ವಿದೇಶದಲ್ಲಿ ಕೊಯಿಲ ಗ್ರಾಮ ದ ಯುವಕ ಆತ್ಮಹತ್ಯೆ
Tuesday, May 30th, 2023
ಮಂಗಳೂರು : ಕಡಬ ತಾಲೂಕಿನ ಕೊಯಿಲ ಗ್ರಾಮ ದ ಯುವಕನೋರ್ವ ಭಾನುವಾರ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ ಸಂದೇಶ್ (32) ಎಂದು ಗುರುತಿಸಲಾಗಿದೆ. ಇವರು ಕೊಲ್ಲಿ ರಾಷ್ಟ್ರದ ಓಮನ್ ದೇಶದ ಮಸ್ಕತ್‌ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು. ಇವರ ಸಹೋದರ ಸಂತೋಷ್ ಕೂಡ ಮಸ್ಕತ್‌ನಲ್ಲೇ […]