ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪ್ರಕರಣ : ಮಂಗಳೂರಿನ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಆದಿತ್ಯ ರಾವ್
Wednesday, January 22nd, 2020ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ವೊಂದರಲ್ಲಿ ಸ್ಫೋಟಕ ಇರಿಸಿದ್ದ ಪ್ರಕರಣದ ಪ್ರಮುಖ ಆರೋಪಿ ಮಣಿಪಾಲದ ಆದಿತ್ಯ ರಾವ್, ಮಂಗಳೂರಿನ ಹೊಟೇಲ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ವಿಷಯ ಬಹಿರಂಗವಾಗಿದೆ. ಆರೋಪಿ ಆದಿತ್ಯ ರಾವ್ ಇಂದು ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಆರೋಪಿಯು ನಗರದ ಬಲ್ಮಠದ ಹೋಟೆಲ್‌ವೊಂದರಲ್ಲಿ ಒಂದು ತಿಂಗಳು ಕೆಲಸ ಮಾಡಿದ್ದಾನೆ. ಹೋಟೆಲ್‌ನ ಬಿಲ್ಲಿಂಗ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆರೋಪಿ, ಅಚ್ಚುಕಟ್ಟಾಗಿಯೇ ಕೆಲಸ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಯು ಕೆಲಸಕ್ಕೆ ಬರುವಾಗ ಬ್ಯಾಗ್‌ವೊಂದನ್ನು ಸದಾ ಹಿಡಿಕೊಂಡು ಬರುತ್ತಿದ್ದ. […]