು, “ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಎಲ್ಲಾ ನಾಲ್ಕು ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದುಪಡಿಸಬಹುದು ಮತ್ತು ಬದಲಿಗೆ ರಾಜ್ಯ ಮಟ್ಟದಲ್ಲಿ ಕಂದಾಯ ಆಯುಕ್ತರನ್ನು ಸ್ಥಾಪಿಸಬಹುದು ಎಂದು ಶಿಫಾರಸು ಮಾಡಿದೆ. ಪ್ರಾದೇಶಿಕ ಆಯುಕ್ತರ ಕಚೇರಿಗಳು ಬಿಳಿ ಆನೆಗಳಾಗಿ […]