ಕೋವಿಡ್ – 19 ರೋಗಿಗಳ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ನೋಂದಣಿ ಮಾಡಲು ಮನವಿ
Tuesday, May 25th, 2021ಬೆಂಗಳೂರು : ಕೋವಿಡ್ ಸಾಂಕ್ರಾಮಿಕ ರೋಗ ದಿನ ದಿನಕ್ಕೂ ಉಲ್ಬಣಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವುದು ಆರೋಗ್ಯ ಸೇವಾಕರ್ತರ ಬಹು ಮುಖ್ಯ ಹೊಣೆಗಾರಿಕೆಯಾಗಿರುತ್ತದೆ. ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳು ಜೊತೆಗೂಡಿ ಈ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಬೇಕಾಗಿದೆ. ಕೋವಿಡ್ – 19ರಿಂದ ಬಳಲುತ್ತಿರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವುದು ಅತ್ಯಂತ ಅವಶ್ಯಕವಾಗಿದೆ. ರಾಜ್ಯದಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನೊಂದಿಗೆ ನೋಂದಾವಣಿ ಮಾಡಿಕೊಳ್ಳಬೇಕೆಂದು ಈ ಮೂಲಕ ಎಲ್ಲಾ […]