ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ‌ ಜ್ಞಾನೇಂದ್ರ ಭೇಟಿ

Wednesday, November 23rd, 2022
Araga-Jnanedra-padil

ಮಂಗಳೂರು : ನಗರದ ನಾಗುರಿಯಲ್ಲಿ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ‌ ಜ್ಞಾನೇಂದ್ರ ಅವರು‌ ನವೆಂಬರ್ 23ರ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಶಾಸಕ ಡಾ. ವೈ. ಭರತ್ ಶೆಟ್ಟಿ, ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್, ಜಿಲ್ಲಾಧಿಕಾರಿ ರವಿಕುಮಾರ್‌, ಡಿಸಿಪಿ ಅನ್ಶು ಕುಮಾರ್, ದಿನೇಶ್, ಎಸಿಪಿ ಪಿ.ಎ. ಹೆಗ್ಡೆ ಮತ್ತಿತರರು ಈ ವೇಳೆ ಹಾಜರಿದ್ದರು. ಸ್ಥಳ ಪರಿಶೀಲನೆ ಬಳಿಕ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡ […]

ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿಗೆ ಗುಂಡು, ಬಂಧನ

Tuesday, August 16th, 2022
Zabiullah

ಶಿವಮೊಗ್ಗ : ವೀರ ಸಾವರ್ಕರ್ ಫೋಟೋ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಿದ್ದ ಪೊಲೀಸರು, ಇದೀಗ ಪ್ರಕರಣದ ಪ್ರಮುಖ ಆರೋಪಿಯನ್ನು ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗದ ಮಾರ್ನಾಮಿಬೈಲ್​ನ ನಿವಾಸಿ ಮೊಹಮ್ಮದ್ ಜಬೀವುಲ್ಲಾನನ್ನು ಪೊಲೀಸರು ಇಂದು ಮಂಗಳವಾರ ನಸುಕಿನ ಜಾವ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಮೇಲೆ ಚಾಕುವಿನಿಂದ ಜಬೀವುಲ್ಲಾ ಹಲ್ಲೆ ಮಾಡಲು ಯತ್ನಿಸಿದ ವೇಳೆ ಪೊಲೀಸರು ಕಾಲಿಗೆ ಗುಂಡೇಟು ತಗುಲಿಸಿ ಬಂಧಿಸಿದ್ದಾರೆ. ಎರಡು ಕೋಮಿನ […]

ಮತಾಂತರ ಕಾಯ್ದೆಗೆ ವಿರೋಧ ಅನಗತ್ಯ : ಗೃಹ ಸಚಿವ

Saturday, December 25th, 2021
Araga-Jnanedra

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ಕಾರ್ಯಕ್ರಮವೊಂದಕ್ಕೆ ಭೇಟಿ ನೀಡಿದ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ  ಶನಿವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಮತಾಂತರ ಕಾಯ್ದೆ ವಿಧಾನ ಸಭೆಯಲ್ಲಿ ಪಾಸ್ ಆಗಿದೆ. ನಾವೆಲ್ಲರೂ ಪಕ್ಷ ಮೀರಿ ಈ ಬಗ್ಗೆ ಯೋಚನೆ ಮಾಡಬೇಕು. ನಾವು ಮತಾಂತರ ಕಾಯ್ದೆ ಏಕೆ ತಂದೆವು ಎಂದು ಯೋಚಿಸಬೇಕು.ಇದನ್ನು ನಿವಾರಿಸಲು ನಾವು ಈ ಕಾಯ್ದೆ ತಂದಿದ್ದೇವೆ. ಇದಕ್ಕೆ ವಿರೋಧ ಅನಗತ್ಯ ಎಂದರು. ಮತಾಂತರ ನಿಷೇಧ ವಿಧೇಯಕಕ್ಕೆ ಆಕ್ಷೇಪಣೆಗಳು ಸಹಜ. ಮುಂದಿನ […]

ವಿಪಕ್ಷಗಳ ಗದ್ದಲದ ನಡುವೆಯೇ ಮತಾಂತರ ತಡೆ ವಿಧೇಯಕ ಅಂಗೀಕಾರ

Thursday, December 23rd, 2021
Conversion-bill

ಬೆಳಗಾವಿ : ಎರಡು ದಿನಗಳ ವಾದ-ವಿವಾದಗಳ ಬಳಿಕ ಇಂದು ಸುದೀರ್ಘವಾಗಿ ನಡೆದ ಚರ್ಚೆಯಲ್ಲಿ  ಮತಾಂತರ ತಡೆ ವಿಧೇಯಕ ಅಂಗೀಕಾರ ಆಗಿದೆ. 2016ರಲ್ಲಿ ಕಾನೂನು ಆಯೋಗ ಸಿದ್ಧಪಡಿಸಿದ್ದ ಮತಾಂತರ ನಿಷೇಧ ವಿಧೇಯಕದ ಕರಡು ಪ್ರತಿಗೆ ಅಂದಿನ ಕಾನೂನು ಸಚಿವ ಟಿ.ಬಿ. ಜಯಚಂದ್ರ ಒಪ್ಪಿಗೆ ನೀಡಿದ್ದನ್ನು ಬಿಜೆಪಿ ಪ್ರದರ್ಶಿಸಿತು. ಅಷ್ಟೇ ಅಲ್ಲ, ಆ ಪ್ರತಿಗೆ ಅಂದಿನ ಸಿಎಂ ಸಿದ್ದರಾಮಯ್ಯ ಕರಡು ಪ್ರತಿ ಒಪ್ಪಿ ಕ್ಯಾಬಿನೆಟ್ಗೆ ಕಡತ ಮಂಡಿಸುವಂತೆ ಸಹಿ ಮಾಡಿದ್ದರ ಬಗ್ಗೆ ಸಚಿವ ಮಾಧುಸ್ವಾಮಿ ಹೇಳುತ್ತಿದ್ದಂತೆ, ಇದಕ್ಕೆ ಉತ್ತರಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ಕಕ್ಕಾಬಿಕ್ಕಿಯಾದ […]