ಕರಾವಳಿ ಕರ್ನಾಟಕದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ

Friday, September 29th, 2023
ಕರಾವಳಿ ಕರ್ನಾಟಕದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ

ಮಂಗಳೂರು : ದ.ಕ. ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಮಳೆ ಮುಂದುವರಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಶುಕ್ರವಾರವೂ ಮುಂದುವರಿದಿದೆ. ಬೆಳಗ್ಗೆ ಎಡೆಬಿಡದೆ ಮಳೆ ಸುರಿದಿತ್ತು. ಮಧ್ಯಾಹ್ನದ ಬಳಿಕ ಆಗಾಗ ಮಳೆ ಕಾಣಿಸಿಕೊಳ್ಳುತ್ತಾ ಇತ್ತು. ದಿನವಿಡೀ ಮೋಡ ಮುಸುಕಿದ ವಾತಾವರಣ ಹಾಗೆಯೇ ಮುಂದುವರಿದಿದೆ. ಶುಕ್ರವಾರ ಬೆಳಗ್ಗಿನ ವರೆಗೆ ಜಿಲ್ಲೆಯ ಸುಳ್ಯದಲ್ಲಿ ಗರಿಷ್ಠ 44.3 ಮಿಲಿ ಮೀಟರ್ ಮಳೆ ದಾಖಲಾಗಿದೆ. […]

ದ.ಕ. ಜಿಲ್ಲೆಯಲ್ಲಿ ಜುಲೈ 19 ರಂದು ರೆಡ್ ಅಲರ್ಟ್, 20ರಿಂದ 22ರವರೆಗೆ ಆರೆಂಜ್ ಅಲರ್ಟ್

Sunday, July 18th, 2021
Mangalore Rain

ಮಂಗಳೂರು :  ಭಾರತೀಯ ಹವಾಮಾನ ಇಲಾಖೆಯು ಜುಲೈ 19 ರಂದು  ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮತ್ತು ಜು.20ರಿಂದ 22ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಬಂಗಾಳ ಕೊಲ್ಲಿಯ ಉಪ ಸಾಗರದಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ರವಿವಾರವೂ ದ.ಕ. ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಬಾರಿ ಮಳೆ ಇರಲಿದೆ  ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಹಾಗೂ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಆರೆಂಜ್‌‌ ಅಲರ್ಟ್, ಜಲಾವೃತ್ತ ಪ್ರದೇಶಗಳಲ್ಲಿ ಕೊಂಚ ನೀರು ಇಳಿಕೆ

Tuesday, September 22nd, 2020
Rain

ಮಂಗಳೂರು : ಜಿಲ್ಲೆಯಲ್ಲಿ ನೈರುತ್ಯ ಮಾರುತ ಮಳೆ ನಿರಂತರವಾಗಿ ಸುರಿಯುತ್ತಿದೆ. ಆದರೆ, ಮಂಗಳವಾರ ಮಳೆಯ ತೀವ್ರತೆ ಮಾತ್ರ ಕಡಿಮೆಯಾಗಿದ್ದು ಜಲಾವೃತ್ತ ಪ್ರದೇಶಗಳಲ್ಲಿ ನೀರು ಇಳಿಕೆಯಾಗಿದೆ. ಬೆಳ್ತಂಗಡಿ ಸೇರಿದಂತೆ ಕಡಬ ಹಾಗೂ ಸುಳ್ಯ ತಾಲೂಕಿನಲ್ಲಿ ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ಪುತ್ತೂರು ಹಾಗೂ ವಿಟ್ಲದಲ್ಲಿ ಮಳೆ ಮುಂದುವರೆದಿದೆ. ನಗರದ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಈ ನಡುವೆ ಭಾರಿ ಮಳೆಯಾಗುತ್ತಿದೆ. ಮುಂಜಾನೆ ವೇಳೆ ಸ್ವಲ್ಪ ಹಾಗೂ ಸಾಧಾರಣ ಮಳೆಯಾಗಿದ್ದು, ಜಿಲ್ಲೆಯಲ್ಲಿ ಆರೆಂಜ್‌‌ ಅಲರ್ಟ್‌ ಘೋಷಿಸಲಾಗಿದೆ. ಫಾಲ್ಗುಣಿ, ನಂದಿನಿ […]

ದಕ್ಷಿಣ ಕನ್ನಡದಲ್ಲಿ ಇನ್ನೆರಡು ದಿನ ಭಾರಿ ಮಳೆ : ಆರೆಂಜ್ ಅಲರ್ಟ್ ಘೋಷಣೆ

Wednesday, September 4th, 2019
orenge-alert

ಮಂಗಳೂರು : ಕರಾವಳಿಯಲ್ಲಿ ಸೆ. 4 ರ ಬುಧವಾರ ಉತ್ತಮ ಮಳೆ ಸುರಿದಿದ್ದು, ಇನ್ನೆರಡು ದಿನ ಮಳೆ ತೀವ್ರವಾಗಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ಸುರಿದ ಮಳೆ ಹಲವೆಡೆ ಹಾನಿ ಉಂಟು ಮಾಡಿದ್ದು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಿಂದ ಚಾರ್ಮಾಡಿ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಇನ್ನು ಇದರೊಂದಿಗೆ ಸಮುದ್ರದ ಅಬ್ಬರವೂ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಸೆ.2 ರಿಂದಲೇ ನಾಲ್ಕು ದಿನಗಳವರೆಗೆ ಅರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಅಲರ್ಟ್ ಗುರುವಾರದವರೆಗೆ ಘೋಷಿಸಲಾಗಿದ್ದರೂ, […]